ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ: ಅತಂಕದಲ್ಲಿ ಕುಟುಂಬ
ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರ ಪ್ರಥಮ ದರ್ಜೆಯ ಗುತ್ತಿಗೆದಾರನ ಪುತ್ರ ಕಾಣೆಯಾಗಿದ್ದಾನೆ. ಈ ಬಗ್ಗೆ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದಾವಣಗೆರೆ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ (mp renukacharya) ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದು, ಕಳೆದ ಎರಡು ದಿನಗಳಿಂದ ಅವರ ಸುಳಿವು ಸಿಗುತ್ತಿಲ್ಲ ಎಂದು ಕುಟುಂಬದವರು ಆತಂಕದಲ್ಲಿದ್ದಾರೆ.
ಶಾಸಕ ರೇಣುಕಾಚಾರ್ಯ ಅವರ ಸಹೋದರ ಪ್ರಥಮ ದರ್ಜೆ ಗುತ್ತಿಗೆದಾರ ಎಂ.ಪಿ. ರಮೇಶ್ ಅವರ ಪುತ್ರ ಚಂದ್ರಶೇಖರ್ ಭಾನುವಾರದಿಂದ ನಾಪತ್ತೆಯಾಗಿದ್ದಾರೆ. ಇದರಿಂದ ಕಂಗಲಾರುವ ಕುಟುಂಬಸ್ಥರು ಅಲ್ಲಿ-ಇಲ್ಲಿ ಹುಡುಕಾಡುತ್ತಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿರುವ ಮನೆಯಿಂದ ಭಾನುವಾರದಿಂದ ಚಂದ್ರಶೇಖರ್ ನಾಪತ್ತೆಯಾಗಿದ್ದಾರೆ. ಚಂದ್ರಶೇಖರ್ ಎಲ್ಲಿ ಹೋಗಿದ್ದಾರೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಕುಟುಂಬದವರು ಆತಂಕಕ್ಕೀಡಾಗಿದ್ದಾರೆ.
ಎರದು ದಿನದಿಂದ ಹುಡುಕಿದರೂ ಚಂದ್ರಶೇಖರ್ ಸುಳಿವು ಸಿಗದಿದ್ದಕ್ಕೆ ಆತಂಕಗೊಂಡ ಕುಟುಂಬಸ್ಥರು ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಸಹ ಚಂದ್ರಶೇಖರ್ ಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ