ಹಿಜಾಬ್, ಹಲಾಲ್ ವಿರುದ್ಧ ಧ್ವನಿ ಎತ್ತಿದಾಗ ನನಗೆ, ನನ್ನ ಮಗನಿಗೆ ದುಬೈನಿಂದ ಬೆದರಿಕೆ ಕರೆ ಬಂದಿತ್ತು: ರೇಣುಕಾಚಾರ್ಯ

‘ನಾನು ಈ ಹಿಂದೆ ಹಿಜಾಬ್​, ಆಜಾನ್ ಹಾಗೂ ಹಲಾಲ್​ ವಿರುದ್ಧ ಧ್ವನಿ ಎತ್ತಿದ್ದೆ. ಆಗ ದುಬೈನಿಂದ ನನಗೆ, ನನ್ನ ಮಗನಿಗೆ ಬೆದರಿಕೆ ಕರೆ ಬಂದಿತ್ತು. ಆದರೆ ಪೊಲೀಸರು ಮಾತ್ರ ಯಾವುದೇ ತನಿಖೆ ಮಾಡಿರಲಿಲ್ಲ’ -ರೇಣುಕಾಚಾರ್ಯ

ಹಿಜಾಬ್, ಹಲಾಲ್ ವಿರುದ್ಧ ಧ್ವನಿ ಎತ್ತಿದಾಗ ನನಗೆ, ನನ್ನ ಮಗನಿಗೆ ದುಬೈನಿಂದ ಬೆದರಿಕೆ ಕರೆ ಬಂದಿತ್ತು: ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 06, 2022 | 2:26 PM

ದಾವಣಗೆರೆ: ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ (MP Renukacharya) ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣವು ದಿನಕಳೆದಂತೆ ಹಲವು ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ನಿನ್ನೆಯಷ್ಟೇ (ನ 5) ಪೊಲೀಸರ ವಿರುದ್ಧ ಹರಿಹಾಯ್ದಿದ್ದ ರೇಣುಕಾಚಾರ್ಯ ತನಿಖೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಅಲವತ್ತುಕೊಂಡಿದ್ದರು. ಚಂದ್ರಶೇಖರ್ (Chandrashekhar) ಅವರು ಅಪಘಾತದಲ್ಲಿ ಮೃತಪಟ್ಟಿಲ್ಲ. ಅವರನ್ನು ಕೊಲೆ ಮಾಡಲಾಗಿದೆ ಎಂದೇ ರೇಣುಕಾಚಾರ್ಯ ಪ್ರತಿಪಾದಿಸುತ್ತಿದ್ದರು. ಇದೀಗ ಮತ್ತೊಮ್ಮೆ ಇದೇ ವಿಚಾರಕ್ಕೆ ಪುಷ್ಟಿಕೊಡುವಂತೆ ರೇಣುಕಾಚಾರ್ಯ ಮಾತನಾಡಿದ್ದಾರೆ.

‘ನಾನು ಈ ಹಿಂದೆ ಹಿಜಾಬ್​, ಆಜಾನ್ ಹಾಗೂ ಹಲಾಲ್​ ವಿರುದ್ಧ ಧ್ವನಿ ಎತ್ತಿದ್ದೆ. ಆಗ ದುಬೈನಿಂದ ನನಗೆ, ನನ್ನ ಮಗನಿಗೆ ಬೆದರಿಕೆ ಕರೆ ಬಂದಿತ್ತು. ಆದರೆ ಪೊಲೀಸರು ಮಾತ್ರ ಯಾವುದೇ ತನಿಖೆ ಮಾಡಿರಲಿಲ್ಲ. ನಾಳೆ (ನ 7) ವಿಚಾರಣೆಗೆ ಬರಲು ಸದಾಶಿವನಗರ ಪೊಲೀಸರು ಸೂಚಿಸಿದ್ದಾರೆ. ಪ್ರಕರಣ ನಡೆದು ಹಲವು ತಿಂಗಳು ಕಳೆದಿದೆ. ಈಗ ವಿಚಾರಣೆಗೆ ಕರೆದಿದ್ದಾರೆ’ ಎಂದು ರೇಣುಕಾಚಾರ್ಯ ವಿಷಾದಿಸಿದರು.

ಚಂದ್ರಶೇಖರ್ ಕೊಲೆ ಬಗ್ಗೆ ಈಗಾಗಲೇ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಯ ಜೊತೆಗೆ ಮಾತನಾಡಿದ್ದೇನೆ. ಸೂಕ್ತ ತನಿಖೆ ನಡೆಸುವುದಾಗಿ ಅವರು ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಬುಧವಾರ ಭೇಟಿಯಾಗುತ್ತೇನೆ ಎಂದು ಅವರು ತಿಳಿಸಿದರು. ನನಗೆ ಬೆದರಿಕೆ ಕರೆ ಬಂದಾಗಲೇ ನಾನು ದೂರು ಕೊಟ್ಟಿದ್ದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಅವರು ತನಿಖೆಯನ್ನೇ ಮಾಡಲಿಲ್ಲ. ಮಾಧ್ಯಮಗಳಲ್ಲಿ ಸುದ್ದಿ ಬರಲು ಆರಂಭಿಸಿದ ಮೇಲೆ ಕರೆ ಮಾಡಿ ಠಾಣೆಗೆ ಬನ್ನಿ ಎನ್ನುತ್ತಿದ್ದಾರೆ ಎಂದು ವಿಷಾದಿಸಿದರು.

ಪೊಲೀಸ್ ಇಲಾಖೆ ಈ ಪ್ರಕಣದಲ್ಲಿ ಆರಂಭದಿಂದಲೂ ನಿರ್ಲಕ್ಷ್ಯ ತೋರಿಸುತ್ತಿದೆ. ನಾನು ಹಲವು ವಿಷಯಗಳ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹಸಚಿವರೊಂದಿಗೆ ಮಾತನಾಡಿದ್ದೇನೆ. ರಾಜ್ಯದಲ್ಲಿರುವುದು ನಮ್ಮ ಸರ್ಕಾರ, ನಮ್ಮವರೇ ಮುಖ್ಯಮಂತ್ರಿ. ಹೀಗಾಗಿ ಎಲ್ಲವನ್ನೂ ಮಾಧ್ಯಮಗಳ ಎದುರು ಬಹಿರಂಗಪಡಿಸಲು ಆಗುವುದಿಲ್ಲ. ಯಾವ ತನಿಖಾ ತಂಡದಿಂದ ಹಾಗೂ ಯಾವ ಅಧಿಕಾರಿಯಿಂದ ತನಿಖೆ ಮಾಡಿಸಬೇಕು ಎಂದು ಅವರು ನಿರ್ಧರಿಸಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು. ಇತ್ತೀಚಿನ ದಿನಗಳಲ್ಲಿ ರೇಣುಕಾಚಾರ್ಯ ಹಲವು ಬಾರಿ ಪೊಲೀಸ್ ಇಲಾಖೆಯ ವಿರುದ್ಧ ಹರಿಹಾಯ್ದಿರುವುದನ್ನು ಇಲ್ಲಿ ಸ್ಮರಿಸಬಹುದು.

ಅಧಿಕಾರಿಗಳಿಗೆ ಹಲವು ಅನುಮಾನ

ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆಟೊ ಡ್ಯಾಮೇಜ್ ಪರಿಣಿತರು ಮತ್ತು ವಿಧಿವಿಜ್ಞಾನ ತಜ್ಞರು ಕ್ಲೆವರ್ ವೆರಿಫಿಕೇಷನ್ (Clever Verification) ಆರಂಭಿಸಿದ್ದು, ಹಲವು ಆಯಾಮಗಳಿಂದ ಪರಿಶೀಲನೆ ಮಾಡುತ್ತಿದ್ದಾರೆ. ಚಂದ್ರಶೇಖರ್ ಸಾವಿಗೆ (Chandrashekhar Death) ಅಪಘಾತ ಕಾರಣವಲ್ಲ, ಅದು ಕೊಲೆ ಎಂದು ಕುಟುಂಬ ಸದಸ್ಯರು ಈಗಾಗಲೇ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ‘4R’ ನಿಯಮದ ಅನ್ವಯ ಪರಿಶೀಲನೆಗೆ ಮುಂದಾಗಿದ್ದಾರೆ. ಪ್ರಸ್ತುತ ಕಾರಿಗೆ ಆಗಿರುವ ಹಾನಿಯ ಬಗ್ಗೆಯೇ ಗಮನ ಕೇಂದ್ರೀಕರಿಸಲಾಗಿದೆ.

‘4R’ (Ridges on Radial cracks are at Right angle to the Rear) ನಿಯಮಗಳ ಅನ್ವಯ ಕಾರಿನ ಗಾಜು ಒಡೆದಿರುವ ರೀತಿಯನ್ನು ಪರಿಶೀಲಿಸಲಾಗುತ್ತಿದೆ. ಅಪಘಾತ, ಗಲಭೆ, ಪ್ರತಿಭಟನೆಗಳ ಸಂದರ್ಭದಲ್ಲಿ ಯಾವುದಾದರೂ ವಾಹನಕ್ಕೆ ಹಾನಿಯಾದ ಸಂದರ್ಭದಲ್ಲಿ ‘4R’ ನಿಯಮಗಳ ಅನ್ವಯ ಪರಿಶೀಲನೆ ಮಾಡಲಾಗುತ್ತದೆ. ಈ ನಿಯಮದ ಪ್ರಕಾರ ಪರಿಶೀಲನೆ ಮಾಡಿದರೆ ಗಾಜು ಒಡೆದಿರುವ ರೀತಿಯ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ. ಸದ್ಯ ಚಂದ್ರಶೇಖರ್ ಇದ್ದ ಕಾರು ನಾಲೆಯಲ್ಲಿ ಪತ್ತೆ ಹಿನ್ನೆಲೆಯಲ್ಲಿ ಗಾಜಿಗೆ ಆಗಿರುವ ಹಾನಿಯ ಬಗ್ಗೆ ಹಲವು ಆಯಾಮಗಳಿಂದ ಪರಿಶೀಲನೆ ಮಾಡಲಾಗುತ್ತಿದೆ.

ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ