ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತರಬೇಕು: ಮಾಜಿ ಶಾಸಕ ಕೆಎಸ್​ ಈಶ್ವರಪ್ಪ

ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್​ ಆಡಿದ ಪ್ರತ್ಯೇಕ್ಷ ರಾಷ್ಟ್ರದ ಮಾತು ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ವಾಕ್ಸಮರಕ್ಕೂ ವೇದಿಕೆ ಮಾಡಿಕೊಟ್ಟಿತ್ತು. ಸದ್ಯ ದಾವಣಗೆರೆಯಲ್ಲಿ ನಡೆದ ಜಿಲ್ಲಾಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ, ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ.

ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತರಬೇಕು: ಮಾಜಿ ಶಾಸಕ ಕೆಎಸ್​ ಈಶ್ವರಪ್ಪ
ಬಿಜೆಪಿಯ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 08, 2024 | 6:34 PM

ದಾವಣಗೆರೆ, ಫೆಬ್ರವರಿ 8: ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ (KS Eshwarappa) ಆಗ್ರಹಿಸಿದ್ದಾರೆ. ನಗರದಲ್ಲಿ ನಡೆದ ಜಿಲ್ಲಾಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಹೀಗೆ ಬಿಡಲ್ಲ. ನಾವು ಬಿಜೆಪಿಯವರು ಪಾಕಿಸ್ತಾನವನ್ನ ಭಾರತದಲ್ಲಿ ಸೇರ್ಪಡೆ ಮಾಡಿ ಅಖಂಡ ಭಾರತ ಮಾಡುತ್ತೇವೆ. ಒಂದು ಕಡೆ ಮೋದಿ ಹಾಗೂ ಹಾಗೂ ಇನ್ನೊಂದು ಕಡೆ ಶ್ರೀರಾಮ ಚಂದ್ರ ಇದು ಬಿಜೆಪಿ ಸಿದ್ದಾಂತ ಎಂದು ಹೇಳಿದ್ದಾರೆ. ಈ ದೇಶದಲ್ಲಿ ಕಾಂಗ್ರೆಸ್​ನವರಿಗೂ ಹಿಂದು ಧರ್ಮದ ಬಗ್ಗೆ ಗೌರವ ಇದೆ. ಮಾಗಡಿ ಶಾಸಕ ಬಾಲಕೃಷ್ಣ ಒಂದು ಮುತ್ತು.‌ ಬಿಜೆಪಿ ಸಂಸದರು ಗಂಡಸರೇ ಅಲ್ಲಾ ಅಂತಾರೆ. ನಾವು ಗಂಡಸರು ಅಂತಾ ಎಲ್ಲಿ ತೊರಿಸಬೇಕು ಎಂದು ಕಿಡಿಕಾರಿದ್ದಾರೆ.

ಡಿಕೆ ಸುರೇಶ್ ಅವರು ಅಭಿನಂದನಾರ್ಹರು: ಕಾಂಗ್ರೆಸ್ ಟ್ವೀಟ್ 

ಈ ವಿಚಾರವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಟ್ವೀಟ್ ಮಾಡಲಾಗಿದ್ದು, ಕೇಂದ್ರ ಸರ್ಕಾರದ ಆರ್ಥಿಕ ತಾರತಮ್ಯದ ಕುರಿತು ಕಾಂಗ್ರೆಸ್ ಸಂಸದ ಡಿಕೆ ಸುರೇಶ್​ ಅವರು ಎತ್ತಿದ ದನಿ ಇಂದು ಮಹಾ ಕ್ರಾಂತಿ ಎಬ್ಬಿಸಿದೆ.

ಕಾಂಗ್ರೆಸ್ ಟ್ವೀಟ್

ಕೇಂದ್ರ ಸರ್ಕಾರದ ಆರ್ಥಿಕ ಶೋಷಣೆಯ ವಿರುದ್ಧ ದಕ್ಷಿಣ ಭಾಗದ ರಾಜ್ಯಗಳು ಒಂದೊಂದಾಗಿಯೇ ದೆಹಲಿಯಲ್ಲಿ ನ್ಯಾಯದ ಹೋರಾಟಕ್ಕೆ ಮುಂದಾಗಿವೆ. ಇಂತಹದೊಂದು ಜಾಗೃತಿಗೆ, ಹೋರಾಟಕ್ಕೆ ಮುನ್ನುಡಿ ಬರೆದ ಡಿಕೆ ಸುರೇಶ್ ಅವರು ಅಭಿನಂದನಾರ್ಹರು ಎಂದು ಬರೆದುಕೊಳ್ಳಲಾಗಿದೆ.

ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ವಾಕ್ಸಮರ

ಕಾಂಗ್ರೆಸ್ ಸಂಸದ ಡಿಕೆ ಸುರೇಶ್​ ಆಡಿದ ಪ್ರತ್ಯೇಕ್ಷ ರಾಷ್ಟ್ರದ ಮಾತು ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ವಾಕ್ಸಮರಕ್ಕೂ ವೇದಿಕೆ ಕೊಟ್ಟಿತ್ತು. ಬಿಜೆಪಿಯವರು ಡಿ.ಕೆ ಸುರೇಶ್​ ಕ್ಷಮೆಗೆ ಪಟ್ಟು ಹಿಡಿದಿದ್ದರೆ ಕಾಂಗ್ರೆಸ್​ನವರು ಡಿ.ಕೆ ಸುರೇಶ್​ ಹೇಳಿಕೆ ಸಮರ್ಥಿಸಿಕೊಂಡು ಬಿಜೆಪಿಗೆ ತಿರುಗೇಟು ಕೊಡುತ್ತಿದ್ದಾರೆ. ಕಾಂಗ್ರೆಸ್​ನಿಂದ ಸಮರ್ಥನೆಯ ಸಮರ ಹಾಗೇ ಮುಂದುವರೆದಿದೆ.

ಇದನ್ನೂ ಓದಿ: ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆ: ದೂರಿನ ವಿಚಾರಣೆ ಕೈಗೆತ್ತಿಕೊಂಡ ಮಂಗಳೂರು ಕೋರ್ಟ್

ಈ ಕುರಿತಾಗಿ ಎಂಎಲ್​ಸಿ ಬಿ.ಕೆ ಹರಿಪ್ರಸಾದ್​​ ಮಾತನಾಡಿ, ದೇಶ ಒಡೆಯುವರು ಬಿಜೆಪಿಯವರು. ದೇಶ ವಿಭಜನೆ ಮಾಡುವುದೇ ಅವರ ಕೆಲಸ. ಡಿ.ಕೆ ಸುರೇಶ್​ ನಮಗೆ ಅನ್ಯಾಯ ಆಗುತ್ತಿದೆ. ಅನ್ನೋ ಧಾಟಿಯಲ್ಲಿ ಮಾತನಾಡಿದ್ದಾರೆ ಅಂತ ಸ್ಪಷ್ಟನೆ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ