Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ

ನ್ಯಾಮತಿ ತಾಲ್ಲೂಕಿನ ಸಾಲಬಾಳು-ಗಂಜೇನಹಳ್ಳಿ ನಡುವೆ ವಾರದಿಂದ ಸಂಪರ್ಕ ಕಡಿತಗೊಂಡಿದೆ. ಸಂಪರ್ಕ ಕಡಿತಗೊಂಡ ರಸ್ತೆಗೆ ಶಾಸಕ ರೇಣುಕಾಚಾರ್ಯ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

Karnataka Rains: ದಾವಣಗೆರೆ ಜಿಲ್ಲೆಯಲ್ಲಿ ನಿಲ್ಲದ ಪ್ರವಾಹ: ಸಾಲಬಾಳು-ಗಂಜೇನಹಳ್ಳಿ ನಡುವೆ ಸಂಪರ್ಕ ಕಡಿತ
ತಾಲ್ಲೂಕಿನ ಚಿಕ್ಕಬಿದರಿ, ಸಾರಥಿ ಗ್ರಾಮಗಳ ಮಧ್ಯೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 25, 2021 | 5:59 PM

ದಾವಣಗೆರೆ: ರಾಜ್ಯದಲ್ಲಿ ಮಳೆ ತುಸು ಇಳಿಮುಖವಾಗಿದ್ದರೂ, ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಹ ಕಡಿಮೆಯಾಗಿಲ್ಲ. ನ್ಯಾಮತಿ ತಾಲ್ಲೂಕಿನ ಸಾಲಬಾಳು-ಗಂಜೇನಹಳ್ಳಿ ನಡುವೆ ವಾರದಿಂದ ಸಂಪರ್ಕ ಕಡಿತಗೊಂಡಿದೆ. ಸಂಪರ್ಕ ಕಡಿತಗೊಂಡ ರಸ್ತೆಗೆ ಶಾಸಕ ರೇಣುಕಾಚಾರ್ಯ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

ಪದೇಪದೆ ಸಂಪರ್ಕ ಕಡಿತಗೊಳ್ಳುವ ಈ ಸ್ಥಳದಲ್ಲಿ ಸೇತುವೆ ಕಂ ಬ್ಯಾರೇಜ್ ನಿರ್ಮಿಸುವಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಅಧಿಕಾರಿಗಳಿಗೆ ಸಲಹೆ ಮಾಡಿದರು. ಅತಿವೃಷ್ಟಿಯಿಂದಾಗಿ ನ್ಯಾಮತಿ-ಹೊನ್ನಾಳಿ ಅವಳಿ ತಾಲ್ಲೂಕಿನಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಹೊನ್ನಾಳಿ, ನ್ಯಾಮತಿ ತಾಲೂಕನ್ನು ಅತಿವೃಷ್ಟಿ ಪೀಡಿತವೆಂದು ಘೋಷಿಸಲು ಮುಖ್ಯಮಂತ್ರಿಗೆ ಮನವಿ ಮಾಡಿದರು.

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಹರಿಹರ ತಾಲ್ಲೂಕಿನ ಚಿಕ್ಕಬಿದರಿ, ಸಾರಥಿ ಗ್ರಾಮಗಳ ಮಧ್ಯೆ ರಸ್ತೆ ಸಂಪರ್ಕ ಕಡಿತಗೊಂಡಿದೆ. 10 ವರ್ಷವಾದರೂ ಸೇತುವೆ ಕಾಮಗಾರಿ ಪೂರ್ಣವಾಗಿಲ್ಲ. ಈಗ ಮಳೆ ಹೆಚ್ಚಾದ ಹಿನ್ನೆಲೆ ರಸ್ತೆ ಸಂಪರ್ಕ ಕಡಿತವಾಗಿದೆ. ಹೀಗಾಗಿ ಗ್ರಾಮಸ್ಥರು ದೋಣಿಗಳ ಮೊರೆ ಹೋಗಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Gadag dog

ಮಲಪ್ರಭಾ ನದಿಯಲ್ಲಿ ಈಜಿ ದಡ ಸೇರಿದ ಶ್ವಾನ

ಮಲಪ್ರಭಾ ನದಿಯಲ್ಲಿ ಶ್ವಾನ ಬಚಾವ್ ಗದಗ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪೂರು ಗ್ರಾಮದ ಸೇತುವೆ ಬಳಿ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಶ್ವಾನವೊಂದು ಸೇತುವೆ ಬಳಿ ಈಜಿ ದಡ ಸೇರಿತು. ನೀರಿನ ರಭಸಕ್ಕೆ ತೆಲಿ ಹೋಗುತ್ತಿದ್ದ ಶ್ವಾನ ಬಚಾವ್ ಆಗಿದ್ದು ಕಂಡ ಜನರು ಸದ್ಯ ಬದುಕಿತು ಬಡಜೀವ ಎಂದುಕೊಂಡರು.

(Floods in Davanagere District Road between Salabalu Ganjenahalli cut)

ಇದನ್ನೂ ಓದಿ: ಕಾರವಾರ: ಮಳೆಗೆ ಮನೆ ಕುಸಿತ; ನೆಲಸಮ‌ವಾದ ಸೂರು ನೋಡಿ ಭಾವುಕರಾದ ದಂಪತಿ

ಇದನ್ನೂ ಓದಿ: ಮಳೆ ಅಬ್ಬರ ತಗ್ಗಿದರೂ ಬೆಳಗಾವಿಯಲ್ಲಿ ನಿಲ್ಲದ ಭೀತಿ; ಬೆಳೆ ಹಾನಿಗೆ ಪರಿಹಾರ ನೀಡುವಂತೆ ರೈತರ ಆಗ್ರಹ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು