ರೈತರ ಹೋರಾಟಕ್ಕೆ ಮಣಿದ ಸರ್ಕಾರ; ಭದ್ರಾ ಬಲದಂಡೆ , ಎಡದಂಡೆ ನಾಲೆಗಳಿಗೆ ನೀರು ಬಿಡುಗಡೆ

ಭದ್ರಾ ಜಲಾಶಯದಿಂದ ಬೆಳೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ರೈತರು ಪ್ರತಿಭಟನೆ ನಡೆಸಿದ್ದರು. ಅಷ್ಟೇ ಅಲ್ಲದೇ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರಿನಲ್ಲಿ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಕೂಡ ಯತ್ನಿಸಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದ ಸರ್ಕಾರ ನೀರು ಬಿಡುಗಡೆಗೆ ಅನುಮತಿ ನೀಡಿದೆ.

ರೈತರ ಹೋರಾಟಕ್ಕೆ ಮಣಿದ ಸರ್ಕಾರ; ಭದ್ರಾ ಬಲದಂಡೆ , ಎಡದಂಡೆ ನಾಲೆಗಳಿಗೆ ನೀರು ಬಿಡುಗಡೆ
ಭದ್ರಾ ಜಲಾಶಯ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 26, 2023 | 5:37 PM

ದಾವಣಗೆರೆ, ಸೆ.26: 2023-24 ನೇ ಸಾಲಿನಲ್ಲಿ ಶಿವಮೊಗ್ಗ ಭದ್ರಾ ಜಲಾಶಯ(Bhadra Dam) ದ ಮುಂಗಾರು ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರನ್ನು ಸರದಿಯನ್ವಯ ಹರಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ(KNNL) ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಸುಜಾತ ಅವರು ತಿಳಿಸಿದ್ದಾರೆ. ಭದ್ರಾ ಬಲದಂಡೆ ನಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 15 ರವರೆಗೆ ಒಟ್ಟು 20 ದಿನಗಳು ಹಾಗೂ ಅಕ್ಟೋಬರ್ 26 ರಿಂದ ನವೆಂಬರ್ 17 ರವರೆಗೆ ಒಟ್ಟು 23 ದಿನಗಳು ನೀರನ್ನು ಹರಿಸಲಾಗುವುದು ಎಂದಿದ್ದಾರೆ.

ಭದ್ರಾ ಎಡದಂಡೆ ನಾಲೆಗಳಿಗೆ ಈಗಾಗಲೇ ನೀರನ್ನು ಹರಿಸಲಾಗಿದ್ದು, ಅಕ್ಟೋಬರ್ 1 ರವರೆಗೆ ಒಟ್ಟು 15 ದಿನಗಳು ನೀರನ್ನು ಹರಿಸಲಾಗುತ್ತದೆ. ನಂತರ ಅಕ್ಟೋಬರ್ 12 ರಿಂದ 26 ರವರೆಗೆ ಒಟ್ಟು 15 ದಿನಗಳು ಹಾಗೂ ನವೆಂಬರ್ 6 ರಿಂದ 17 ರವರೆಗೆ ಒಟ್ಟು 12 ದಿನಗಳು ನೀರನ್ನು ಹರಿಸಲಾಗುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:4 ಜಿಲ್ಲೆಗಳ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಕೇವಲ 24 ಗಂಟೆಯಲ್ಲಿ ಹರಿದುಬಂತು 5 TMC ನೀರು

ಹೌದು, ಭದ್ರಾ ಜಲಾಶಯದಿಂದ ಬೆಳೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ರೈತರು ಪ್ರತಿಭಟನೆ ನಡೆಸಿದ್ದರು. ಅಷ್ಟೇ ಅಲ್ಲದೇ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರಿನಲ್ಲಿ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಕೂಡ ಯತ್ನಿಸಿದ್ದರು. ಕೂಡಲೇ ಪೊಲೀಸರು ರೈತನ ಕೈಯಿಂದ ಕ್ರಿಮಿನಾಶಕದ ಬಾಟಲ್ ಕಸಿದುಕೊಂಡಿದ್ದರು. ಬಳಿಕ ರೈತರ ಪ್ರತಿಭಟನೆಯಿಂದ ಎಚ್ಚೆತ್ತ ಸಚಿವ ಎಸ್​ಎಸ್ ಮಲ್ಲಿಕಾರ್ಜುನ ಅವರು ಭದ್ರಾ ನೀರಿನ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿ, ‘ಇನ್ನೇರಡು ದಿನಗಳಲ್ಲಿ ನೀರಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ. ದಾವಣಗೆರೆ ಜಿಲ್ಲೆಗೆ ಭದ್ರಾ ನೀರು ಬರುತ್ತದೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದರು.

ಇನ್ನು ಇದೇ ಆಗಸ್ಟ್​ 10 ರಂದು ನೀರಾವರಿ ಸಲಹಾ ಸಮಿತಿಯವರು ನೀರು ಹರಿಸುವ ಸಂಬಂಧ ಸಭೆ ಆಯೋಜಿಸದೆಯೇ ಭದ್ರಾ ಬಲದಂಡೆ ಕಾಲುವೆಗೆ ನೀರು ಹರಿಸುವ ತೀರ್ಮಾನ ಕೈಗೊಂಡಿತ್ತು. ಅದರಂತೆ ಸತತ 100 ದಿನಗಳ ಕಾಲ ನೀರು ಹರಿಸುವ ಅಧಿಸೂಚನೆಯನ್ನೂ ಹೊರಡಿಸಲಾಗಿತ್ತು. ಭದ್ರ ಬಲ ಮತ್ತು ಎಡದಂಡೆ ಕಾಲುವೆಗಳಿಗೆ ನೀರು ಹರಿಸಿದ್ದರಿಂದ ದಾವಣಗೆರೆ ಜಿಲ್ಲೆಯಲ್ಲಿ 53 ಸಾವಿರ ಹೆಕ್ಟೇರ್​ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿತ್ತು. ಇದೀಗ ನೀರು ಬಿಟ್ಟಿರುವುದು ರೈತರಿಗೆ ಬಲ ಬಂದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
Loading...
Unable to load recommendations.
Follow Us