ಗಾಳಿಯಲ್ಲಿ ಗುಂಡು ಹಾರಿಸುವುದೇ ಡಿಕೆಶಿ ಕೆಲಸ: ಸಚಿವ ಭೈರತಿ ಬಸವರಾಜ್ ವಾಗ್ದಾಳಿ

| Updated By: preethi shettigar

Updated on: Jan 25, 2022 | 6:05 PM

ಗಾಳಿಯಲ್ಲಿ ಗುಂಡು ಹಾರಿಸುವುದೇ ಡಿಕೆಶಿ ಕೆಲಸ. ಏನೇ ಇದ್ದರೂ ಬಹಿರಂಗವಾಗಿ ಹೇಳಿಕೆ ನೀಡಬೇಕು. ಅದು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆದರೆ ಹೇಗೆ? ನಾವು ಮಾತ್ರ ಬಿಜೆಪಿಯನ್ನು ಬಿಟ್ಟು ಹೋಗುವುದಿಲ್ಲ. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ದಾವಣಗೆರೆಯಲ್ಲಿ ಸಚಿವ ಭೈರತಿ ಬಸವರಾಜ್ ಹೇಳಿಕೆ ನೀಡಿದ್ದಾರೆ.

ಗಾಳಿಯಲ್ಲಿ ಗುಂಡು ಹಾರಿಸುವುದೇ ಡಿಕೆಶಿ ಕೆಲಸ: ಸಚಿವ ಭೈರತಿ ಬಸವರಾಜ್ ವಾಗ್ದಾಳಿ
ಸಚಿವ ಭೈರತಿ ಬಸವರಾಜ್
Follow us on

ದಾವಣಗೆರೆ: ಏನೇ ಇದ್ದರೂ ಡಿ.ಕೆ. ಶಿವಕುಮಾರ್(​D.K.Shivakumar) ಸ್ಪಷ್ಟವಾಗಿ ಹೇಳಬೇಕು. ಸೂಕ್ತ ಸಮಯ ಬಂದಾಗ ಹೇಳುತ್ತೇನೆಂದು ಹೇಳಬಾರದು. ಗಾಳಿಯಲ್ಲಿ ಗುಂಡು ಹಾರಿಸುವುದೇ ಡಿಕೆಶಿ ಕೆಲಸ. ಏನೇ ಇದ್ದರೂ ಬಹಿರಂಗವಾಗಿ ಹೇಳಿಕೆ ನೀಡಬೇಕು. ಅದು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆದರೆ ಹೇಗೆ? ನಾವು ಮಾತ್ರ ಬಿಜೆಪಿಯನ್ನು ಬಿಟ್ಟು ಹೋಗುವುದಿಲ್ಲ. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ (Election)ಎದುರಿಸುತ್ತೇವೆ ಎಂದು ದಾವಣಗೆರೆಯಲ್ಲಿ ಸಚಿವ ಭೈರತಿ ಬಸವರಾಜ್(Byrathi Bommai) ಹೇಳಿಕೆ ನೀಡಿದ್ದಾರೆ.

ಸಂಪುಟ ವಿಸ್ತರಣೆ ವೇಳೆ ನನ್ನ ಕೈಬಿಡಬೇಕೆಂದು ಎಲ್ಲಿಯೂ ಕೂಡ ಕೇಳಿ ಬಂದಿಲ್ಲ. ನನ್ನ ಬಗ್ಗೆ ಸಿಎಂ ಹಾಗೂ ವರಿಷ್ಠರಿಗೆ ಒಳ್ಳೇ ಅಭಿಪ್ರಾಯವಿದೆ. ಪರೋಕ್ಷವಾಗಿ ಸಂಪುಟದಿಂದ ಕೈ ಬಿಡಲ್ಲ ಎಂದು ದಾವಣಗೆರಯಲ್ಲಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಎಲ್ಲರಿಗೂ ಸಚಿವರಾಗಬೇಕು ಎಂಬ ಆಸೆ‌ ಇದ್ದೆ ಇರುತ್ತದೆ. ಇಂತಹ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಮಾತಾಡಬೇಕು. ಬಹಿರಂಗ ಹೇಳಿಕೆ ಕೊಟ್ಟರೇ ಸರಿಯಲ್ಲ.ಇದರಿಂದ ಜನರಲ್ಲಿ ಎನಪ್ಪಾ ಇದು ಅಧಿಕಾರಕ್ಕಾಗಿ ಕಚ್ಚಾಟ ಎಂಬ ಮಾತು ಬರಬಾರದು. ಯಾರು ಕೂಡಾ ಬಹಿರಂಗ ಹೇಳಿಕೆ ನೀಡಬೇಡಿ ಎಂದು ಈಗಾಗಲೇ ನಳೀನ್​ಕುಮಾರ ಕಟೀಲ್ ಹೇಳಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್, ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ: ಸಿ.ಪಿ.ಯೋಗೇಶ್ವರ್ 

ಚುನಾವಣಾ ವರ್ಷ ಇರುವುದರಿಂದ ಹೇಳಿಕೆಗಳು ಸಹಜ. ಈವರೆಗೆ ಬಿಜೆಪಿಯಿಂದ  ಕಾಂಗ್ರೆಸ್‌ಗೆ ಹೋದವರು ಕಡಿಮೆ. ಕಳೆದೆರಡು ವರ್ಷದ ಹಿಂದೆ ಕಾಂಗ್ರೆಸ್, ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ. ಇದೀಗ ಗೊಂದಲ ಸೃಷ್ಟಿಸುವಂತಹ ಹೇಳಿಕೆ ನೀಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್​, ಮಾಜಿ ಸಿಎಂ ಸಿದ್ದರಾಮಯ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಬಿಜೆಪಿಯವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಂಬ ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಬಿಜೆಪಿ ಎಂಎಲ್​ಸಿ ಸಿ.ಪಿ. ಯೋಗೇಶ್ವರ್ ಟಾಂಗ್ ನೀಡಿದ್ದಾರೆ.

ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗಲ್ಲ: ಸಿ.ಪಿ. ಯೋಗೇಶ್ವರ್

ನನ್ನ ಅಚಲ ವಿಶ್ವಾಸವನ್ನು ಅಲುಗಾಡಿಸಲು ಆಗುವುದಿಲ್ಲ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗಲ್ಲ. ಕಾಂಗ್ರೆಸ್‌ನವರು ಸುಮ್ಮನೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್​ಸಿ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಧ್ಯೆ ಗೊಂದಲವಿದೆ. ಅಧಿಕಾರ, ನಾಯಕನಾಗಬೇಕೆಂದು ಅವರಿಬ್ಬರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಬಿಜೆಪಿಯಿಂದ ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುವವರೇ ಹೆಚ್ಚಾಗಿದ್ದಾರೆ. ಮುಂದಿನ ತಿಂಗಳಿನಿಂದ ಬಿಜೆಪಿಗೆ ಹೆಚ್ಚು ಜನ ಬರುತ್ತಾರೆ. ಕಾದು ನೋಡಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ನಾನು ಸೋತಾಗಲೂ ನನಗೆ 2 ಬಾರಿ ಸಚಿವ ಸ್ಥಾನವನ್ನು ಬಿಜೆಪಿ ನೀಡಿದೆ. ಈಗ ಎಂಎಲ್‌ಸಿ ಮಾಡಿದೆ ಇದನ್ನು ಪದೇಪದೆ ಹೇಳುತ್ತೇನೆ. ಮುಂದಿನ ದಿನಗಳಲ್ಲಿ ನಾನು ಇದರ ಬಗ್ಗೆ ಸುದ್ದಿಗೋಷ್ಠಿ ಮೂಲಕ‌‌ ಸ್ಪಷ್ಟಪಡಿಸುತ್ತೇನೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಇದನ್ನೂ ಓದಿ:

ಕಾಂಗ್ರೆಸ್, ಜೆಡಿಎಸ್‌ನಿಂದ ಬೇಸತ್ತು ಬಿಜೆಪಿಗೆ ಬಂದಿದ್ದಾರೆ: ಡಿಕೆಶಿ ಹೇಳಿಕೆಗೆ ಸಿ.ಪಿ.ಯೋಗೇಶ್ವರ್ ಟಾಂಗ್

ಬೆಳಗಾವಿಗೆ ಮತ್ತೊಂದು ಸಚಿವ ಸ್ಥಾನಕ್ಕೆ ಬೇಡಿಕೆ; ಉಮೇಶ್ ಕತ್ತಿ ನಿವಾಸದಲ್ಲಿ ಗೌಪ್ಯ ಸಭೆ

Published On - 5:58 pm, Tue, 25 January 22