ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಶಾಮನೂರು ಶಿವಶಂಕರಪ್ಪ ಒಲವು, ಕೆಪಿಸಿಸಿಗೆ ಅರ್ಜಿ ಸಲ್ಲಿಕೆ

ಇದೀಗ 91ನೇ ವರ್ಷದಲ್ಲಿರುವ ಅವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದ್ದು, ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಶಾಮನೂರು ಶಿವಶಂಕರಪ್ಪ ಒಲವು, ಕೆಪಿಸಿಸಿಗೆ ಅರ್ಜಿ ಸಲ್ಲಿಕೆ
ಶಾಮನೂರು ಶಿವಶಂಕರಪ್ಪ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 22, 2022 | 11:30 AM

ದಾವಣಗೆರೆ: ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮತ್ತೊಂದು ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಇದೀಗ 91ನೇ ವರ್ಷದಲ್ಲಿರುವ ಅವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದ್ದು, ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಈವರೆಗೆ ಒಮ್ಮೆ ಸಂಸದರು ಹಾಗೂ ಐದು ಬಾರಿ ಶಾಸಕರಾಗಿ ಅವರು ಕಾರ್ಯನಿರ್ವಹಿಸಿದ್ದಾರೆ.

ಈ ಮೊದಲು ದಾವಣಗೆರೆ ದಕ್ಷಿಣ ಕ್ಷೇತ್ರವೆಂದರೆ ಅದು ಶಾಮನೂರು ಶಿವಶಂಕರಪ್ಪ ಅವರಿಗೇ ಮೀಸಲು ಎಂದು ಹೇಳಲಾಗುತ್ತಿತ್ತು. ಕಾಂಗ್ರೆಸ್​ನಲ್ಲಿ ಅವರಿಗೆ ಯಾವುದೇ ಪ್ರತಿಸ್ಪರ್ಧಿಗಳು ಇರಲಿಲ್ಲ ಎನ್ನುವ ಪರಿಸ್ಥಿತಿ ಇತ್ತು. ಆದರೆ ಈ ವರ್ಷ ಮಾತ್ರ ಶಾಮನೂರು ಅವರಿಗೆ ಅವರದ್ದೇ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ. ಇದು ಹಿರಿಯ ನಾಯಕನಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಸಾದಿಕ್ ಪೈಲ್ವಾನ್ ಎಂಬ ಹಿರಿಯ ಕಾಂಗ್ರೆಸ್ ಮುಖಂಡ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಟಿಕೆಟ್​​ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಇಷ್ಟುದಿನ ಶಾಮನೂರು ಸ್ಪರ್ಧಿಸುತ್ತಿದ್ದ ಕ್ಷೇತ್ರದಲ್ಲಿಯೇ ಅವರು ಕಾಂಗ್ರೆಸ್​ನ ಟಿಕೆಟ್ ಕೇಳಿರುವುದು ಹೊಸ ಬೆಳವಣಿಗೆ ಎನಿಸಿದೆ. ಶಾಮನೂರು ಅವರಿಗೆ ವಯಸ್ಸಾಗಿದೆ ಎಂಬ ವಾದ ಇಟ್ಟುಕೊಂಡು ಟಿಕೇಟ್ ಕೇಳಲು ಅವರು ಮುಂದಾಗಿದ್ದಾರೆ. ಇತ್ತೀಚಿಗೆ ಕಕ್ಕರಗೋಳ್ ರಸ್ತೆಯಲ್ಲಿ ಶಾಮನೂರು ಕುಟುಂಬದ ವಿರುದ್ಧ ಕೆಲ ಕಾಂಗ್ರೆಸ್ ಮುಖಂಡರು ಸಭೆ ಮಾಡಿ ಅಚ್ಚರಿ ಮೂಡಿಸಿದ್ದರು. ಈ ಹಿಂದಿನ ಚುನಾವಣೆಯಲ್ಲಿ ಇರುವ ಎಳು ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿತ್ತು.

ವೀರಶೈವ-ಲಿಂಗಾಯತ ರಾಷ್ಟ್ರೀಯ ಅಧಿವೇಶನಕ್ಕೆ ದಿನಾಂಕ ನಿಗದಿ

ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ಡಿ 24 ರಿಂದ 26ರ ವರೆಗೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 23ನೇ ಅಧಿವೇಶನ ನಡೆಯಲಿದೆ. ಸಮಾವೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. 2011ರಲ್ಲಿ ಮೈಸೂರಿನಲ್ಲಿ ಮಹಾಸಭಾದ 22ನೇ ಅಧಿವೇಶನವು ಸುತ್ತೂರು ಶ್ರೀಗಳ ನೇತೃತ್ವದಲ್ಲಿ ಬಹಳ ಅದ್ಧೂರಿಯಾಗಿ ನಡೆದಿತ್ತು. ಈ ಹಿಂದೆ ಬೆಳಗಾವಿ, ಬೀದರ್‌ ನಗರಗಳಲ್ಲಿಯೂ ವಿಜೃಂಭಣೆಯಿಂದ ಅಧಿವೇಶನ ನಡೆದಿತ್ತು. ದಾವಣಗೆರೆಯಲ್ಲಿ ಇದೇ ಮೊದಲ ಬಾರಿಗೆ ಅಧಿವೇಶನವನ್ನು ಆಯೋಜಿಸಲಾಗಿದೆ.

ವಿಜೃಂಭಣೆ, ಅದ್ಧೂರಿ ಮತ್ತು ಯಶಸ್ವಿಯಾಗಿ ಅಧಿವೇಶನ ನಡೆಯಬೇಕಿದೆ ಎಂದು ಸಮುದಾಯದ ಮುಖಂಡರು ಬಯಸಿದ್ದಾರೆ. ಸ್ವಾಗತ, ವೇದಿಕೆ, ಊಟೋಪಚಾರ ಸೇರಿದಂತೆ ಆಗಬೇಕಿರುವ ಅತ್ಯಗತ್ಯ ಕೆಲಸಗಳ ನಿರ್ವಹಣೆಗಾಗಿ ಸಮಿತಿಗಳನ್ನು ರಚಿಸಿ, ಜವಾಬ್ದಾರಿ ಹಂಚಿಕೆ ಮಾಡಲು ಮುಂದಾಗಿದ್ದಾರೆ. ಅಧಿವೇಶನಕ್ಕೆ ಬಂದವರಿಗೆ ವಸತಿಗಾಗಿ ಹೋಟೆಲ್, ಕಾಲೇಜು, ಕ್ಯಾಂಪಸ್ ಇತ್ಯಾದಿ ಕಟ್ಟಡಗಳನ್ನು ಗುರುತಿಸಲಾಗುವುದು. ಎಂಬಿಎ ಕಾಲೇಜು ಮೈದಾನದಲ್ಲಿ ಕೃಷಿ, ಆಟೊಮೊಬೈಲ್ ಇತರೆ ವಸ್ತುಗಳ ಪ್ರದರ್ಶನಕ್ಕೂ ಅವಕಾಶ ಮಾಡಿಕೊಡಲಾಗುವುದು. ಅಧಿವೇಶನದ ಮೊದಲ ದಿನ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಅದ್ಧೂರಿ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿದೆ.

ಕೆಲ ವರ್ಷಗಳ ಹಿಂದೆ ವೀರಶೈವರು ಮತ್ತು ಲಿಂಗಾಯತರು ಬೇರೆ ಎಂಬ ಮಾತು ಕೇಳಿಬಂದಾಗ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ಪಕ್ಷಕ್ಕಿಂತಲೂ ಸಮಾಜ ಮೊದಲು ಎಂಬ ನಿಲುವು ತಳೆದರು. ವೀರಶೈವ- ಲಿಂಗಾಯತ ಒಂದೇ ಎಂಬ ಹೇಳಿಕೆಗೆ ಗಟ್ಟಿಯಾಗಿ ನಿಂತಿದ್ದರು. ಅವರು ಅಂದು ನಿಲುವು ಸಡಿಲಿಸಿದ್ದರೆ ವೀರಶೈವರು ಮತ್ತು ಲಿಂಗಾಯತರು ಪ್ರತ್ಯೇಕ ಸಮುದಾಯ ಎಂದಾಗುತ್ತಿತ್ತು. ರಾಜಕೀಯವಾಗಿಯೂ ಹಲವು ಬೆಳವಣಿಗೆಗಳಿಗೆ ಇದು ಕಾರಣವಾಗುತ್ತಿತ್ತು.

ಶಾಮನೂರು ಶಿವಶಂಕರಪ್ಪ ಅವರು ತಮ್ಮ ಹೇಳಿಕೆಗೆ ಗಟ್ಟಿಯಾಗಿ ನಿಂತಿದ್ದನ್ನು ಕಂಡು ಅನೇಕರು ಅಕ್ಷರಶಃ ದಂಗಾಗಿ ಹೋದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಹ ಸಮಾಜದ ವಿಷಯವಾಗಿ ಶಾಮನೂರು ಶಿವಶಂಕರಪ್ಪ ಅವರ ನಿರ್ಧಾರ, ನಿರ್ಣಯಕ್ಕೆ ಬೆಂಬಲ ಇದೆ ಎಂದು ಸಹಕರಿಸಿದ್ದರು. ನಂತರದ ದಿನಗಳಲ್ಲಿ ಲಿಂಗಾಯತ ಸ್ವಾಮೀಜಿಗಳು ಅಂದಿನ ಸಿಎಂ ಸಿದ್ದರಾಮಯ್ಯ ಅವರನ್ನು ‘ಸಮಾಜ ಒಡೆಯಲು ಯತ್ನಿಸಿದ ಖಳನಾಯಕ’ ಎಂದು ಹೇಳುತ್ತಿದ್ದರು. ಈಗ ಮತ್ತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯು ಹತ್ತಿರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿಯೇ ಮಹಾಸಭಾ ಆಯೋಜಿಸಿರುವ ಮೂರು ದಿನಗಳ ಅಧಿವೇಶನಕ್ಕೆ ವಿಶೇಷ ಮಹತ್ವ ಬಂದಿದೆ.

ಉಪಪಂಗಡಗಳು ಹೋಗಬೇಕು: ಶಾಮನೂರು

ಅಧಿವೇಶನ ಕುರಿತು ‘ಟಿವಿ9’ಗೆ ಮಾಹಿತಿ ನೀಡಿದ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಘಟಕದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ‘ನಮ್ಮಲ್ಲಿರುವ ಉಪಪಂಗಡಗಳು ಹೋಗಬೇಕು. ನಾವು ಎಲ್ಲರೂ ಒಂದು ಎಂದು ಆಗಬೇಕು. ನಮ್ಮ ಜನಸಂಖ್ಯೆ 2 ಕೋಟಿ ಇದೆ. ಹೆಣ್ಣು-ಗಂಡು ಕೊಡೋದು, ತೆಗೆದುಕೊಳ್ಳೋದು ಮಾಡಬೇಕು. ಸಮುದಾಯದಲ್ಲಿ ಒಗ್ಗಟ್ಟು ಬರುತ್ತದೆ’ ಎಂದು ಅಭಿಪ್ರಾಯಪಟ್ಟರು.

Published On - 11:30 am, Tue, 22 November 22

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ