AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಷ್ಟ ಅಂತ ಹೇಳಿಕೊಂಡು ದಾವಣೆಗೆರೆ ಉದ್ಯಮಿಗೆ ಹನಿಟ್ರ್ಯಾಪ್‌: ನರ್ಸ್‌ ಸೇರಿ ನಾಲ್ವರು ಅರೆಸ್ಟ್‌

ಹಣ ಮಾಡಲು ಹತ್ತಾರು ದಾರಿಗಳು. ಕೆಲವರು ಹಣಕ್ಕಾಗಿ ಕಷ್ಟಪಟ್ಟು ದುಡಿಯುತ್ತಿದ್ದರೆ, ಇನ್ನೂ ಕೆಲವರು ಅಡ್ಡದಾರಿಯಲ್ಲಿ ಹಣ ಮಾಡಲು ಹೊರಟ್ಟಿದ್ದಾರೆ. ಅದರಂತೆ ಬೆಣ್ಣೆನಗರಿ ದಾವಣಗೆರೆಯಲ್ಲಿ ಒಂದು ಗ್ಯಾಂಗ್, ಶ್ರೀಮಂತರಿಗೆ ಗಾಳ ಹಾಕಿ ಅವರಿಂದ ಹಣ ವಸೂಲಿ ಮಾಡುದ ದಂಧೆ ಮಾಡಿಕೊಂಡಿದೆ. ಹೀಗೆ ಉದ್ಯಮಿಯೊಬ್ಬರನ್ನ ಬಲೆ ಹಾಕಲು ಹೋಗಿ ಗ್ಯಾಂಗ್ ಸಿಕ್ಕಿಬಿದ್ದಿದೆ. ಕಿಲಾಡಿ ನರ್ಸ್ ಕಷ್ಟ ಅಂತ ಹೇಳಿಕೊಂಡು ಉದ್ಯಮಿಯನ್ನ ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸಲು ಹೋಗಿ ತಾನೆ ಜೈಲುಪಾಲಾಗಿದ್ದಾಳೆ.

ಕಷ್ಟ ಅಂತ ಹೇಳಿಕೊಂಡು ದಾವಣೆಗೆರೆ ಉದ್ಯಮಿಗೆ ಹನಿಟ್ರ್ಯಾಪ್‌: ನರ್ಸ್‌ ಸೇರಿ ನಾಲ್ವರು ಅರೆಸ್ಟ್‌
ಬಂಧಿತ ಆರೋಪಿಗಳು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Mar 07, 2026 | 10:22 PM

Share

ದಾವಣಗೆರೆ, (ಮಾರ್ಚ್ 07): ಖಾಸಗಿ ಆಸ್ಪತ್ರೆ ನರ್ಸ್​​, ಕಷ್ಟ ಅಂತ ಹೇಳಿಕೊಂಡು ಉದ್ಯಮಿಯನ್ನು ಬುಟ್ಟಿಗೆ ಹಾಕೊಂಡಿದ್ದು, ಬಳಿಕ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಹೌದು..ದಾವಣಗೆರೆಯ (Davanagere) ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆಯಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣವನ್ನು (Honeytrap Case) ವಿದ್ಯಾನಗರ ಠಾಣೆ ಪೊಲೀಸರು ಭೇದಿಸಿದ್ದು, ಉದ್ಯಮಿಗೆ ಹನಿಟ್ರ್ಯಾಪ್ ಮಾಡಿದ್ದ ಸುಷ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎನ್ನುವ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನಿಟ್ರ್ಯಾಪ್  ಸೂತ್ರದಾರಿ ನರ್ಸ್ ಸುಷ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬುವರು ಬಂಧಿತ ಅರೋಪಿಗಳು.

ಕಷ್ಟದಲ್ಲಿದ್ದೇನೆ ಎಂದು ಹೇಳಿಕೊಂಡು ಹೋಗಿ ಉದ್ಯಮಿ ಪ್ರಭು ಎನ್ನುವರನ್ನು ಬುಟ್ಟಿಗೆ ಹಾಕಿಕೊಂಡಿದ್ದ ನರ್ಸ್, ತನ್ನ ತಂಡದೊಂದಿಗೆ ಸೇರಿ ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸಿದ್ದಳು. ಇದೀಗ ನಾಲ್ವರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ.

ಇದನ್ನೂ ಓದಿ: ದಂಪತಿ ಕೈ, ಕಾಲು ಕಟ್ಟಿ ಸಿನಿಮಾ ಮಾದರಿ ದರೋಡೆ: 4 ತಿಂಗಳ ಬಳಿಕ ಖಾಕಿ ಬಲೆಗೆ ಬಿದ್ದ ಖತರ್ನಾಕ್​​ ಗ್ಯಾಂಗ್​​

ಘಟನೆ ಹಿನ್ನೆಲೆ

ಮೊದಲು ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಷ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಪರಿಚಯ ಮಾಡಿಕೊಂಡ ಬಳಿಕ ಸುಷ್ಮಿಯಾ, ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭು ಅವರನ್ನ ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ಸರ್ವೀಸ್ ಅಪಾರ್ಟ್ಮೆಂಟ್ ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್ ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಆದ್ರೆ, ಕಳೆದ ಒಂದು ವಾರದ ಹಿಂದೆ ಸುಶ್ಮೀತಾ ಜೊತೆ ಆಕೆಯ ಸ್ನೇಹಿತೆ ಕೂಡ ಸರ್ವೀಸ್ ಅಪಾರ್ಟ್ಮೆಂಟ್ ಗೆ ಬಂದಿದ್ದಳು. ಸಂಜನಾಳನ್ನು ಪ್ರತ್ಯೇಕ ರೂಂ ನಲ್ಲಿ ಇರಿಸಿ ಸುಷ್ಮಿತಾ ಹಾಗೂ ಪ್ರಭು ಒಂದು ರೂಮ್ ನಲ್ಲಿ ಇದ್ದರು.ಈ ಸಂದರ್ಭದಲ್ಲಿ ಸಂಜನಾ, ರಾಹುಲ್, ಬೆಕ್ಕಿನಕಣ್ಣು ಕೃಷ್ಣ ಮೂರು ಜನ ಮೊಬೈಲ್ ನಲ್ಲಿ ವೀಡಿಯೋ ಮಾಡಿಕೊಂಡು ಪ್ರಭು ಸುಷ್ಮಿತಾ ಇದ್ದ ರೂಮಿಗೆ ನುಗ್ಗಿದ್ದಾರೆ. ಬಳಿಕ ನಿಮ್ಮ ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿದ್ದಾರೆ. ಅಲ್ಲದೇ ವಿಡಿಯೋ ಆಚೆ ಬರಬಾರದು ಅಂದ್ರೆ 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಸಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ.

ಬಳಿಕ ಅರೋಪಿಗಳಾದ ಚನ್ನಬಸಪ್ಪ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್ ಸೇರಿ ಪ್ರಭುಗೆ ಹಣಕ್ಕಾಗಿ ಬೆದರಿಕೆ ಹಾಕಲು ಶುರುಮಾಡಿದ್ದಾರೆ. ಇದರಿಂದ ಬೇಸತ್ತ ಪ್ರಭು, ಕೊನೆಗೆ ವಿದ್ಯಾನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹಣ ಕೊಡುವದಾಗಿ ಪ್ರಭು ಅವರಿಂದ ಹೇಳಿಸಿ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಕರೆಯಿಸಿಕೊಂಡು ಲಾಕ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More