ಹಿಂದೂ ಕಾರ್ಯಕರ್ತರ ಹತ್ಯೆ; ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ರಾಜೀನಾಮೆ ನೀಡಲು ಸಿದ್ಧ: ರೇಣುಕಾಚಾರ್ಯ

ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ರಾಜೀನಾಮೆ ನೀಡಲು ಸಿದ್ಧವಾಗಿದ್ದೇನೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮ ಫೇಸ್ ಬುಕ್ ಅಕೌಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಹಿಂದೂ ಕಾರ್ಯಕರ್ತರ ಹತ್ಯೆ; ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ರಾಜೀನಾಮೆ ನೀಡಲು ಸಿದ್ಧ: ರೇಣುಕಾಚಾರ್ಯ
ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 27, 2022 | 4:27 PM

ದಾವಣಗೆರೆ: ಹಿಂದೂ ಕಾರ್ಯಕರ್ತರ (Hindu Activist) ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ರಾಜೀನಾಮೆ ನೀಡಲು ಸಿದ್ಧವಾಗಿದ್ದೇನೆ ಎಂದು ಬಿಜೆಪಿ (BJP) ಶಾಸಕ ಎಂ.ಪಿ. ರೇಣುಕಾಚಾರ್ಯ (MP Renukacharya) ತಮ್ಮ ಫೇಸ್ ಬುಕ್ (Facebook) ಅಕೌಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಈ ಬಗ್ಗೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ರಾಜೀನಾಮೆ ನೀಡಲು ಸಿದ್ಧವಾಗಿದ್ದೇನೆ ಎಂದು ಹೇಳಿದ್ದಾರೆ.

ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡರೆ ಮಾತ್ರ ಸರ್ಕಾರದಲ್ಲಿ ಮುಂದುವರಿಯುತ್ತೇನೆ. ಇಲ್ಲದಿದ್ದರೆ ರಾಜೀನಾಮೆ ನೀಡುತ್ತೇನೆ. ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನೆಡೆಯುತ್ತಿದ್ದು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ನಮ್ಮ ಸರ್ಕಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ ಎಂದು ಎಚ್ಚರಿಕೆ ನೀಡಿದ್ದಾರೆ.

ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ? ಪ್ರತಿ ಬಾರಿ ಹಿಂದೂ ಕಾರ್ಯಕರ್ತರುಗಳ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್​​ಗಳಿಂದ ಏನೂ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಸರ್ಕಾರ ಹಿಂದೂ ಕಾರ್ಯಕರ್ತರ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು. ನನಗೆ ವೈಯಕ್ತಿಕವಾಗಿ ಅಧಿಕಾರಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಚಿಸುತ್ತಿದ್ದೇನೆ ಎಂದು ತಿಳಿಸಿದರು.

ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ನಮ್ಮ ಪೊಲೀಸ್ ಇಲಾಖೆ ಇದುವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ. ಜನತೆಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ಧಾಕ್ಷಣ್ಯ ಕ್ರಮಗಗಳು ಎಂದು ಆಕ್ರೋಶ ಹೊರಹಾಕಿದ್ದಾರೆ.

ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದೇನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತನಾಡಿದ್ದೇನೆ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದೇನೆ. ನಾನು ಭೇಟಿಯಾದ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ನಮ್ಮದೇ‌ ಸರ್ಕಾರ‌ ಇದೆ. ಸರ್ಕಾರವನ್ನ‌ ಮುಜುಗರಕ್ಕೀಡು ಮಾಡುವುದಿಲ್ಲ. ನಮಗೂ ನೋವಿದೆ, ಒಳಸಂಚು ರೂಪಿಸುವವರ ವಿರುದ್ಧ ಕಠಿಣ‌ ಕ್ರಮ ಕೈಗೊಳ್ಳಬೇಕಿದೆ ಎಂದರು.

ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಹೀಗಾಗಿ‌ ಬೇಸರ ಇದೆ. ಅದಕ್ಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಾಗಿದ್ದೇನೆ. ಕಾರ್ಯಕರ್ತರು, ಮುಖಂಡರು ನನಗೆ ಫೋನ್ ಮಾಡುತ್ತಿದ್ದಾರೆ. ಉತ್ತರ ಕೊಡೋಕೆ ಆಗುತ್ತಿಲ್ಲ. ನನಗೆ‌ ಬಿ‌‌ಫಾರಂ ಕೊಟ್ಟಿರೋದು ಪಕ್ಷ. ಶಾಸಕನಾಗಿ ಆಯ್ಕೆ ಮಾಡಿರೋದು ಜನರು, ‌ಕಾರ್ಯಕರ್ತರು. ಕಾರ್ಯಕರ್ತರ, ಮುಖಂಡರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ನಾನು ಎಲ್ಲಾ ತ್ಯಾಗಕ್ಕೂ ಸಿದ್ಧ ಎಂದು ಹೇಳಿದ್ದಾರೆ.

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ