ವಿದ್ಯುತ್ ತಂತಿ ತಗುಲಿ ಗಾಯಗೊಂಡ ಬಾಲಕ‌: ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು

ಇತ್ತೀಚಿಗೆ ಬೆಂಗಳೂರಿನಲ್ಲಿ ವಿದ್ಯುತ್​ ತಂತಿ ತಗುಲಿ ತಾಯಿ-ಮಗು ಮೃತಪಟ್ಟಿದ್ದರು. ಇದಾದ ಬೆನ್ನಲ್ಲೇ ಇದೀಗ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಜೊಸಜೋಗಾ ಗ್ರಾಮದಲ್ಲಿ ಇದೆರೀತಿ ಘಟನೆ ನಡೆದಿದೆ. ವಿದ್ಯುತ್ ತಂತಿ ತಗುಲಿ ಬಾಲಕ‌ ತೀವ್ರವಾಗಿ ಗಾಯಗೊಂಡಿದ್ದಾನೆ.

ವಿದ್ಯುತ್ ತಂತಿ ತಗುಲಿ ಗಾಯಗೊಂಡ ಬಾಲಕ‌: ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು
ತುಂಡಾಗಿ ಬಿದ್ದ ವಿದ್ಯುತ್​ ತಂತಿ, ಗಾಯಗೊಂಡ ಬಾಲಕ
Edited By: ವಿವೇಕ ಬಿರಾದಾರ

Updated on: Dec 15, 2023 | 10:18 AM

ದಾವಣಗೆರೆ, ಡಿಸೆಂಬರ್​​​ 15: ವಿದ್ಯುತ್ ತಂತಿ (Electric wire) ತಗುಲಿ ಬಾಲಕ‌ ತೀವ್ರವಾಗಿ ಗಾಯಗೊಂಡಿರುವ ಘಟನೆ ನ್ಯಾಮತಿ ತಾಲೂಕಿನ ಜೊಸಜೋಗಾ ಗ್ರಾಮದಲ್ಲಿ ನಡೆದಿದೆ. ದೀಪಕ್ ನಾಯಕ್ (11) ಗಾಯಗೊಂಡ ಬಾಲಕ. ಪ್ರಕರಣ ಸಂಬಂಧ ಬೇಸ್ಕಾಂ (BESCOM) ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿಕೊಳ್ಳದೇ ನ್ಯಾಮತಿ ಠಾಣೆ ಪೊಲೀಸರು (Police) ಸತಾಯಿಸುತ್ತಿರುವ ಆರೋಪ ಕೇಳಿಬಂದಿದೆ.

ದೀಪಕ್ ನಾಯಕ್ ಭಾನುವಾರ (ಡಿಸೆಂಬರ್ 3) ಆತನ ದೊಡ್ಡಪ್ಪನ ಜೊತೆ ಟ್ರಾಕ್ಟರ್​ನಲ್ಲಿ ಜಮೀನಿಗೆ ಹೋಗಿದ್ದನು. ಈ ವೇಳೆ ಕಂಬದಿಂದ ತುಂಡಾಗಿ ಜೋತು ಬಿದ್ದಿದ್ದ ವಿದ್ಯುತ್​​ ತಂತಿ ತಗುಲಿದೆ. ಇದರಿಂದ ಗಾಯಗೊಂಡ ಬಾಲಕನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಮೀನಿನಲ್ಲಿ ಜೋತು ಬಿದ್ದ ವಿದ್ಯುತ್ ತಂತಿ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಹತ್ತಾರು ಸಲ‌ ಮಾಹಿತಿ‌‌ ನೀಡಿತ್ತು. ಆದರೂ ಕೂಡ ಅಧಿಕಾರಿಗಳು ತೆರವುಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕ ಗಾಯಗೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕ್ರಮ‌ಕೈಗೊಳ್ಳುವಂತೆ ಬಾಲಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

ವಿದ್ಯುತ್​​ ತಂತಿ ತುಳಿದು ತಾಯಿ ಮಗು ಸಾವು

ಇತ್ತೀಚಿಗೆ ಬೆಂಗಳೂರಿನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ತಾಯಿ ಮತ್ತು ಮೃತಪಟ್ಟಿದ್ದರು.  ಸೌಂದರ್ಯ (23) ಮತ್ತು ಒಂಬತ್ತು ತಿಂಗಳ ಮಗು ಸುವಿಕ್ಷಾ ಲಿಯಾ ಭಾನುವಾರ (ನವೆಂಬರ್​ 19) ರಂದು ಬೆಳಿಗ್ಗೆ 5.30 ರ ಸುಮಾರಿಗೆ ತಮಿಳುನಾಡಿನಿಂದ ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಗೆ ಬಂದಿಳಿದಿದ್ದರು. ತಾಯಿ ಸೌಂದರ್ಯ ಮಗುವಿನೊಂದಿಗೆ ಪಾದಾಚಾರಿ ಮಾರ್ಗದಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದಿದ್ದಾರೆ.

ಇದರಿಂದ ವಿದ್ಯುತ್​ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಸಂತೋಷ್ ಕುಮಾರ್ ಅವರು, ಪತ್ನಿ ಮತ್ತು ಮಗುವನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಘಟನಾ ಸ್ಥಳದಲ್ಲಿ ಅವರ ಲಗೇಜ್-ಟ್ರಾಲಿ ಬ್ಯಾಗ್ ಮತ್ತು ಇತರ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:09 am, Fri, 15 December 23

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us