AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು

ದಾವಣಗೆರೆಯಲ್ಲಿ ಜಾತಿ ಕಾರಣಕ್ಕೆ ಗರ್ಭಗುಡಿಗೆ ಪ್ರವೇಶ ಕೊಡಲಿಲ್ಲ ಎಂಬ ಈಶ್ವರಾನಂದಪುರಿಶ್ರೀ ಹೇಳಿಕೆ ವಿಚಾರವಾಗಿ ಮಾತನಾಡಿದ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಶ್ರೀಗಳಿಗೆ ಗರ್ಭಗುಡಿಯಲ್ಲಿ ಪೂಜೆ ಮಾಡುವುದಕ್ಕೆ ಅವಕಾಶ ಕೊಟ್ಟಿಲ್ಲ. ಆದರೆ ಶ್ರೀಗಳು ಬಂದ ನಂತರ ಗರ್ಭಗುಡಿ ಶುಚಿಗೊಳಿಸಿದ್ದರೆ ಅದು ತಪ್ಪು ಎಂದು ಹೇಳಿದ್ದಾರೆ.

ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಚಿವ ರಾಮಲಿಂಗಾರೆಡ್ಡಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 03, 2024 | 9:06 PM

Share

ದಾವಣಗೆರೆ, ಫೆಬ್ರವರಿ 3: ದೇವಸ್ಥಾನಗಳ ಪ್ರವೇಶಕ್ಕೆ ಅವಕಾಶ ಕುರಿತು ಮೊದಲಿಂದಲೂ ಇದೆ. ಶ್ರೀಗಳಿಗೆ ಗರ್ಭಗುಡಿಯಲ್ಲಿ ಪೂಜೆ ಮಾಡುವುದಕ್ಕೆ ಅವಕಾಶ ಕೊಟ್ಟಿಲ್ಲ. ಆದರೆ ಶ್ರೀಗಳು ಬಂದ ನಂತರ ಗರ್ಭಗುಡಿ ಶುಚಿಗೊಳಿಸಿದ್ದರೆ ಅದು ತಪ್ಪು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ. ಜಾತಿ ಕಾರಣಕ್ಕೆ ಗರ್ಭಗುಡಿಗೆ ಪ್ರವೇಶ ಕೊಡಲಿಲ್ಲ ಎಂಬ ಈಶ್ವರಾನಂದಪುರಿಶ್ರೀ ಹೇಳಿಕೆಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಜರಾಯಿ ಆಯುಕ್ತರಿಗೆ ವರದಿ ಕೇಳಿದ್ದೇನೆ ಎಂದು ಹೇಳಿದ್ದಾರೆ.

ನಾನು ಚಾಮುಂಡಿ ಬೆಟ್ಟಕ್ಕೆ ಹೋದಾಗ ಗರ್ಭಗುಡಿವರೆಗೆ ಮಾತ್ರ ಅವಕಾಶ ಇದೆ. ಕೆಲ ದೇವಸ್ಥಾನಗಳಲ್ಲಿ ಗರ್ಭಗುಡಿ ಒಳಗೆ ನಮ್ಮಿಂದ ಪೂಜೆ ಮಾಡಿಸುತ್ತಾರೆ ಎಂದರು.

100 ರಾಮಮಂದಿರ ಕಟ್ಟಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ: ರಾಮಲಿಂಗಾರೆಡ್ಡಿ

100 ರಾಮಮಂದಿರ ಕಟ್ಟಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ. ರಾಮ ಹುಟ್ಟಿ 7500 ಸಾವಿರ ವರ್ಷ ಆಯಿತು. ರಾಮ ಮಂದಿರ ಎಷ್ಟು ಕಟ್ಟಿದ್ದಾರೆ? ಬಿಜೆಪಿಯವರು ಈಗ ರಾಮ ರಾಮ ಅಂತಾ ಓಡಾಡುತ್ತಿದ್ದಾರೆ.

ಇದನ್ನೂ ಓದಿ: ಜಾತಿ ಕಾರಣಕ್ಕೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ: ಈಶ್ವರಾನಂದಪುರಿ ಸ್ವಾಮೀಜಿ ಬೇಸರ

ಅಯೋಧ್ಯೆ ರಾಮ ಮಂದಿರ ಬಾಗಿಲು ತೆಗೆದು ಪೂಜೆಗೆ ಅವಕಾಶ ನೀಡಿದ್ದು ನಮ್ಮ ರಾಜೀವ್ ಗಾಂಧಿ. ನಮ್ಮ ಅಧಿಕಾರಾವಧಿಯಲ್ಲಿ ಎಷ್ಟು ದೇವಸ್ಥಾನಗಳಿಗೆ ಅನುದಾನ ಕೊಟ್ಟಿದ್ದೇವೆ ಎನ್ನುವ ಬಗ್ಗೆ ಪಟ್ಟಿ ಬಿಡುಗಡೆಗೊಳಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಮಾಜದಲ್ಲಿ ನಾವೆಲ್ಲರೂ ಮನುಷ್ಯರೇ ಎನ್ನುವ ಭಾವನೆ ಬರಬೇಕಿದೆ: ಸಚಿವ ಸತೀಶ್ ಜಾರಕಿಹೊಳಿ

ಈ ವಿಚಾರವಾಗಿ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ಇದರ ವಿರುದ್ಧ ಹೋರಾಟ, ಜಾಗೃತಿ ಆಗಬೇಕಿದೆ. ನಮ್ಮ ಸಮಾಜದಲ್ಲಿ ನಾವೆಲ್ಲರೂ ಮನುಷ್ಯರೇ ಎನ್ನುವ ಭಾವನೆ ಬರಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಕಾರಣಕ್ಕೆ ನಮ್ಮನ್ನ ಚನ್ನಕೇಶವ ದೇಗುಲದ ಗರ್ಭಗುಡಿಗೆ ಬಿಟ್ಟಿರಲಿಲ್ಲ – ಕನಕ ಪೀಠದ ಈಶ್ವರಾನಂದಪುರಿ ಶ್ರೀ

ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಬಿಜೆಪಿಗೆ ಹೋಗುತ್ತಾರೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಬರುತ್ತಾರೆ ಅಂತಾರೆ, ನಾವು ಹೋಗಲ್ಲ ಅಂತೀವಿ ಅಷ್ಟೇ ಎಂದಿದ್ದಾರೆ.

ಈಶ್ವರಾನಂದಪುರಿ ಶ್ರೀಗಳ ಹೇಳಿಕೆಗೆ ಬಾಗೂರು ಚನ್ನಕೇಶವ ದೇಗುಲದ ಅರ್ಚಕ ಶ್ರೀನಿವಾಸ್ ಅವರು ಪ್ರತಿಕ್ರಿಯೆ ನೀಡಿದ್ದು, ಶ್ರೀಗಳು ಹೇಳಿದಂತೆ ಜಾತಿ ಕಾರಣಕ್ಕೆ ತಾರತಮ್ಯ ನಡೆದಿಲ್ಲ. ಈಶ್ವರಾನಂದಪುರಿಶ್ರೀ ತೆರಳಿದ ಬಳಿಕ ದೇಗುಲ ಸ್ವಚ್ಛಗೊಳಿಸಿಲ್ಲ. ಈಶ್ವರಾನಂದಪುರಿಶ್ರೀ ಹಲವು ವರ್ಷಗಳಿಂದ ಬರುತ್ತಿದ್ದಾರೆ. ಕಳೆದ ತಿಂಗಳು ನಡೆದ ವೈಕುಂಠ ಏಕಾದಶಿಗೂ ಶ್ರೀಗಳು ಬಂದಿದ್ದರು. ಸ್ವಾಮೀಜಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ