ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ; ಬಿಜೆಪಿ ಮುಖಂಡರ ನಡೆಗೆ ಸಾರ್ವಜನಿಕರಿಂದ ವಿರೋಧ

ಸೊಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿಯವರು ವಿದ್ಯಾರ್ಥಿನಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ್ದಾರೆ. ಸೊಕ್ಕೆ ಗ್ರಾಮದ ಯುವಕ ಆದರ್ಶ್ ಉಕ್ರೇನ್​ನಲ್ಲಿ ಎಂಬಿಬಿಎಸ್ ಓದುತ್ತಿದ್ದ.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ; ಬಿಜೆಪಿ ಮುಖಂಡರ ನಡೆಗೆ ಸಾರ್ವಜನಿಕರಿಂದ ವಿರೋಧ
ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗೆ ಸ್ವಾಗತ ಕೋರಿದರು
Edited By:

Updated on: Mar 10, 2022 | 10:12 AM

ದಾವಣಗೆರೆ: ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗೆ (Student) ಬಿಜೆಪಿ ಬಾವುಟ (BJP Flag) ಹಿಡಿದು ಸ್ವಾಗತ ಕೋರಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ. ಸೊಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿಯವರು ವಿದ್ಯಾರ್ಥಿನಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ್ದಾರೆ. ಸೊಕ್ಕೆ ಗ್ರಾಮದ ಯುವಕ ಆದರ್ಶ್ ಉಕ್ರೇನ್​ನಲ್ಲಿ ಎಂಬಿಬಿಎಸ್ ಓದುತ್ತಿದ್ದ. ಯುದ್ಧ ಭೂಮಿಯಿಂದ ಆದರ್ಶ್ ಸುರಕ್ಷಿತವಾಗಿ ಇಂದು ಗ್ರಾಮಕ್ಕೆ ಮರಳಿದ್ದಾನೆ. ಈ ವೇಳೆ ಬಿಜಿಪಿ ಬಾವುಟ ಹಿಡಿದು ಸ್ವಾಗತಿಸಿದ್ದಾರೆ. ಬಿಜೆಪಿ ಮುಖಂಡರ ನಡೆಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ.

ಉಕ್ರೇನ್​ನಲ್ಲಿ ಕಟ್ಟಡಗಳು ಧ್ವಂಸ:
ಉಕ್ರೇನ್​ನಲ್ಲಿ ರಷ್ಯಾ ನಡೆಸುತ್ತಿರುವ ಆಕ್ರಮಣ ಕೇವಲ ಸೈನ್ಯವನ್ನು ಗುರಿಯಾಗಿಸಿಕೊಂಡು ಅಲ್ಲ. ಅಲ್ಲಿನ ಅದೆಷ್ಟೋ ವಸತಿ ಕಟ್ಟಡಗಳು, ಆಸ್ಪತ್ರೆ, ಶಾಲೆಗಳೆಲ್ಲ ರಷ್ಯಾ ಬಾಂಬ್​, ಕ್ಷಿಪಣಿ ದಾಳಿಗೆ ಧ್ವಂಸಗೊಂಡಿವೆ. ಬುಧವಾರ ರಷ್ಯಾ ಸೇನೆ ಮರಿಯುಪೋಲ್​​ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಮೇಲೆ ಏರ್​ಸ್ಟ್ರೈಕ್​ ನಡೆಸಿದ್ದು, ಇದರಲ್ಲಿ ಸುಮಾರು 17 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯಾದ ಪಾವ್ಲೊ ಕೈರಿಲೆಂಕೊ ಹೇಳಿದ್ದಾರೆ. ಈ ವಿಡಿಯೋವನ್ನು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ

ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಕಳ್ಳತನ ಆರೋಪ:
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದ ಕುಲೆನಾಡಿ ಎಂಬಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಕಳ್ಳತನ  ಆರೋಪ ಕೇಳಿಬಂದಿದೆ. ನೆರಿಯಾ ಗ್ರಾಮ ಪಂಚಾಯತಿ ಸದಸ್ಯ ಸಚಿನ್ ಮೇಲೆ ಆರೋಪ ಕೇಳಿಬಂದಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 2.4 ಲಕ್ಷ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿದೆ ಅಂತ ಚಿಕ್ಕಮ್ಮ ಚಂದ್ರಾವತಿ ಸಚಿನ್ ಮೇಲೆ ದೂರು ನೀಡಿದ್ದಾರೆ.

ಇದನ್ನೂ ಓದಿ

‘ರಾಧೆ ಶ್ಯಾಮ್​’ ಚಿತ್ರದ ಮುಂಗಡ ಟಿಕೆಟ್​ ಬುಕಿಂಗ್; ಈಗಾಗಲೇ ಹರಿದು ಬಂದಿದ್ದು ಎಷ್ಟು ಕೋಟಿ ರೂಪಾಯಿ​?

Video: ಮರಿಯುಪೋಲ್​ನಲ್ಲಿ ರಷ್ಯಾ ಸೇನೆಯ ದೌರ್ಜನ್ಯ; ಹೆರಿಗೆ ಆಸ್ಪತ್ರೆ ಮೇಲೆ ಏರ್​ಸ್ಟ್ರೈಕ್​​, ಅವಶೇಷಗಳಡಿಯಲ್ಲಿ ಜನರು

Published On - 10:04 am, Thu, 10 March 22