AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಸುರೇಶ್, ವಿನಯ್​ ಕುಲಕರ್ಣಿಗೆ ಗುಂಡಿಕ್ಕಿ ಕೊಲ್ಲಬೇಕೆಂದ ಈಶ್ವರಪ್ಪ ವಿರುದ್ಧ ಎಫ್​ಐಆರ್

ದೇಶದ ವಿಭಜನೆ ವಿಚಾರವಾಗ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಇದೇ ಸಮಯದಲ್ಲಿ ಅಂದರೆ ನಿನ್ನೆ ಕೆಎಸ್ ಈಶ್ವರಪ್ಪ, ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ವಿರುದ್ಧ ಗುಡುಗಿದ್ದರು. ದೇಶದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದರು. ಸದ್ಯ ಇದೇ ವಿಚಾರವಾಗಿ ಕೆಎಸ್ ಈಶ್ವರಪ್ಪ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ.

ಡಿಕೆ ಸುರೇಶ್, ವಿನಯ್​ ಕುಲಕರ್ಣಿಗೆ ಗುಂಡಿಕ್ಕಿ ಕೊಲ್ಲಬೇಕೆಂದ ಈಶ್ವರಪ್ಪ ವಿರುದ್ಧ  ಎಫ್​ಐಆರ್
ಮಾಜಿ ಶಾಸಕ ಕೆ.ಎಸ್​.ಈಶ್ವರಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 09, 2024 | 9:21 PM

Share

ದಾವಣಗೆರೆ, ಫೆಬ್ರವರಿ 9: ಸಂಸದ ಡಿ.ಕೆ.ಸುರೇಶ್​ ಮತ್ತು ವಿನಯ್​ ಕುಲಕರ್ಣಿಗೆ ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ ಕೆ.ಎಸ್​.ಈಶ್ವರಪ್ಪ (KS Eshwarappa) ವಿರುದ್ಧ ಎಫ್​ಐಆರ್​ ದಾಖಲಾಗಿದೆ. ದಾವಣಗೆರೆ‌‌ ನಗರದ ನಿಜಲಿಂಗಪ್ಪ ಬಡಾವಣೆ ನಿವಾಸಿ ಕಾಂಗ್ರೆಸ್ ಮುಖಂಡ ಹನುಮಂತಪ್ಪ ಎಂಬುವವರು ನೀಡಿದ ದೂರು ಆಧರಿಸಿ ಐಪಿಸಿ ಸೆಕ್ಷನ್​ 505(1)ಸಿ, 505(2), 506ರ ಅಡಿ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ್​ ಕುಲಕರ್ಣಿ ರೀತಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದರು. ಸದ್ಯ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಈಶ್ವರಪ್ಪ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೆ.ಎಸ್​.ಈಶ್ವರಪ್ಪ ಹೇಳಿಕೆ ವಿಚಾರವಾಗಿ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​, ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ಎಫ್​ಐಆರ್​ ಆಗಿದೆ. ಮಾಜಿ ಶಾಸಕ ಈಶ್ವರಪ್ಪ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ. ಕಾನೂನು ಮೀರಿ ಯಾರು ಕೂಡ ವರ್ತಿಸಬಾರದು ಎಂದು ಕಿಡಿಕಾರಿದ್ದಾರೆ.

ಈಶ್ವರಪ್ಪಗೆ ಸಚಿವ ಎಚ್​​ಕೆ ಪಾಟೀಲ್ ಖಡಕ್ ಎಚ್ಚರಿಕೆ  

ನಿನ್ನೆ ಕಾನೂನು ಸಚಿವ ಎಚ್​​ಕೆ ಪಾಟೀಲ್​ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದು, ಇಂಥಹ ಪ್ರಚೋದನಕಾರಿ ಮಾತುಗಳನ್ನು ಆಡಿದರೆ ಹೀರೋ ಆಗುತ್ತೇವೆ ಎನ್ನುವ ಕಲ್ಪನಾ ಲೋಕದಲ್ಲಿರುತ್ತಾರೆ. ಇದರಿಂದಲೇ ಬಹಳ ದೊಡ್ಡ ಪ್ರಮಾದಗಳನ್ನು ಮಾಡುತ್ತಿರುತ್ತಾರೆ.

ಇದನ್ನೂ ಓದಿ: ಡಿಕೆ ಸುರೇಶ್​ಗೆ ಗುಂಡಿಕ್ಕಬೇಕು: ಈಶ್ವರಪ್ಪ ಹೇಳಿಕೆಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಎಚ್​ಕೆ ಪಾಟೀಲ್

24 ಗಂಟೆಯೊಳಗೆ ಈಶ್ವರಪ್ಪ ತಮ್ಮ ಮಾತನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಈಶ್ವರಪ್ಪಗೆ ಸಚಿವ ಎಚ್​​ಕೆ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದರು.

ನಾನೇಕೆ ಬಾಯಿ‌ ಹೊಲಸು ಮಾಡಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗದಲ್ಲಿ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದು, ಇದಕ್ಕೆ ಉತ್ತರ ಕೊಟ್ಟು ನಾನೇಕೆ ಬಾಯಿ‌ ಹೊಲಸು ಮಾಡಿಕೊಳ್ಳಲಿ.

ಇದನ್ನೂ ಓದಿ: ಡಿಕೆ ಸುರೇಶ್​ಗೆ ಗುಂಡಿಕ್ಕಬೇಕು; ಕಾನೂನು ಮೀರಿ ನಡೆಯುವವರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಗೃಹ ಸಚಿವ

ನನ್ನ ತಂದೆ-ತಾಯಿ ಆ ರೀತಿ ಕಲಿಸಿಲ್ಲ. ನಾನು ಅದಕ್ಕೆಲ್ಲಾ ಯಾಕೆ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ.

ಕೆ.ಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ ಎನ್​ಎಸ್​ಯುಐ ಪ್ರತಿಭಟನೆ

ಕೆಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ ಎನ್​ಎಸ್​ಯುಐ ಶಿವಮೊಗ್ಗದಲ್ಲಿ ಪ್ರತಿಭಟನೆ ಮಾಡಲಾಗಿದೆ. ನಗರದ ಶಿವಪ್ಪನಾಯಕ ವೃತ್ತದಲ್ಲಿ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿ ಎನ್​ಎಸ್​ಯುಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಎಸ್.ಈಶ್ವರಪ್ಪ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಎನ್​ಎಸ್​ಯುಐ ಕಾರ್ಯಕರ್ತರ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:12 pm, Fri, 9 February 24

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ