ದಾವಣಗೆರೆ ಉಪಚುನಾವಣೆ: 23 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ, ಕಾಂಗ್ರೆಸ್​ಗೆ ಟೆನ್ಷನ್!

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಂಡಾಯದ ಬಿಸಿ ಜೋರಾಗಿದೆ. 23 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿರುವುದು ಕಾಂಗ್ರೆಸ್ ಪಾಲಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಅಲ್ಪಸಂಖ್ಯಾತ ಮತಗಳು ಚದುರಿಹೋಗುವ ಭೀತಿಯಲ್ಲಿ ‘ಕೈ’ ನಾಯಕರು ಹೈರಾಣಾಗಿದ್ದಾರೆ. ದಾವಣಗೆರೆ ಕೋಟೆಯಲ್ಲಿ ಶಾಮನೂರು ಕುಟುಂಬಕ್ಕೆ ಎದುರಾಗಿರುವ ಈ ಸವಾಲಿನ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ದಾವಣಗೆರೆ ಉಪಚುನಾವಣೆ: 23 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ, ಕಾಂಗ್ರೆಸ್​ಗೆ ಟೆನ್ಷನ್!
ದಾವಣಗೆರೆ ಉಪಚುನಾವಣೆ: 23ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ, ಕಾಂಗ್ರೆಸ್​ಗೆ ಟೆನ್ಷನ್!
Image Credit source: tv9
Edited By:

Updated on: Mar 25, 2026 | 7:58 AM

ದಾವಣಗೆರೆ, ಮಾರ್ಚ್​ 25: ದಾವಣಗೆರೆ (Davanagere) ದಕ್ಷಿಣ ಕ್ಷೇತ್ರದ ಉಪಚುನಾವಣೆ ಹೈವೋಲ್ಟೇಜ್ ಪಡೆದುಕೊಂಡಿದೆ. ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ವಿರುದ್ಧ ತೊಡೆತಟ್ಟಿ ಕಣಕ್ಕಿಳಿದಿರುವ ಸಾದಿಕ್ ಪೈಲ್ವಾನ್ ನಾಮಪತ್ರ ತಿರಸ್ಕೃತವಾಗಿದೆ. ರಾಷ್ಟ್ರೀಯ ಪಕ್ಷಗಳ ಹೆಸರಿನಲ್ಲಿ‌ ನಾಮಪತ್ರವನ್ನು ಸಲ್ಲಿಸಿ ಬಿ ಫಾರಂ ಒದಗಿಸದ್ದಕ್ಕಾಗಿ ನಾಮಪತ್ರ ತಿರಸ್ಕಾರಗೊಂಡಿದೆ. ಆದರೆ, ಪಕ್ಷೇತರ ಅಭ್ಯರ್ಥಿಯಾಗಿ ಪೈಲ್ವಾನ್‌ ಸಲ್ಲಿಸಿದ ನಾಮಪತ್ರ ಊರ್ಜಿತವಾಗಿದೆ. ಕ್ಷೇತ್ರದಲ್ಲಿ 45 ನಾಮಪತ್ರ ಸಲ್ಲಿಕೆ ಆಗಿತ್ತು. ಆ ಪೈಕಿ ಮೂವರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿದೆ. 42 ನಾಮಪತ್ರಗಳು ಮಾತ್ರ ಮಾನ್ಯವಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರೇ ನಿರ್ಣಾಯಕ. ಇಲ್ಲಿ 64,246 ಮುಸ್ಲಿಂ ಸಮುದಾಯದ ಮತದಾರರಿದ್ದಾರೆ. ಆದರೆ ಹೈಕಮಾಂಡ್ ಸಮರ್ಥ್​ ಶಾಮನೂರು ಅವರನ್ನು ಅಭ್ಯರ್ಥಿ ಮಾಡಿದೆ. ಸಮರ್ಥ್ ಜೊತೆಗೆ 36 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು ಅಭ್ಯರ್ಥಿಗಳಲ್ಲಿ 23 ಮಂದಿ ಮುಸ್ಲಿಂ ಸಮುದಾಯದವರೇ ಇದ್ದಾರೆ. ಕಾಂಗ್ರೆಸ್​ಗೆ ಇದು ನುಂಗಲಾರದ ಬಿಸಿತುಪ್ಪವಾಗಿದೆ.

ಕಾಂಗ್ರೆಸ್​ಗೆ ಪಾಠ ಕಲಿಸಲು ಮುಂದಾದ್ರಾ ಮುಸ್ಲಿಮರು?

ದಾವಣೆಗರೆಯಲ್ಲಿ ಮುಸ್ಲಿಂ ಮತದಾರರು ಕಾಂಗ್ರೆಸ್​ಗೆ ಪಾಠ ಕಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ನಾಮಪತ್ರ ವಾಪಸ್ ಪಡೆಯುವುದಕ್ಕೆ ಮಾರ್ಚ್ 26 ಕೊನೆ ದಿನ. ಇತ್ತ 22 ಅಭ್ಯರ್ಥಿಗಳು ನಾಮಿನೇಷನ್ ವಾಪಸ್ ಪಡೆದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್​ಗೆ ಬೆಂಬಲ ಕೊಡುವ ಸಾಧ್ಯತೆ ಇದೆ. ಟಿಕೆಟ್ ನಿರಾಕರಿಸಿರುವ ಕಾಂಗ್ರೆಸ್ಸಿಗೆ ಬಿಸಿ ಮುಟ್ಟಿಸಲು ಮುಂದಾಗುವ ಸಾಧ್ಯತೆ ಇದೆ. ಅಲ್ಪಸಂಖ್ಯಾತರು ಕಾಂಗ್ರೆಸ್ ಪಾಲಿನ ನಿರ್ಣಾಯಕ ಮತದಾರರಾಗಿದ್ದು ಕೈ ನಾಯಕರು ಮನವೊಲಿಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ಎಲ್ಲ ಸರಿಹೋಗುತ್ತೆ ಎಂದ ಡಿಕೆಶಿ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯದ ಬಗ್ಗೆ ಡಿಸಿಎಂ ಡಿಕೆ ಪ್ರತಿಕ್ರಿಯಿಸಿದ್ದು, ನಾಮಪತ್ರ ಹಾಕಿದವರೆಲ್ಲ ನಮ್ಮವರೇ. ಎಲ್ಲವೂ ಸರಿಹೋಗಲಿದೆ ಎಂದಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಹೈಲೈಟ್ಸ್

  • ಒಟ್ಟು ಮುಸ್ಲಿಂ ಮತದಾರರು: 64,246 (ಕ್ಷೇತ್ರದ ನಿರ್ಣಾಯಕ).
  • ಕಣದಲ್ಲಿರುವ ಮುಸ್ಲಿಂ ಅಭ್ಯರ್ಥಿಗಳು: 23
  • ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ: ಮಾರ್ಚ್ 26
  • ಕಾಂಗ್ರೆಸ್ ತಂತ್ರ: ಅಬ್ದುಲ್ ಜಬ್ಬಾರ್ ಅವರ ಮನವೊಲಿಕೆ ಮತ್ತು ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಸಭೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದು ಅಬ್ದುಲ್ ಜಬ್ಬಾರ್ ಪ್ರತಿಕ್ರಿಯಿಸಿ, ನಮ್ಮ ವರಿಷ್ಠರ ನಿರ್ಧಾರವನ್ನು ಗೌರವಿಸಬೇಕು ಎಂದರು. ಆ ಮೂಲಕ, ಕಾಂಗ್ರೆಸ್ ವಿರುದ್ಧ ಹೋಗಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

ಒಟ್ಟಿನಲ್ಲಿ, ದಾವಣೆಗೆರೆಯಲ್ಲಿ ಬಂಡಾಯದ ಬೆಂಕಿ ಕಾಂಗ್ರೆಸ್​ಗೆ ಟೆನ್ಷನ್ ತಂದಿಟ್ಟಿದ್ದು, ಈ ಬಗ್ಗೆ ವಿಧಾನಸೌಧದಲ್ಲಿ ಕಾಂಗ್ರೆಸ್​​​ನ ಮುಸ್ಲಿಂ ನಾಯಕರು ಮಂಗಳವಾರ ಸಭೆ ನಡೆಸಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್, ಶಾಸಕರಾದ ತನ್ವೀರ್ ಸೇಠ್, ರಿಜ್ವಾನ್ ಅರ್ಷದ್ ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ನಾಯಕರ ಮನವೊಲಿಕೆ, ಮತಗಳು ಚದುರಿಹೋಗದಂತೆ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ 2 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಬಾಗಲಕೋಟೆ ಉಪಸಮರದಲ್ಲಿ ಮಲ್ಲಿಕಾರ್ಜುನ ಮೇಟಿ, ವೀರಣ್ಣ ಚರಂತಿ ಮಠ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು 26 ನಾಮಪತ್ರ ಸಲ್ಲಿಸಿದ್ದಾರೆ. ಈ ಪೈಕಿ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು ಇಬ್ಬರು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 am, Wed, 25 March 26

Follow Us