AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಪಿ ಡಾ.ಪಿ.ರವೀಂದ್ರನಾಥ್ ರಾಜೀನಾಮೆಗೂ ನನಗೂ ಸಂಬಂಧ ಇಲ್ಲ: ಶಾಸಕ ರೇಣುಕಾಚಾರ್ಯ ಸ್ಪಷ್ಟನೆ

ಅಕ್ರಮವಾಗಿ ಜಮೀನು ಕಬಳಿಸಿ ಮನೆ ಕಟ್ಟಿರುವ ಆರೋಪ ಹಿನ್ನೆಲೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕಚೇರಿ ಮುಂದೆ ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರತಿಭಟನೆ ಮಾಡಲಾಗಿದೆ.

ಡಿಜಿಪಿ ಡಾ.ಪಿ.ರವೀಂದ್ರನಾಥ್ ರಾಜೀನಾಮೆಗೂ ನನಗೂ ಸಂಬಂಧ ಇಲ್ಲ: ಶಾಸಕ ರೇಣುಕಾಚಾರ್ಯ ಸ್ಪಷ್ಟನೆ
ಬಿಜೆಪಿ ಶಾಸಕ ರೇಣುಕಾಚಾರ್ಯ
TV9 Web
| Edited By: |

Updated on: May 12, 2022 | 1:38 PM

Share

ದಾವಣಗೆರೆ: ಡಿಜಿಪಿ ಡಾ.ಪಿ.ರವೀಂದ್ರನಾಥ್ ರಾಜೀನಾಮೆ ಹಿನ್ನೆಲೆ ರವೀಂದ್ರನಾಥ್ ರಾಜೀನಾಮೆ ಹಿಂದೆ ನನ್ನ ಕೈವಾಡ ಇಲ್ಲ. ರವೀಂದ್ರನಾಥ್ ರಾಜೀನಾಮೆಗೂ ನನಗೂ ಸಂಬಂಧ ಇಲ್ಲ. ನಾನು ಯಾವುದೇ ನಕಲಿ‌ ಜಾತಿ‌ ಪ್ರಮಾಣ ಪತ್ರ ಪಡೆದಿಲ್ಲ. ಡಿ.ಕೆ.ಶಿವಕುಮಾರ್​ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡ್ತಿದ್ದಾರೆ. ನಾನು ಬೇಡ ಜಂಗಮ ಎಸ್​ಸಿ ಜಾತಿ ಪ್ರಮಾಣಪತ್ರ ಪಡೆದಿಲ್ಲ. ಡಿಕೆಶಿ ಸುಳ್ಳು ಹೇಳಿದ್ರೆ ಸಿಎಂ ಆಗಬಹುದೆಂಬ ಭ್ರಮೆಯಲ್ಲಿದ್ದಾರೆ ಎಂದು ಹೊನ್ನಾಳಿಯಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ.

ಹಿರಿಯ ಐಪಿಎಸ್ ಅಧಿಕಾರಿ ಡಿಜಿಪಿ ರವೀಂದ್ರನಾಥ್ ರಾಜೀನಾಮೆ

ಹಿರಿಯ ಐಪಿಎಸ್ ಅಧಿಕಾರಿ ಡಿಜಿಪಿ ರವೀಂದ್ರನಾಥ್ ( DGP Ravindranath Resign) ರಾಜೀನಾಮೆ ಸಲ್ಲಿಸಿದ್ದಾರೆ. ಅವಧಿಪೂರ್ವ ವರ್ಗಾವಣೆ ಹಿನ್ನೆಲೆ ರಾಜೀನಾಮೆ ನೀಡಿದ್ದಾರೆ. ರವೀಂದ್ರನಾಥ್ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿಯಾಗಿದ್ದರು. ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಐಪಿಎಸ್ ಹುದ್ದೆಗೇರಿದ್ದ ಪ್ರಕರಣ ಸಂಬಂಧ ರವೀಂದ್ರನಾಥ್ ತನಿಖೆ ಆರಂಭಿಸಿದ್ದರು. ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯಗೆ ನೊಟೀಸ್ ನೀಡಿದ್ದ ಬಳಿಕ ರವೀಂದ್ರನಾಥ್ರನ್ನ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿತ್ತು. ಕರ್ನಾಟಕ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿತ್ತು. ಹೀಗಾಗಿ ಅವಧಿಪೂರ್ವ ವರ್ಗಾವಣೆ ಹಿನ್ನೆಲೆ ಡಿಜಿಪಿ ರವೀಂದ್ರನಾಥ್ ರಾಜೀನಾಮೆ ಸಲ್ಲಿಸಿದ್ದಾರೆ.

ಕೆಲ ಕಾರಣಗಳಿಂದ ನೊಂದು ನಾನು ಅತ್ಯಂತ ನೋವಿನಿಂದ ಈ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಕಲಿ‌ಜಾತಿ ಪ್ರಮಾಣ ಪತ್ರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದೆ. ಎಸ್.ಎಸ್ಟಿ ಕಾಯ್ದೆಯಡಿ ಪೊಲೀಸ್ ಸಿಬ್ಬಂದಿಗೆ ಭದ್ರತಾ ಸಮಿತಿ ರಚಿಸಲು‌ ಕೋರಿದ್ದೆ. ಆದರೆ ಸರ್ಕಾರ ನನ್ನ ಮನವಿಯನ್ನ ಪರಿಗಣಿಸಿಲ್ಲ. ಬದಲಾಗಿ ಕಿರುಕುಳ ನೀಡಲೆಂದೇ ವರ್ಗಾವಣೆ ಮಾಡಿದ್ದಾರೆ. ಇದಕ್ಕೆ ಬೇಸತ್ತು ನನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನಿರ್ಲಕ್ಷ್ಯತನ ಬೇಸರ ತಂದಿದೆ ಐಪಿಎಸ್ ಹುದ್ದೆಗೆ ಡಾ.ಪಿ.ರವೀಂದ್ರನಾಥ್ ಗುಡ್ ಬೈ ವಿಚಾರಕ್ಕೆ ಸಂಬಂಧಿಸಿ ಡಿಜಿಪಿ ಡಾ.ಪಿ.ರವೀಂದ್ರನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ನಾನು ಸಮರ ಸಾರಿದ್ದೆ. ಈ ಹಂತದಲ್ಲೇ ನನ್ನ ವರ್ಗಾವಣೆ ಮಾಡಿದ್ದು ಬೇಸರ ತಂದಿತ್ತು. ನಿವೃತ್ತ ಐಪಿಎಸ್‌ ಅಧಿಕಾರಿಯೊಬ್ಬರಿಗೆ ನೋಟಿಸ್ ನೀಡಿದ್ದೆ. ಅವರು ವಕೀಲರ ಮೂಲಕ 10 ದಿನ ಕಾಲಾವಕಾಶ ಕೇಳಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ನನ್ನನ್ನು ವರ್ಗಾವಣೆ ಮಾಡಿತ್ತು. ನನ್ನ ವರ್ಗಾವಣೆಯಲ್ಲಿ ಈ ಪ್ರಕರಣದ ಪಾತ್ರ ಇದೆ. ನನ್ನ ವರ್ಗಾವಣೆ ಬಗ್ಗೆ ಜನರಿಗೆ ತಪ್ಪು ಸಂದೇಶ ಹೋಗಬಾರದು. ಜವಾಬ್ದಾರಿಯುತ ಅಧಿಕಾರಿಯಾಗಿ ನಾನು ಮಾತನಾಡುತ್ತಿದ್ದೇನೆ. 1995ರಿಂದಲೇ ರಾಜ್ಯದಲ್ಲಿ ಎಸ್ಸಿ, ಎಸ್ಟಿ ಕಾಯ್ದೆ ಜಾರಿಯಲ್ಲಿದೆ. ಪೊಲೀಸ್ ಇಲಾಖೆಯಲ್ಲೂ ಕಾಯ್ದೆ ಜಾರಿಗೆ ಮನವಿ ಮಾಡಿದ್ದೆ. ಪದೇಪದೆ ಕೇಳಿದ್ರೂ ಸರ್ಕಾರದ ನಿರ್ಲಕ್ಷ್ಯತನ ಬೇಸರ ತಂದಿತ್ತು ಎಂದು ತರಬೇತಿ ವಿಭಾಗದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಸರ್ಕಾರದ ವಿರುದ್ಧ ಬೇಸರ ಹೊರ ಹಾಕಿದ್ದು ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ.

ಅಕ್ರಮವಾಗಿ ಜಮೀನು ಕಬಳಿಸಿ ಮನೆ ಕಟ್ಟಿರುವ ಆರೋಪ

ಅಕ್ರಮವಾಗಿ ಜಮೀನು ಕಬಳಿಸಿ ಮನೆ ಕಟ್ಟಿರುವ ಆರೋಪ ಹಿನ್ನೆಲೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕಚೇರಿ ಮುಂದೆ ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರತಿಭಟನೆ ಮಾಡಲಾಗಿದೆ. ಗೀತಾ, ಉದಯ ಚಂದ್ರಮ್ಮ ಎಂಬ ಕುಟುಂಬಸ್ಥರಿಂದ ಹೊನ್ನಾಳಿ ತಾಲೂಕು ಕಚೇರಿ ಮುಂದೆ 2 ಕುಟುಂಬಗಳು ಪ್ರತಿಭಟನೆ ಮಾಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
TV9 Web
TV9 Web

TV9 Kannada

Read More
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ