ರೈತರಿಗೆ ಹಣ ನೀಡದಿದ್ದರೇ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುವೆ; ಸರ್ಕಾರಕ್ಕೆ ಕಾಂಗ್ರೆಸ್ ಶಾಸಕ ಎಚ್ಚರಿಕೆ ​

| Updated By: ವಿವೇಕ ಬಿರಾದಾರ

Updated on: Nov 18, 2023 | 11:42 AM

ರೈತರಿಗೆ ನೀಡಬೇಕಿರುವ ಹಣ ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಜಗಳೂರು ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರಿಗೆ ಹಣ ನೀಡದಿದ್ದರೇ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುವೆ; ಸರ್ಕಾರಕ್ಕೆ ಕಾಂಗ್ರೆಸ್ ಶಾಸಕ ಎಚ್ಚರಿಕೆ ​
ಶಾಸಕ ದೇವೇಂದ್ರಪ್ಪ
Follow us on

ದಾವಣಗೆರೆ ನ.18: ರೈತರಿಗೆ ನೀಡಬೇಕಿರುವ ಹಣ ಬಿಡುಗಡೆ ಮಾಡದಿದ್ದರೇ ಶಾಸಕ (MLA) ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಜಗಳೂರು ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ (Devendrappa) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಖರೀದಿಸಿದ ರಾಗಿಗೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ಬಗಿಲೆದ್ದಿದ್ದು, ಜಗಳೂರು ಪಟ್ಟಣದಲ್ಲಿನ ಆಹಾರ ಇಲಾಖೆಯ ಗೋದಾಮಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ದೇವೇಂದ್ರಪ್ಪ, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಕರೆ ಮಾಡಿ ವಾರದೊಳಗೆ ರೈತರಿಗೆ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರ ರೈತರಿಂದ ರಾಗಿ ಖರೀದಿಸಿ 1 ವರ್ಷವಾಗಿದ್ದು, ನೀಡಬೇಕಿರುವ 5 ಕೋಟಿ ರೂ. ಬಾಕಿ ಹಣವನ್ನು ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಜಗಳೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಶಾಸಕ ಯಶವಂತರಾಯ ಎಚ್ಚರಿಕೆ

ಇದೇ ರೀತಿಯಾಗಿ ಈ ಹಿಂದೆ  ವಿಜಯಪುರ ಜಿಲ್ಲೆಯಲ್ಲಿ ಭೀಕರ ಬರ ಇದ್ದರೂ ಇಂಡಿ ಕ್ಷೇತ್ರದ ಕಟ್ಟ ಕಡೆಯ ಹಳ್ಳಿಗಳಿಗೆ ಕಾಲುವೆ ನೀರು ಬಾರದ ಹಿನ್ನೆಲೆಯಲ್ಲಿ ಇಂಡಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಯಶವಂತರಾಯ ಗೌಡ ಸಿಡಿದೆದ್ದಿದ್ದರು. ನನ್ನ ಕ್ಷೇತ್ರಕ್ಕೆ ನೀರು ಬಿಡದಿದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಎಚ್ಚರಿಕೆ ನೀಡಿದ್ದರು. ಈ ಮೂಲಕ ಜಿಲ್ಲಾಡಳಿತದ ವಿರುದ್ಧ ರೊಚ್ಚಿಗೆದ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:42 am, Sat, 18 November 23