Davanagere: ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ದಾಳಿ; 59 ಕಂಪ್ಯೂಟರ್​ಗಳ ಜಪ್ತಿ

ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದಾಳಿ ನಡೆಸಿದ್ದು, 59 ಕಂಪ್ಯೂಟರ್​​ಗಳನ್ನು ಜಪ್ತಿ ಮಾಡಿದ್ದಾರೆ.

Davanagere: ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ದಾಳಿ; 59 ಕಂಪ್ಯೂಟರ್​ಗಳ ಜಪ್ತಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Apr 12, 2023 | 10:24 PM

ದಾವಣಗೆರೆ: ಬಿಜೆಪಿ ಪರ ಕಾರ್ಯನಿರ್ವಹಿಸುತ್ತಿದ್ದ ಟೆಲಿಕಾಲಿಂಗ್ ಸೆಂಟರ್ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದಾಳಿ ನಡೆಸಿದ್ದು, 59 ಕಂಪ್ಯೂಟರ್​​ಗಳನ್ನು ಜಪ್ತಿ ಮಾಡಿದ್ದಾರೆ. ಪರವಾನಿಗೆ ಇಲ್ಲದೆ ಟೆಲಿಕಾಲಿಂಗ್ ಸೆಂಟರ್ ನಡೆಸುತ್ತಿದ್ದ ದೂರು ದಾಖಲಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ(Davanagere) ಚೇತನಾ ಕಾಂಪ್ಲೆಕ್ಸ್ ಎದುರಿನ ಕಟ್ಟದಲ್ಲಿ ಟೆಲಿಕಾಲಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿತ್ತು. ಕಚೇರಿಯಲ್ಲಿ 60 ಕ್ಕೂ ಹೆಚ್ಚು ಯುವಕ ಯುವತಿಯರು ಕೆಲಸ ಮಾಡುತ್ತಿದ್ದರು.

ಬಿಜೆಪಿ ಸರ್ಕಾರದ ಸಾಧನೆಗಳನ್ನು ಫಲಾನುಭವಿಗಳಿಗೆ ತಿಳಿಸಿ ಬಿಜೆಪಿ ಬೆಂಬಲಿಸುವಂತೆ ಕರೆ ಮಾಡುವ ಕೆಲಸವನ್ನು ಈ ಕಚೇರಿ ಮೂಲಕ ನಡೆಸಲಾಗುತ್ತಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದರು. ಇದರ ಆಧಾರದಲ್ಲಿ ದಾಳಿ ನಡೆಸಲಾಗಿತ್ತು. ಸದ್ಯ ಕಂಪ್ಯೂಟರ್​​​​ಗಳನ್ನುವ ವಶಕ್ಕೆ ಪಡೆದಿರುವ ಚುನಾವಣಾ ಅಧಿಕಾರಿಗಳು ಕಚೇರಿ ಸೀಜ್ ಮಾಡಿದ್ದಾರೆ.

ಹರಿಹರದಲ್ಲಿ ಬಿಜೆಪಿ‌ ಚುನಾವಣಾ ಕಚೇರಿ ಉದ್ಘಾಟನೆ

ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಅಲ್ಲಿ ಬುಧವಾರ ಬಿಜೆಪಿ‌ ಚುನಾವಣಾ ಕಚೇರಿ ಉದ್ಘಾಟನೆ ಮಾಡಲಾಯಿತು. ಬಿಜೆಪಿ ಅಭ್ಯರ್ಥಿ ಬಿಪಿ ಹರೀಶ್ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ವೀರೇಶ ಹನಗವಾಡ ಮತ್ತು ಚಂದ್ರಶೇಖರ ಪೂಜಾರ ಕಚೇರಿ ಉದ್ಘಾಟನೆ ವೇಳೆ ನಡೆದ ಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ: ಪಂಜಾಬ್​ನ ಬಟಿಂಡಾದಲ್ಲಿ ಫೈರಿಂಗ್​ ಪ್ರಕರಣ: ಬಾಗಲಕೋಟೆ ಮೂಲದ ಯೋಧ ಹುತಾತ್ಮ

ಈಗಾಗಲೇ ಹರಿಹರ ಕ್ಷೇತ್ರದಿಂದ ಆರು ಸಲ ಸ್ಪರ್ಧೆ ಮಾಡಿರುವೆ. ಇದು ಎಳನೇ ಚುನಾವಣೆ. ಈ ಸಲ ಟಿಕೆಟ್​​ಗಾಗಿ ಯಾವುದೇ ನಾಯಕರ ಹಿಂದೆ ಸುತ್ತಾಡಿಲ್ಲ. ಬದಲಿಗೆ ಸರ್ವೇಯಲ್ಲಿ ನನ್ನ ಹೆಸರು ಮುನ್ನೆಲೆಗೆ ಬಂದ ಕಾರಣ ಟಿಕೆಟ್ ನೀಡಿದ್ದಾರೆ‌. ಈ ಸಲ ಗೆಲ್ಲುವ ವಿಶ್ವಾಸ ಇದೆ. ಈಗಾಗಲೇ ಇಬ್ಬರು ಆಕಾಂಕ್ಷಿಗಳ ಜೊತೆ ಕ್ಷೇತ್ರದಲ್ಲಿ ಮನೆ ಮನೆ ಪ್ರಚಾರ ಮುಕ್ತಾಯವಾಗಿದೆ. ಮೂರು ಜನರಲ್ಲಿ ಯಾರಿಗೆ ಟಿಕೆಟ್ ಸಿಕ್ಕರೂ ಒಟ್ಟಾಗಿ ದುಡಿಯುವುದಾಗಿ ಪ್ರತಿಜ್ಞೆ ಮಾಡಿದ್ದೇವು. ಅದೇ ರೀತಿ ಪ್ರಚಾರ ಮಾಡಿ ಹರಿಹರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಪಿ ಹರೀಶ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ