ಹಿಂದೂ ಮುಸ್ಲಿಂ ಪ್ರೇಮ: ಅನ್ಯ ಧರ್ಮ ವಿವಾಹಕ್ಕೆ ವಿರೋಧ, ನದಿಗೆ ಹಾರಿದ ಪ್ರೇಮಿಗಳು
ಮುಸ್ಲಿಂ ಯುವಕ, ಹಿಂದೂ ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಇದಕ್ಕೆ ಯುವತಿ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಮನೆ ಬಿಟ್ಟು ಮೈಸೂರು, ಶಿವಮೊಗ್ಗ ಸುತ್ತಾಡಿ ಕೊನೆಗೆ ಸಾಯುವ ನಿರ್ಧಾರ ಕೈಗೊಂಡು ಹೊನ್ನಾಳಿಗೆ ಬಂದಿದ್ದು, ನಂತರ ತುಂಗಾಭದ್ರಾ ನದಿಗೆ ಹಾರಿದ್ದಾರೆ. ಆದ್ರೆ, ಅದೃಷ್ಟವಶಾತ್ ನೀರು ಕಡಿಮೆ ಇದ್ದರಿಂದ ಪ್ರೇಮಿಗಳು ಬದುಕುಳಿದಿದ್ದಾರೆ.

ದಾವಣಗೆರೆ, (ಮಾರ್ಚ್ 10): ತಮ್ಮ ಪ್ರೀತಿಗೆ (Love) ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಮುಸ್ಲಿಂ (Hindu Muslim) ಜೋಡಿಯೊಂದು ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ನದಿಯಲ್ಲಿ ನೀರು ಕಡಿಮೆ ಇದ್ದರಿಂದ ಪ್ರೇಮಿಗಳು ಬದುಕುಳಿದಿದ್ದಾರೆ. ಸಾಯಲು ಯತ್ನಿಸಿದವರನ್ನು ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳಾದ ಸಿಂಚನ ಹಾಗೂ ಸಮೀರ್ ಎಂದು ಗುರುತಿಸಲಾಗಿದೆ. ಇನ್ನು ಈ ಜೋಡಿ ಈಜಿ ನದಿಯ ಮಧ್ಯ ದ್ವೀಪದಂತಿದ್ದ ನಡುಗಡ್ಡೆಯಲ್ಲಿ ಆಶ್ರಯ ಪಡೆದು ಗಮನ ಸೆಳೆದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಇಬ್ಬರನ್ನು ರಕ್ಷಿಸಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ ಸೇರಿದ ಸಮೀರ್ ಹಾಗೂ ಹಿಂದೂ ಧರ್ಮದ ಸಿಂಚನ ಪರಸ್ಪರ ಪ್ರೀತಿಸುತ್ತಿದ್ದು, ಮದುವೆ ಮಾಡಿಕೊಳ್ಳಲು ತೀರ್ಮಾನಿಸಿದ್ದರು. ಆದ್ರೆ, ಅನ್ಯ ಧರ್ಮ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೋಡಿ ಸಾಯುವುದಕ್ಕೆ ಮುಂದಾಗಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
ಇದಕ್ಕೂ ಮೊದಲು ಈ ಜೋಡಿ ಮನೆ ಬಿಟ್ ಹೋಗಿದ್ದು, ಮೈಸೂರು, ಶಿವಮೊಗ್ಗ ಸುತ್ತಾಡಿ ಬಳಿಕ ಹೊನ್ನಾಳಿಗೆ ಬಂದಿದ್ದು, ಬಳಿಕ ತುಂಗಭದ್ರ ಸೇತುವೆ ಮೇಲಿಂದ ನದಿಗೆ ಹಾರಿದೆ. ಆದ್ರೆ, ಅದೃಷ್ಟವಶಾತ್ ನದಿಯಲ್ಲಿ ನೀರು ಕಡಿಮೆ ಇದ್ದರಿಂದ ಈಜಿ ಹೋಗಿ ನಡುಗಡ್ಡೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಇನ್ನು ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಪ್ರೇಮಿಗಳನ್ನು ರಕ್ಷಿಸಿ ನಡುಗಡ್ಡೆಯಿಂದ ದಡಕ್ಕೆ ಕರೆತಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:29 pm, Tue, 10 March 26