AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರು ಎಲ್ಲಿದ್ದಿಯೋ..ಬಾರೋ… ಅಣ್ಣನ ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ಶಾಸಕ ರೇಣುಕಾಚಾರ್ಯ

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಯಾವುದೇ ಸುಳಿವು ಸಿಗದಂತಾಗಿದೆ. ಇದರಿಂದ ಶಾಸಕ ರೇಣುಕಾಚಾರ್ಯ ಅಣ್ಣನ ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಚಂದ್ರು ಎಲ್ಲಿದ್ದಿಯೋ..ಬಾರೋ... ಅಣ್ಣನ ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ಶಾಸಕ ರೇಣುಕಾಚಾರ್ಯ
MP Renukacharya
TV9 Web
| Edited By: |

Updated on:Nov 01, 2022 | 10:30 PM

Share

ದಾವಣಗೆರೆ:  ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ (mp renukacharya) ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದಾನೆ. ಕಳೆದ ಎರಡು ದಿನಗಳಿಂದ ಚಂದ್ರಶೇಖರ್ ಬಗ್ಗೆ ಯಾವುದೇ ಸುಳಿವು ಸಿಗದಂತಾಗಿದೆ. ಇದರಿಂದ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಇನ್ನು ಶಾಸಕ ಎಂಪಿ ರೇಣುಕಾಚಾರ್ಯ ತಮ್ಮ ಸಹೋದರನ ಮಗನನ್ನು ನೆನೆದು, ಚಂದ್ರು ಎಲ್ಲಿದ್ದಿಯೋ ಬಾರೋ ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ.

ಬಹಳ ಅಧ್ಯಾತ್ಮಿಕತೆಗೆ ಹೆಚ್ಚು ಒತ್ತು ನೀಡ್ತಿದ್ದಾ ಚಂದ್ರಶೇಖರ್ ಭಾನುವಾರ ಸಂಜೆ ಆರು ಗಂಟೆಗೆ ಶಿವಮೊಗ್ಗ ಜಿಲ್ಲೆಯ ಗೌರಿಗದ್ದೆಗೆ ಆಗಮಿಸಿದ್ದ ವಿನಯ್ ಗುರುಜೀಯವರನ್ನು ಸ್ನೇಹಿತ್ ಕಿರಣ್ ರೊಂದಿಗೆ ಭೇಟಿ ಮಾಡಿ ಕೆಲವರಿಗೆ ಊಟ ಬಡಿಸಿದ್ದಾನೆ. ಅದಾದ ಬಳಿಕ ಶಿವಮೊಗ್ಗದಿಂದ ಹಿಂದಿರುಗಿದ ಚಂದ್ರು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿಗೆ ಎಂಟ್ರಿ ಆಗಿದ್ದೇ ಕೊನೆ ಇಲ್ಲಿತನಕ ಚಂದ್ರಶೇಖರ್ ಕಾರು ಸಮೇತ ನಾಪತ್ತೆಯಾಗಿದ್ದಾನೆ. ಇನ್ನು ಪೋಲಿಸರು ಕುಟುಂಬಸ್ಥರು ಕೂಡ ಸಾಕಷ್ಟು ಹುಡುಕಾಟ ನಡೆಸುತ್ತಿದ್ದು, ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಶಾಸಕ ರೇಣುಕಾಚಾರ್ಯ ಕಣ್ಣೀರಿಟ್ಟರು.

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ: ಅತಂಕದಲ್ಲಿ ಕುಟುಂಬ

ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದ ಚಂದ್ರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದು ಕುಟುಂಬಸ್ಥರಿಗೆ ಆತಂಕಕ್ಕೆ ದೂಡಿದೆ. ಇನ್ನು ಚಂದ್ರಶೇಖರ್ ತಂದೆ ರಮೇಶ್ ತಲೆ ಮೇಲೆ ಕೈ ಹೊತ್ತು ಕೂತಿರುವ ದೃಶ್ಯಗಳು ಮನಸ್ಸಿಗೆ ರಾಚುವಂತ್ತಿತ್ತು.

ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ಚಂದ್ರಶೇಖರ್ ಕಾರು ಪಾಸ್ ಆಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭಾನುವಾರ ರಾತ್ರಿ 11.56ಕ್ಕೆ ಶಿವಮೊಗ್ಗದಿಂದ ವಾಹನ ಪಾಸ್ ಆಗಿದ್ದು, ಸೋಮವಾರ ಬೆಳಿಗ್ಗೆ 6.48 ಮೊಬೈಲ್ ಪೋನ್ ಲಾಸ್ಟ್ ಲೊಕೇಶನ್ ತೋರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಾವಣಗೆರೆ ಪೊಲೀಸರಿಂದ ತೀವ್ರ ತಪಾಸಣೆ ಕಾರ್ಯ ಮುಂದುವರೆದಿದ್ದು, ಚಂದ್ರಶೇಖರ್ ಅವರ ಚಲಾಯಿಸುತ್ತಿದ್ದ ಕ್ರೇಟಾ ಕಾರು ಸಹ ಇದುವರೆಗು ಪತ್ತೆಯಾಗದೆ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

KA 17 MA 2534 ಕ್ರೇಟಾ ಕಾರು ಸಹ ಪತ್ತೆಯಾಗಿಲ್ಲ, ಇನ್ನು ಚಂದ್ರಶೇಖರ್ ಮೊಬೈಲ್ ಸಂಖ್ಯೆ 8792667691 ಸ್ವಿಚ್ ಆಪ್ ಆಗಿದೆ. ಇದರಿಂದ ಕುಟುಂಬಸ್ಥರು ಕಂಗಾಲಾಗಿದ್ದು, ಶಿವಮೊಗ್ಗ ದಾವಣಗೆರೆ ಚಿತ್ರದುರ್ಗ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಇನ್ನು ತಮ್ಮ ನಾಯಕನಿಗೆ ಸಮಾಧಾನ ಮಾಡಲು ಎಂಪಿ ರೇಣುಕಾಚಾರ್ಯ ರ ನಿವಾಸಕ್ಕೆ ಆಪಾರ ಸಂಖ್ಯೆಯ ಕಾರ್ಯಕರ್ತರು ಅಭಿಮಾನಿಗಳು ಆಗಮಿಸುತ್ತಿದ್ದಾರೆ.

Published On - 10:22 pm, Tue, 1 November 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ