AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ನಡೆ ಗ್ರಾಮಗಳ ಕಡೆ: ಜನ ಸೇವೆಯೇ ಜನಾರ್ಧನ ಸೇವೆಗೆ ವಿಶೇಷ ಅರ್ಥ ಕೊಟ್ಟ CEO

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ "ಅಧಿಕಾರಿಗಳ ನಡೆ ಗ್ರಾಮಗಳ ಕಡೆ" ಎಂಬ ವಿನೂತನ ಕಾರ್ಯಕ್ರಮದ ಮೂಲಕ ಜನರ ಗಮನ ಸೆಳೆದಿದ್ದಾರೆ. ಬೆಳಗ್ಗೆ ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ನೀಡುತ್ತಿದ್ದಾರೆ. ಈ ಮೂಲಕ ಆಡಳಿತವನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ.

ಅಧಿಕಾರಿಗಳ ನಡೆ ಗ್ರಾಮಗಳ ಕಡೆ: ಜನ ಸೇವೆಯೇ ಜನಾರ್ಧನ ಸೇವೆಗೆ ವಿಶೇಷ ಅರ್ಥ ಕೊಟ್ಟ CEO
ಗಿತ್ತೆ ಮಾಧವ್ ವಿಠಲ್ ರಾವ್
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 28, 2025 | 6:42 PM

Share

ದಾವಣಗೆರೆ, ಡಿಸೆಂಬರ್​ 28: ಸರ್ಕಾರಿ ಅಧಿಕಾರಿಗಳು (Government officer) ಅಂದರೆ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹೋಗಿ, ಸಂಜೆ 5 ಗಂಟೆಗೆ ಮನೆಗೆ ಹೋಗುತ್ತಾರೆ ಎನ್ನುವ ಮಾತು ಎಲ್ಲೆಡೆ ಕೇಳಿಬರತ್ತೆ. ಆದರೆ ಇಲ್ಲೊಬ್ಬರು ಅಧಿಕಾರಿ ಬೆಳ್ಳಂಬೆಳಗ್ಗೆ ಎದ್ದು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲ ಗ್ರಾಮದ ವೀಕ್ಷಣೆ ಬಳಿಕ ಬೆಳಗ್ಗೆ 10 ಗಂಟೆಗೆ ಕಚೇರಿಗೆ ತೆರಳಿ ಕಾರ್ಯನಿರ್ವಹಿಸುತ್ತಾರೆ.

ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಲ್ ರಾವ್, ಅಭಿವೃದ್ಧಿಗೆ ಹೊಸ ಭಾಷೆ ಬರೆಯಲು ಮುಂದಾಗಿದ್ಧಾರೆ. ಅಧಿಕಾರಿಗಳ ಬೆಳಗಿನ ನಡೆ, ಗ್ರಾಮಗಳ ಕಡೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳ್ಳಂಬೆಳಗ್ಗೆ ಗ್ರಾಮಗಳಿಗೆ, ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುತ್ತಿದ್ದಾರೆ.

ಇದನ್ನೂ ಓದಿ: ವಿವಿಧ ಕೇಸ್​​ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್​: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ

ದಿನಕ್ಕೆ ಎರಡರಿಂದ ಮೂರು ಪಂಚಾಯಿತಿಗಳಿಗೆ ಭೇಟಿ ನೀಡಿ ಅಧ್ಯಕ್ಷರು, ಸದಸ್ಯರ ಜೊತೆ ಔಪಚಾರಿಕ ಸಭೆ ನಡೆಸಿ ಪಂಚಾಯಿತಿಯ ಕುಂದು, ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಗ್ರಂಥಾಲಯಕ್ಕೂ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ.

ಇನ್ನು ಸ್ವಚ್ಛತಾ ಕಾರ್ಯ ಹೇಗೆ ನಡೆಯುತ್ತಿದೆ, ಪ್ರತಿನಿತ್ಯ ತ್ಯಾಜ್ಯ ವಿಲೇವಾರಿ ವಾಹನ ಬರುತ್ತಿದೆಯಾ, ಗ್ರಾಮದಲ್ಲಿ ಏನೇನು ಸಮಸ್ಯೆ ಇದೆ ಅಂತ ಗ್ರಾಮಸ್ಥರ ಬಳಿ ಮಾಹಿತಿ ಪಡೆದುಕೊಂಡು ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಕಾರ್ಯ ಕೂಡ ಮಾಡುತ್ತಿದ್ದಾರೆ.

ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ್ ವಿಠಲ್ ರಾವ್ ಈಗಾಗಲೇ ಮಾಯಕೊಂಡ, ಅಣಜಿ, ನರಗನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದು, ನಿತ್ಯ ಬೆಳಗ್ಗೆ 6 ಗಂಟೆಯಿಂದ‌ ಅವರ ದಿನಚರಿ ಶುರುವಾಗುತ್ತದೆ. ಗ್ರಾಮ ಪಂಚಾಯತಿಗಳನ್ನು ಭೇಟಿ ಮಾಡೋದು, ಸರ್ಕಾರಿ ವಸತಿ ಶಾಲೆ ಹಾಸ್ಟೆಲ್​ಗಳಿಗೆ ಭೇಟಿ ನೀಡಿ ಅವರ ಜೊತೆಯೇ ಊಟ, ಉಪಹಾರ ಮಾಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ, ಹಲವು ಗ್ರಾಮಗಳಿಗೆ ಕೇಳಿಸಿದ ಸದ್ದು: ಬೆಚ್ಚಿಬಿದ್ದ ಜನ

ಯಾವ ದಿನ, ಯಾವ ಗ್ರಾಮಕ್ಕೆ ಹೋಗುತ್ತಾರೆ ಎನ್ನುವುದು ಮೊದಲೇ ನಿಗದಿಯಾಗಿರುವುದಿಲ್ಲ. ಬೆಳಗ್ಗೆ ಎದ್ದ ತಕ್ಷಣ ಸಿಇಒ ಅವರಿಗೆ ಹೋಗಬೇಕೆನಿಸಿದ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಜಿಲ್ಲಾ ಕೇಂದ್ರದಿಂದ ನೂರಾರು ದೂರದಲ್ಲಿರುವ ಗ್ರಾಮಕ್ಕೂ ಕೂಡ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಬಗೆಹರಿಸಲಿದ್ದಾರೆ. ಅಲ್ಲದೆ ಜನರು ಅಧಿಕಾರಿಗಳನ್ನು ಹುಡುಕಿ ಕಚೇರಿ ಅಲೆಯುವುದಲ್ಲ ಅಧಿಕಾರಿಗಳೇ ಜನರ ಬಳಿ ಹೋಗಬೇಕು ಎನ್ನುವ ಉದ್ದೇಶ ಇವರದ್ದಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ನಡೆ ಬಗ್ಗೆ ಜನರು ಸಾಕಷ್ಟು ಸಂತಸ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಮಟ್ಟದ ಓರ್ವ ಅಧಿಕಾರಿ ಹೀಗೆ ಗ್ರಾಮಗಳಿಗೆ ಭೇಟಿ ನೀಡಿದಾಗ ಸ್ಥಳೀಯ ಅಧಿಕಾರಿಗಳು ಮೈ ಚಳಿ ಬಿಟ್ಟು ಕೆಲಸ ಮಾಡುತ್ತಾರೆ. ಅಲ್ಲದೆ ಸಾಮಾನ್ಯ ಜನರಿಗೂ ಜಿಲ್ಲಾ ಮಟ್ಟದ ಅಧಿಕಾರಿ ಅಂದರೆ ಯಾರು, ಅವರ ಕಾರ್ಯ ಏನು ಅನ್ನೋದು ಗೊತ್ತಾಗುತ್ತದೆ. ಅಧಿಕಾರಿಗಳಿಗೂ ಗ್ರೌಂಡ್ ಲೆವೆಲ್ ಮಾಹಿತಿ ಲಭ್ಯ ಆಗುತ್ತದೆ. ಗಿತ್ತೆ ಮಾಧವ್ ವಿಠಲ್ ರಾವ್ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಇವರ ಕಾರ್ಯ ಇತರೆ ಅಧಿಕಾರಿಗಳಿಗೂ ಮಾದರಿ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ