ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು: ಕಾರಣ ನಿಗೂಢ
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ, ಬಿಸಿ ಪಾಟೀಲ್ ದೊಡ್ಡ ಮಗಳ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಆದ್ರೆ, ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾದರೂ ಜೀವ ಉಳಿಯಲಿಲ್ಲ.
ದಾವಣಗೆರೆ, (ಜುಲೈ 08): ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿದ್ದಾರೆ.
ದಾವಣಗೆರೆ ಕತ್ತಲಗೆರೆ ಗ್ರಾಮದ ಮೃತ ಪ್ರತಾಪ್ ಕುಮಾರ್, 15 ವರ್ಷದ ಹಿಂದೆ ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯಳನ್ನು ಮದುವೆಯಾಗಿದ್ದರು. ಆದ್ರೆ, ಇದೀಗ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
KA 68 M 1458 ನಂಬರಿನ Venue ಕಾರಿನಲ್ಲಿ ಬಂದಿದ್ದ ಪ್ರತಾಪಕುಮಾರ, ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಬರುವ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ. ಆದ್ರೆ, ಪ್ರತಾಪಕುಮಾರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಪ್ರತಾಪ್ ಕುಮಾರ್ ಬೇರೆ ಯಾರು ಅಲ್ಲ. ಬಿ.ಸಿ ಪಾಟೀಲ್ ಪತ್ನಿ ವನಜಾ ಅವರ ಸಹೋದರ. ಇನ್ನು ತಮಗೆ ಗಂಡು ಮಕ್ಕಳು ಇಲ್ಲದಿದ್ದರಿಂದ ಸಂಬಂಧಿ ಪ್ರತಾಪ್ ಕುಮಾರ್ಗೆ ಬಿ.ಸಿ. ಪಾಟೀಲ್ ತಮ್ಮ ಹಿರಿ ಪುತ್ರಿ ಸೌಮ್ಯಳನ್ನು ಮದುವೆ ಮಾಡಿಕೊಟ್ಟಿದ್ದರು. ಮದುವೆ ಬಳಿಕ ಪ್ರತಾಪ್, ತಮ್ಮ ಮಾವ ಬಿ.ಸಿ ಪಾಟೀಲ್ ಅವರ ಕೃಷಿಗೆ ಸಂಬಂಧಿಸಿದ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಆದ್ರೆ, ಇದೀಗ ಅಳಿಯ ದಿಢೀರ್ ಆತ್ಮಹತ್ಯೆಗೆ ಶರಣಾಗಿದ್ದರಿಂದ ಬಿ.ಸಿ. ಪಾಟೀಲ್, ಕುಗ್ಗಿ ಹೋಗಿದ್ದು, ಹಿರೇಕೆರೂರಿನಲ್ಲಿ ಇದ್ದ ಬಿ.ಸಿ ಪಾಟೀಲ್ ಇದೀಗ ಮೃತದೇಹವಿರುವ ಶಿಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 5:19 pm, Mon, 8 July 24