ದಾವಣಗೆರೆ: ನೆಚ್ಚಿನ ಶಿಕ್ಷಕನ ವರ್ಗಾವಣೆ! ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 09, 2023 | 12:55 PM

ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದೈಹಿಕ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದು, ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿಗಳು, ನಮ್ಮ ನೆಚ್ಚಿನ ಶಿಕ್ಷಕರು ನಮಗೆ ಬೇಕೆಂದು ಕಣ್ಣೀರಿಡುತ್ತಾ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ವಿದ್ಯಾರ್ಥಿಗಳ ಪೋಷಕರು ಸಾಥ್​ ನೀಡಿದ್ದಾರೆ.

ದಾವಣಗೆರೆ: ನೆಚ್ಚಿನ ಶಿಕ್ಷಕನ ವರ್ಗಾವಣೆ! ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು
ದಾವಣಗೆರೆ
Follow us on

ದಾವಣಗೆರೆ, ಆ.8: ಗುರು ಶಿಷ್ಯರ ಸಂಬಂಧವನ್ನು ಬಣ್ಣಿಸಲು ಸಾಧ್ಯವೇ, ಅದರಲ್ಲೂ ಗ್ರಾಮೀಣ ಪ್ರದೇಶದ ಮಕ್ಕಳಂತೂ ಶಾಲೆಯ ಶಿಕ್ಷಕರೊಟ್ಟಿಗೆ ಅವಿನಾಭಾವ ಸಂಬಂಧ ಹೊಂದಿರುತ್ತಾರೆ. ಅದರಂತೆ ಇದೀಗ ತಮ್ಮ ನೆಚ್ಚಿನ ಶಿಕ್ಷಕನ ವರ್ಗಾವಣೆ ಕಂಡಿಸಿ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ದಾವಣಗೆರೆ(Davanagere) ತಾಲ್ಲೂಕಿನ ಎಲೆಬೇತೂರು ಗ್ರಾಮದ ಪ್ರೌಢಶಾಲೆಯ ಮುಂಭಾಗದಲ್ಲಿ ಕಂಡುಬಂದಿದೆ. ಹೌದು, ಕೊಂಡಜ್ಜಿ ಬಸಪ್ಪ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕ(Teacher)ರಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ್ ಪಾಟೀಲ್ ಎಂಬುವವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿತ್ತು. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕಾರ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಕಣ್ಣೀರಿಡುತ್ತಾ ಪ್ರತಿಭಟನೆ ಮಾಡುತ್ತಿರುವ ನೂರಾರು ಮಕ್ಕಳು

ಹೌದು, ನಮ್ಮ ಟೀಚರ್ ಬೇಕೇ ಬೇಕು ಎಂದು ನೂರಾರು ಮಕ್ಕಳು ಶಾಲೆಯ ಅವರಣದಲ್ಲಿ ಕೂತು ಕಣ್ಣೀರಿಡುತ್ತಾ ಪ್ರತಿಭಟನೆ ಮಾಡುತ್ತಿದ್ದಾರೆ. ಶಾಲಾ ಅಡಳಿತ ಮಂಡಳಿಯಿಂದ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಒಂದು ವಾರ ಕಾಲಾವಕಾಶ ಕೇಳಿದ ಅಡಳಿತ ಮಂಡಳಿಯವರು, ಮತ್ತೆ ಶಿಕ್ಷಕರನ್ನು ವಾಪಸ್ಸು ಕರೆಸುವ ಭರವಸೆ ನೀಡಿದ್ದಾರೆ. ಆದರೂ, ವಿದ್ಯಾರ್ಥಿಗಳು ಮಾತ್ರ, ಯಾವುದಕ್ಕೂ ಒಪ್ಪುತ್ತಿಲ್ಲ. ಇನ್ನು ಪಟ್ಟು ಹಿಡಿದು ಶಾಲೆಯ ಗೇಟ್ ಮುಂಭಾಗವೇ ಪ್ರತಿಭಟನೆಗೆ ಕೂತ ಮಕ್ಕಳಿಗೆ ಪೋಷಕರು ಕೂಡ ಸಾಥ್ ನೀಡಿದ್ದಾರೆ.

ಇದನ್ನೂ ಓದಿ:Revenge: ಅಯ್ಯೋ! ಇದೆಂಥಾ ರಿವೇಂಜ್, ಲಂಚ ಕೇಳಿದ್ದಕ್ಕೆ ಲೋಕಾಯುಕ್ತಕ್ಕೆ ಹಿಡಿದುಕೊಟ್ಟಿದ್ದರು, ಅದಕ್ಕೆ ನಿವೃತ್ತಿ ದಿನ ಶಿಕ್ಷಕಿಗೆ ಅವಮಾನಕರ ಸೆಂಡ್​ ಆಫ್​

ರೈತರಿಂದ ವಿದ್ಯುತ್ ವಿತರಣಾ ಕೇಂದ್ರದ ಮುಂದೆ ಪ್ರತಿಭಟನೆ

ಕೊಪ್ಪಳ: ಸಮರ್ಪಕ ವಿದ್ಯುತ್ ನೀಡದ ಹಿನ್ನೆಲೆ ತಾಲೂಕಿನ ಮೋರನಾಳದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ಮುಂದೆ ಬೆಟಗೇರಿ ಗ್ರಾಮದ ರೈತರು ಪ್ರತಿಭಟನೆ‌ ನಡೆಸಿದ್ದಾರೆ. ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗದ ಹಿನ್ನೆಲೆ, ಪಂಪ್ ಸೆಟ್ ಮೋಟಾರುಗಳು ಆನ್ ಆಗುತ್ತಿಲ್ಲ. ಅನೇಕ ಬಾರಿ ಅಧಿಕಾರಿಗಳಿಗೆ ಈ ಕುರಿತು ತಿಳಿಸಿದರೂ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಹಿನ್ನಲೆ ಇಂದು ರೈತರು ಪ್ರತಿಭಟನೆಗೆ ಮುಂದಾಗಿದ್ದು, ಇಷ್ಟೆಲ್ಲಾ ನಡೆಯುತ್ತಿದ್ದರೂ ಇಲ್ಲಿಯವರೆಗೂ ಜೆಸ್ಕಾಂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದಿಲ್ಲ. ಇದರಿಂದ ರೊಚ್ಚಿಗೆದ್ದ ರೈತರು ಜೆಸ್ಕಾಂ ಅಧಿಕಾರಿಗಳ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ