ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಾಮೂಹಿಕ ನಾಯಕತ್ವದ ಮಂತ್ರ ಜಪಿಸಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಷಣ ಮಾಡಿದ್ರು. ಈ ವೇಳೆ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದೆ.
ದಾವಣೆಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ತಮ್ಮ ಪವರ್ ಎಂತಹದ್ದು ಎಂಬುದನ್ನು ಸಾಬೀತು ಮಾಡಿದ್ದಾರೆ. ಇಂದು ತಮ್ಮ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಿದ್ದರಾಮಯ್ಯಗಿರೋ ಜನಶಕ್ತಿ, ಸಂಘಟನೆಯ ಶಕ್ತಿ ಯಾವ ರೇಂಜಿಗೆ ಇದೆ ಅನ್ನೋದನ್ನು ಇಡೀ ಕರುನಾಡಿಗೆ ತೋರಿಸಿಕೊಟ್ಟಿದ್ದಾರೆ. ಬೆಣ್ಣೆ ನಗರಿಯಲ್ಲಿ ಅಕ್ಷರಶ: ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕದ ಮೂಲೆ ಮೂಲೆಯಿಂದ್ಲೂ ಜನ ದಾವಣೆಗೆರೆಗೆ ನುಗ್ಗುತ್ತಿದ್ದಾರೆ. ಸದ್ಯ ಸಿದ್ದರಾಮೋತ್ಸವದಲ್ಲಿ(Siddaramotsava) ಭಾಗಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar), ಸಾಮೂಹಿಕ ನಾಯಕತ್ವದ ಮಂತ್ರ ಜಪಿಸಿದ್ದಾರೆ.
ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಷಣ ಮಾಡಿದ್ರು. ಈ ವೇಳೆ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ತುಂಬಿದೆ. ಇದೇ ವೇಳೆ ದೇಶದ 75ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸ್ತಿದ್ದೇವೆ. ದೇಶಕ್ಕೂ ಸಂಭ್ರಮ, ಕಾಂಗ್ರೆಸ್‌ಗೂ ಸಂಭ್ರಮ. ಬಸವ ಜಯಂತಿ ದಿನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸಿದ್ದರಾಮೋತ್ಸವ ಕಾರ್ಯಕ್ರಮ ಬಗ್ಗೆ ಹೇಳುತ್ತಿದ್ದಂತೆ ಸಂಭ್ರಮಪಟ್ಟಿದ್ದೆ. ಐತಿಹಾಸಿಕ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ರಾಹುಲ್‌ಗೆ ಧನ್ಯವಾದಗಳು. ನೀವೆಲ್ಲರೂ ವಿಧಾನಸೌಧದ 3ನೇ ಮಹಡಿಯಲ್ಲಿ ಓಡಾಡಬೇಕಿದೆ. ಇದಕ್ಕೆ ಬಿಜೆಪಿ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕಿದೆ. ನಾವೆಲ್ಲಾ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಚಿವರಾಗಿದ್ದೆವು. ಅನ್ನಭಾಗ್ಯ ಸೇರಿ ಹಲವು ಜನಪರ ಯೋಜನೆ ಜಾರಿಗೆ ತಂದರು ಎಂದು ಸಿದ್ದರಾಮಯ್ಯ ಆಡಳಿತದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ರಶಂಸಿಸಿದ್ದಾರೆ.
ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸೋಣ
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ಇದು ನಮ್ಮೆಲ್ಲರ ಸಂಕಲ್ಪವಾಗಬೇಕು. ಸಿದ್ದರಾಮಯ್ಯ ಕೇವಲ ಹಿಂದುಳಿದ ವರ್ಗಗಳ ನಾಯಕರಲ್ಲ. ಸರ್ವ ಜನಾಂಗಕ್ಕೂ, ಸರ್ವ ಧರ್ಮಕ್ಕೂ ಸಿದ್ದರಾಮಯ್ಯ ನಾಯಕ. ರಾಜ್ಯದ ಸೇವೆ ಮಾಡಲು ಸಿದ್ದರಾಮಯ್ಯಗೆ ದೇವರು ಶಕ್ತಿ ನೀಡಲಿ. ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಒಟ್ಟಾಗಿ ಕೆಲಸ ಮಾಡೋಣ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸೋಣ. ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದರು.
Published On - 3:36 pm, Wed, 3 August 22