AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಜಾತಿನಿಂದನೆ ಆರೋಪ: ಎಫ್​ಐಆರ್​ ದಾಖಲು

ಜಾತಿನಿಂದನೆ ಆರೋಪದಡಿ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್​ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ.

ಬಿಜೆಪಿ ಶಾಸಕ ಬಿಪಿ ಹರೀಶ್ ವಿರುದ್ಧ ಜಾತಿನಿಂದನೆ ಆರೋಪ: ಎಫ್​ಐಆರ್​ ದಾಖಲು
ಬಿ.ಪಿ.ಹರೀಶ್
ಗಂಗಾಧರ​ ಬ. ಸಾಬೋಜಿ
|

Updated on: May 17, 2023 | 9:58 PM

Share

ದಾವಣಗೆರೆ: ಜಾತಿನಿಂದನೆ ಆರೋಪದಡಿ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ (BP Harish)​ ವಿರುದ್ಧ ಹರಿಹರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ‘ಅಪ್ಪನಿಗೆ ಹುಟ್ಟಿದ ಮಾದರು ಮಾತ್ರ ಬಿಜೆಪಿಗೆ ಮತ ಹಾಕಿದ್ದಾರೆ’ ಎಂದು ಚುನಾವಣೆಯಲ್ಲಿ ಗೆದ್ದ ಎರಡೇ ದಿನದಲ್ಲಿ ಹರೀಶ್ ವಿವಾದಿತ ಹೇಳಿಕೆ ನೀಡಿದ್ದರು. ದಲಿತ ಮುಖಂಡರು ದೂರು ಹಿನ್ನೆಲೆ ಎಫ್​ಐಆರ್ ದಾಖಲಾಗಿದ್ದು, ಬಿ.ಪಿ.ಹರೀಶ್​​ ಬಂಧನ ಭೀತಿಯಲ್ಲಿದ್ದಾರೆ. ಮಾದಿಗ ಸಮುದಾಯಕ್ಕೆ ಬಿಜೆಪಿ ಸರ್ಕಾರ ಒಳಮೀಸಲಾತಿ ನೀಡಿದೆ. ಆದರೆ ಮಾದಿಗರು ಬಿಜೆಪಿಗೆ ಮತ ಹಾಕಿಲ್ಲವೆಂದು ಹರೀಶ್ ವಾಗ್ದಾಳಿ ಮಾಡಿದ್ದರು.

ಬಿ.ಪಿ.ಹರೀಶ್ ನೀಡಿದ್ದ ಅವಹೇಳನಕಾರಿ ಹೇಳಿಕೆ ವೈರಲ್ ಆಗಿತ್ತು. 7 ಬಾರಿ ಚುನಾವಣೆಗೆ ಸ್ಪರ್ಧಿಸಿರುವ ಬಿ.ಪಿ.ಹರೀಶ್, 2 ಬಾರಿ ಗೆದಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ಸಿಎಂ ಆಗಬೇಕು, ರಾಮನಗರದಲ್ಲಿ ಬೆಂಬಲಿಗರಿಂದ ಪ್ರತಿಭಟನೆ

ಚಪ್ಪಲಿ ಹಾರ ಪ್ರಕರಣ: ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ ಕಟೀಲ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿವಿ ಸದಾನಂದ ಗೌಡ ಅವರ ಬ್ಯಾನರ್​ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿ ಕೊನೆಗೂ ನಳಿನ್ ಕುಮಾರ್ ಕಟೀಲ್ ಮೌನ ಮುರಿದಿದ್ದಾರೆ. ಪ್ರಕರಣದಲ್ಲಿ ಪೊಲೀಸರು ನಡೆದುಕೊಂಡಿರುವ ರೀತಿಯನ್ನು ಖಂಡಿಸಿ ಟ್ವೀಟ್ ಮಾಡಿರುವ ಅವರು, ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Kodagu Rain: ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ವರುಣಾರ್ಭಟ; ಧರೆಗುರುಳಿದ ಮರ, ವಿದ್ಯುತ್ ಕಂಬಗಳು

‘ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.

ಏನಿದು ಪ್ರಕರಣ?

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಪುತ್ತೂರು ಬಸ್​ ನಿಲ್ದಾಣದ ಬಳಿಯಲ್ಲಿ ರಾತ್ರೋರಾತ್ರಿ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿವಿ ಸದಾನಂದ ಗೌಡ ಅವರ ಭಾವಚಿತ್ರ ಇರುವ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿದ್ದು, ಅದಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಈ ಬಗ್ಗೆ ಪುತ್ತೂರು ನಗರಸಭಾ ಆಯುಕ್ತ ಮಧು ಮನೋಹರ್ ಹಾಗೂ ಇತರರು ಪೊಲೀಸರಿಗೆ ದೂರು ನೀಡಿದ್ದರು. ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.