ಮತ್ತೊಂದು ಸ್ವರೂಪ ಪಡೆದ ಜಮೀರ್ ಅಹ್ಮದ್ ಖಾನ್​ರದ್ದು ಎನ್ನಲಾದ ಆಡಿಯೋ ಪ್ರಕರಣ

ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಮಾತನಾಡಿದ್ದು ಎನ್ನಲಾದ ಆಡಿಯೋ ಕಾಂಗ್ರೆಸ್​​​ನಲ್ಲಿ ಕಂಪನ ಸೃಷ್ಟಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ವೇಳೆ ಪಕ್ಷ ವಿರೋಧಿಯಾಗಿ ಜಮೀರ್ ನಡೆದುಕೊಂಡಿದ್ದಾರೆ ಎಂಬ ಆರೋಪಕ್ಕೆ ಬಲ ಬಂದಿದೆ. ಹೀಗಾಗಿ ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಡಿಯೋ ಸಂಬಂಧ ಕೊನೆಗೂ ಎಫ್​​ಐಆರ್ ದಾಖಲಾಗಿದ್ದು, ಪೊಲೀಸರು ಆಡಿಯೋ ಮೂಲ ಪತ್ತೆಗೆ ಮುಂದಾಗಿದೆ.

ಮತ್ತೊಂದು ಸ್ವರೂಪ ಪಡೆದ ಜಮೀರ್ ಅಹ್ಮದ್ ಖಾನ್​ರದ್ದು ಎನ್ನಲಾದ ಆಡಿಯೋ  ಪ್ರಕರಣ
Zameer Ahmed Khan
Edited By:

Updated on: Jun 07, 2026 | 6:59 PM

ದಾವಣಗೆರೆ, (ಜೂನ್ 07): ಜಮೀರ್ ಅಹಮ್ಮದ್ ಖಾನ್ (zameer ahmed khan) ಅವರದ್ದು ಎನ್ನಲಾದ ಆಡಿಯೋ ಕಾಂಗ್ರೆಸ್​​​ನಲ್ಲಿ ಸಂಚಲನ ಮೂಡಿಸಿದ್ದು, ಈ ಸಂಬಂಧ ಇದೀಗ ದಾವಣಗೆರೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಗಂಭೀರತೆ ಅರಿತ ಪೊಲೀಸರು, ಕಾಂಗ್ರೆಸ್​ನಿಂದ ಉಚ್ಚಾಟನೆಗೊಂಡಿರುವ ಮೊಹಮ್ಮದ್ ಸಿರಾಜ್ ಅವರು ನೀಡಿದ ದೂರಿನ ಮೇರೆಗೆ BNS 2023ರ ಅನ್ವಯ 336(2), 336(4), 318(2), 340(2), 351(2) ಐಟಿ ಆ್ಯಕ್ಟ್ 2000 ಅನ್ವಯ U/S 66, 66(C), 66(D) ಅನ್ವಯ ಎಫ್​​ಐಆರ್ ದಾಖಲಾಗಿದ್ದು, ದೂರುದಾರ ಮೊಹಮ್ಮದ್ ಸಿರಾಜ್​ಗೆ ಸಿಇಎನ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಆದ್ರೆ, ಮೊಹಮ್ಮದ್ ಸಿರಾಜ್, ಇದ್ದಕ್ಕಿದ್ದಂತೆ ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದಾರೆ.

ಮುಖ್ಯಾಂಶಗಳು

  • ಜಮೀರ್ ಅಹ್ಮದ್ ಖಾನ್​ ಅವರದ್ದು ಎನ್ನಲಾದ ಆಡಿಯೋ ವೈರಲ್
  • ದಾವಣಗೆರೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು
  • ಮೊಹಮ್ಮದ್ ಸಿರಾಜ್ ನೀಡಿದ್ದ ದೂರು ಆಧರಿಸಿದ FIR ದಾಖಲು
  • ಆಡಿಯೋ ಮೂಲ ಹುಡುಕಲು ಮುಂದಾದ ಪೊಲೀಸ್ರು

ಮೊಹಮ್ಮದ್ ಸಿರಾಜ್ ನೀಡಿದ ದೂರಿನ ಮೇರೆಗೆ ದಾವಣಗೆರೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದ್ದು, ಇದೀಗ ಪೊಲೀಸರು ಆಡಿಯೋ ಮೂಲ ಪತ್ತೆಗೆ ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂತೆ ಮೊಲದ ಹಂತದ ತನಿಖೆಗೆ ದೂರುದಾರ ಮೊಹಮ್ಮದ್ ಸಿರಾಜ್  ಅವರನ್ನು ವಿಚಾರಣೆ ನಡೆಸಲು ಪೊಲೀಸ್ ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದ ಜಮೀರ್ ಅಹ್ಮದ್‌ ಆಡಿಯೋ ಕೇಸ್: ಹೈಕಮಾಂಡ್​​​​ಗೆ ದೂರು

ಮೊಹಮ್ಮದ್ ಸಿರಾಜ್ ಅವರ ಮೊಬೈಲ್ ವಶಕ್ಕೆ ಪಡೆದ ಆಡಿಯೋ ಬಗ್ಗೆ ಕೂಲಂಕುಶವಾಗಿ ತನಿಖೆ ನಡೆಸಲಿದ್ದಾರೆ. ಅಲ್ಲದೆ ಆಡಿಯೋ ವೈರಲ್ ಮಾಡಿದ್ದ ಕರ್ನಾಟಕ ಕಾಕ್ರೋಚ್ ಖಾತೆಯ ಮೂಲ ಪತ್ತೆಗೂ ಸಹ ಸಹ ಪೊಲೀಸರು ಮುಂದಾಗಿದ್ದಾರೆ.

ಆಡಿಯೋ ಬಗ್ಗೆ ಸವಾಲು ಹಾಕಿರುವ ಜಮೀರ್

ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಜಮೀರ್ ಅಹ್ಮದ್ ಖಾನ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಅಲ್ಲದೇ ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ ಎಂದು ಸವಾಲು ಹಾಕಿದ್ದರು.

ಆಡಿಯೋದಲ್ಲೇನಿದೆ?

ದಾವಣಗೆರೆ ಉಪಸಮರದದಲ್ಲಿ ಟಿಕೆಟ್ ನೀಡದ್ದಕ್ಕೆ ಮುಸ್ಲಿಂ ಸಮುದಾಯ ಅಸಾಮಾಧಾನಗೊಂಡಿತ್ತು . ಇತ್ತ ಜಮೀರ್ ಅಹ್ಮದ್ ಖಾನ್​ ಸೇರಿ ಮುಸ್ಲಿಂ ನಾಯಕರು ಪ್ರಚಾರದಿಂದ ದೂರ ಉಳಿದಿದ್ದರು. ಇದೀಗ ಜಮೀರ್ ಅಹಮ್ಮದ್​ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ದೊಡ್ಡ ಸದ್ದು ಮಾಡುತ್ತಿದೆ. ಸ್ಥಳೀಯ ಕಾಂಗ್ರೆಸ್ ಉಚ್ಛಾಟಿತ ನಾಯಕ ಮುಹಮ್ಮದ್ ಸಿರಾಜ್ ಎಂಬುವವರ ಜೊತೆಗೆ ಮಾತನಾಡಿದ ಫೋನ್ ಆಡಿಯೋ ಸಂಬಾಷಣೆ ಇದಾಗಿದೆ ಎನ್ನಲಾಗುತ್ತಿದೆ. ಸದ್ಯ ಈ ಆಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ದಾವಣಗೆರೆ ಚುನಾವಣೆ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಇದು ಪೂರಕ ಎಂಬಂತಿದೆ‌ ಎಂದು ವಿಶ್ಲೇಷಿಸಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎನ್ನಲಾಗಿರುವ ಈ ಆಡಿಯೋ ಸಂಭಾಷಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಮರ್ಥ್ ಅವರಿಗೆ ಹೆಚ್ಚು ವೋಟು ಹಾಕಬೇಡಿ. ಬಂಡಾಯ ನಿಂತು ಕಣದಿಂದ ಹಿಂದೆ ಸರಿದಿದ್ದ ಸಾದಿಕ್ ಪೈಲ್ವಾನ್ ವಾರ್ಡ್​ನಲ್ಲಿ ಕಾಂಗ್ರೆಸ್​ಗೆ ವೋಟು ಕಡಿಮೆ ಬರುವಂತೆ ನೋಡಿಕೊಳ್ಳಿ. ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷೇತರರಿಗೆ ಮತ ಹಾಕಿಸಿ. ಬಲವಂತವಾಗಿ ಮನೆಯಿಂದ ಕರೆದು ಬಂದು ವೋಟು ಹಾಕಿಸಬೇಡಿ ಎಂದು ಮಾತನಾಡಿರುವುದು ಈ ಆಡಿಯೋನಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us