ಪಕ್ಷ ವಿರೋಧ ಚಟುವಟಿಕೆ: ಮಾಜಿ ಶಾಸಕ ಮತ್ತು ಮೂವರು ಪುತ್ರರು ಬಿಜೆಪಿಯಿಂದ ಉಚ್ಚಾಟನೆ

ಬಿಜೆಪಿ‌ ರಾಜ್ಯ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಸೂಚನೆ ಮೆರೆಗೆ ಬಿಜೆಪಿಯ ಮಾಜಿ ಶಾಸಕ ಮತ್ತು ಮೂವರು ಪುತ್ರರನ್ನು ಬರುವ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಪಕ್ಷ ವಿರೋಧ ಚಟುವಟಿಕೆ: ಮಾಜಿ ಶಾಸಕ ಮತ್ತು ಮೂವರು ಪುತ್ರರು ಬಿಜೆಪಿಯಿಂದ ಉಚ್ಚಾಟನೆ
ಬಿಜೆಪಿ
Edited By: ವಿವೇಕ ಬಿರಾದಾರ

Updated on: Sep 06, 2023 | 9:16 AM

ದಾವಣಗೆರೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ (Assembly Election) ಜಗಳೂರ ಕ್ಷೇತ್ರದಲ್ಲಿ ಪಕ್ಷ ವಿರೋಧ ಚಟುವಟಿಕೆ ನಡೆಸಿ, ಪಕ್ಷದ ಅಭ್ಯರ್ಥಿ ಎಸ್​.ವಿ ರಾಮಚಂದ್ರ ಅವರ ಸೋಲಿಗೆ ಕಾರಣರಾ‌ದ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ (BJP) ಮುಖಂಡ ಹಾಗೂ ಮಾಜಿ ಶಾಸಕ ಟಿ. ಗುರುಸಿದ್ದನಗೌಡ (Guru Siddanagowda) ಮತ್ತು ಅವರ ಮೂವರು ಮಕ್ಕಳನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

ಬಿಜೆಪಿ‌ ರಾಜ್ಯ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಸೂಚನೆ ಮೆರೆಗೆ, ಮಾಜಿ ಶಾಸಕ ಗುರುಸಿದ್ದನಗೌಡ ಮತ್ತು ಇವರ ಪುತ್ರರಾದ ಡಾ.ಟಿ.ಜಿ. ರವಿಕುಮಾರ, ಟಿಜಿ ಅರವಿಂದಕುಮಾರ, ಟಿಜಿ ಪವನಕುಮಾರ ಅವರನ್ನು ಬರುವ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಜಗದೀಶ್​ ಶೆಟ್ಟರ್​ರವರ 27 ಆಪ್ತರನ್ನು ಉಚ್ಚಾಟನೆ ಮಾಡಿದ ಬಿಜೆಪಿ

ಜಗಳೂರು ಕ್ಷೇತ್ರದ ಶಾಸಕರಾಗಿದ್ದ ಗುರುಸಿದ್ದನಗೌಡ ಅವರು ಚೆಕ್​ಡ್ಯಾಂ ಗೌಡ್ರು, ದಾವಣಗೆರೆ ವಾಜಪೇಯಿ ಎಂದೇ ಪ್ರಸಿದ್ಧಿ ಗಳಿಸಿದ್ದರು. ಇನ್ನು ಮುಂಬರುವ ಲೋಕಸಭೆಗೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಮಾಜಿ ಶಾಸಕ ಗುರುಸಿದ್ದನಗೌಡ ಮೂರು ಜನ ಪುತ್ರರನ್ನ ಬಿಜೆಪಿಯಿಂದ ಉಚ್ಚಾಟನೆ.

ಯಶವಂತಪುರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಉಚ್ಚಾಟನೆ

ಇತ್ತೀಚಿಗೆ ಯಶವಂತಪುರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಮಾರೇಗೌಡ, ಯಶವಂತಪುರ ನಗರ ಮಂಡಲದ ಉಪಾಧ್ಯಕ್ಷ ಧನಂಜಯ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿತ್ತು. ಪಕ್ಷವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆ ಮಾರೇಗೌಡ, ಧನಂಜಯ ಅವರನ್ನು 6 ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಬಿ.ನಾರಾಯಣ ಆದೇಶ ಹೊರಡಿಸಿದ್ದರು. ಮಾರೇಗೌಡ, ಧನಂಜಯ ವಿರುದ್ಧ ಎಸ್​ಟಿ ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ರಾಜ್ಯ ಬಿಜೆಪಿ ಘಟಕದ ನಾಯಕರಿಗೂ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us