ದಾವಣಗೆರೆ: ಶಿಥಿಲಾವಸ್ಥೆಯಲ್ಲಿದ್ದ ಮನೆಯ (House) ಕಾಂಪೌಂಡ್ (Compound) ಕುಸಿದು ಬಾಲಕ (Boy) ಸಾವನ್ನಪ್ಪಿರುವ ಘಟನೆ ನಗರದ ಬಸಾಪುರದಲ್ಲಿ ನಡೆದಿದೆ. ನಾಗಾರ್ಜುನ (11) ಮೃತ ಬಾಲಕ. ಬಾಲಕ ಆಟವಾಡುವಾಗ, ಸಿದ್ದಪ್ಪ ಎಂಬುವರಿಗೆ ಸೇರಿದ ಶಿಥಿಲಾವಸ್ಥೆಯಲ್ಲಿದ್ದ ಮನೆಯ ಕಾಂಪೌಂಡ್ ಕುಸಿದು ಅವಘಡ ಸಂಭವಿಸಿದೆ. ಮಾಲೀಕ ಸಿದ್ದಪ್ಪ ಬೇರೆ ಕಡೆ ವಾಸವಾಗಿದ್ದಾನೆ. ಮಾಲೀಕ ಸಿದ್ದಪ್ಪ ವಿರುದ್ಧನಗರದ ಆರ್ಎಮ್ಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೋಲಾರ: ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ಇರುವ ಕ್ವಾರಿಹಳ್ಳದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ದರ್ಶಿನಿ (24) ಮೃತ ವಿದ್ಯಾರ್ಥಿನಿ. ಕ್ವಾರೆಯಲ್ಲಿನ ನೀರಿಗೆ ಜಿಗಿದು ದರ್ಶಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬಳ್ಳಾರಿ ಮೂಲದ ವಿದ್ಯಾರ್ಥಿನಿ ದರ್ಶಿನಿ ಹೊಸಕೋಟೆ ತಾಲೂಕಿನ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪಿಡಿಯಾಟ್ರಿಕ್ ವ್ಯಾಸಾಂಗ ಮಾಡುತ್ತಿದ್ದರು. ಇನ್ನು ದರ್ಶಿನಿ ಸಾವಿಗು ಮುಂಚೆ ಸ್ನೇಹಿತರಿಗೆ ದೂರವಾಣಿ ಕರೆ ಮಾಡಿದ್ದಾಳೆ ಎಂಬುವುದು ತಿಳಿದು ಬಂದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ದರ್ಶನಿಯ ಶವ ಹೊರತೆಗೆದಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ
ಧಾರವಾಡ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ತಾಯಿ ಇಲ್ಲದ ವೇಳೆ ಸಹೋದರಿಯರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಯಚೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ. ವಿರೂಪಾಕ್ಷ ಅರಕೇರಾ ಜುಟಮರಡಿ ಕೆಇಬಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಇಂದು(ಜೂ.4) ವಿದ್ಯುತ್ ಪೂರೈಕೆಯ ಸಮಸ್ಯೆಯನ್ನು ಪರಿಹರಿಸಲು ಕಂಬ ಹತ್ತಿದ್ದನು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು, ವಿದ್ಯುತ್ ಕಂಬದ ಮೇಲೆಯೇ ಕೊನೆಯುಸಿರೆಳದಿದ್ದಾನೆ. ಈ ಕುರಿತು ದೇವದುರ್ಗ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:07 pm, Sun, 4 June 23