Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ರಾಜ್ಯ ಕುರುಬ ಸಂಘದ ನಿರ್ದೇಶಕ ಪಿ.ರಾಜಕುಮಾರ ನಿಧನ

ರಾಜ್ಯ ಕುರುಬ ಸಂಘದ ನಿರ್ದೇಶಕರಾಗಿದ್ದ ಪಿ.ರಾಜಕುಮಾರ ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ರಾಜ್ಯ ಕುರುಬ ಸಂಘದ ನಿರ್ದೇಶಕ ಪಿ.ರಾಜಕುಮಾರ ನಿಧನ
ಪಿ.ರಾಜಕುಮಾರ
Follow us
TV9 Web
| Updated By: ಆಯೇಷಾ ಬಾನು

Updated on:Oct 23, 2022 | 7:02 AM

ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಅವರ ಆಪ್ತ, ರಾಜ್ಯ ಕುರುಬ ಸಂಘದ ನಿರ್ದೇಶಕರಾಗಿದ್ದ ಪಿ.ರಾಜಕುಮಾರ(63)(P Rajkumar) ನಿಧನರಾಗಿದ್ದಾರೆ. ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ(Heart Attack) ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ನಗರದ ಜೆಎಚ್ ಪಟೇಲ್ ಬಡಾವಣೆಯ ಅವರ ನಿವಾಸದಲ್ಲಿ ಮಧ್ಯಾಹ್ನ ಎರಡು ಗಂಟೆಯ ವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸ್ವಗ್ರಾಮ ದ್ವಾರನಕುಂಟೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಪತ್ನಿ ಹಾಗೂ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನ ಆಗಲಿ ಪಿ‌.ರಾಜಕುಮಾರ ಚಿರ ನಿದ್ರೆಗೆ ಜಾರಿದ್ದಾರೆ. ಇದನ್ನೂ ಓದಿ: Anand Mamani: ಅನಂದ್ ಮಾಮನಿ ರಾಜಕೀಯ ಜೀವನ, ಹತ್ತಿ ವ್ಯಾಪಾರದಿಂದ ವಿಧಾನಸಭೆ ವರೆಗೆ

ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ (Anand Mamani) (56) ವಿಧಿವಶರಾಗಿದ್ದಾರೆ (Passed away). ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲದೇ ಇತ್ತೀಚೆಗಷ್ಟೇ ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಆನಂದ್ ಮಾಮನಿ ಅವರು, ಶೀಘ್ರದಲ್ಲೇ ಗುಣಮುಖವಾಗಿ ಜನ ಸೇವೆ ಬರುತ್ತೇನೆ, ಯಾರು ಆತಂಕಪಡಬೇಡಿ. ಊಹಾಪೋಹಗಳಿಗೆ ಕಿವಿಗೊಡಬೇಡಿ ನಾನು ಚೆನ್ನಾಗಿದ್ದೇನೆ ಎಂದಿದ್ದರು. ಆದ್ರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಆನಂದ್ ಮಾಮನಿ ಅವರ ಪಾರ್ಥಿವ ಶರೀರವನ್ನು ಆಂಬ್ಯುಲೆನ್ಸ್​ ಮೂಲಕ ಸವದತ್ತಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: Ayodhya Deepotsav: ಇಂದು ಅಯೋಧ್ಯೆ ದೀಪೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ; ರಾಮಜನ್ಮ ಭೂಮಿಯಲ್ಲಿ ಬೆಳಗಲಿವೆ 15 ಲಕ್ಷ ದೀಪಗಳು

Published On - 7:02 am, Sun, 23 October 22

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ