AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಶಿಕ್ಷೆಯ ಭಯ! ಕೋರ್ಟ್​ನಲ್ಲಿಯೇ ವಿಷ ಸೇವಿಸಿ ಅಸ್ವಸ್ಥಗೊಂಡ ಆರೋಪಿ

ಜೈಲು ಶಿಕ್ಷೆಯ ಭಯಕ್ಕೆ ನ್ಯಾಯಾಲಯ(Court)ದಲ್ಲಿಯೇ ವಿಷ ಸೇವಿಸಿ ಆರೋಪಿಯೊಬ್ಬ ಅಸ್ವಸ್ಥಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದ 2ನೇ ಹೆಚ್ಚುವರಿ ಜೆಎಂಎಫ್​ಸಿ ಕೋರ್ಟ್​ನಲ್ಲಿ ನಡೆದಿದೆ. ಆರೋಪಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ.

ಜೈಲು ಶಿಕ್ಷೆಯ ಭಯ! ಕೋರ್ಟ್​ನಲ್ಲಿಯೇ ವಿಷ ಸೇವಿಸಿ ಅಸ್ವಸ್ಥಗೊಂಡ ಆರೋಪಿ
ಹರಿಹರ ಕೋರ್ಟ್​ನಲ್ಲಿಯೇ ವಿಷ ಸೇವಿಸಿ ಅಸ್ವಸ್ಥಗೊಂಡ ಆರೋಪಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Aug 31, 2024 | 2:45 PM

Share

ದಾವಣಗೆರೆ, ಆ.31: ಜೈಲು ಶಿಕ್ಷೆಯ ಭಯದಿಂದ ನ್ಯಾಯಾಲಯ(Court)ದಲ್ಲಿಯೇ ವಿಷ ಸೇವಿಸಿ ಆರೋಪಿಯೊಬ್ಬ ಅಸ್ವಸ್ಥಗೊಂಡ ಘಟನೆ ನಡೆದಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿನ ಆರೋಪಿ ಫಜಲ್ ಅಲಿ (38) ಇಂದು(ಶನಿವಾರ) ದಾವಣಗೆರೆ ಜಿಲ್ಲೆಯ ಹರಿಹರದ 2ನೇ ಹೆಚ್ಚುವರಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರಾಗಿದ್ದ. ಈ ವೇಳೆ ನ್ಯಾಯಾಧೀಶರ ಸಮ್ಮುಖದಲ್ಲಿಯೇ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆರೋಪಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಏನಿದು ಪ್ರಕರಣ?

ಆರೋಪಿ ಫಜಲ್ ಅಲಿ ಹಾಗೂ ಆತನ ಪತ್ನಿ ವಿಚ್ಚೇಧನ ಪಡೆದಿದ್ದರು. ಬಳಿಕ ಕೋರ್ಟ್​ ಆದೇಶದಂತೆ ಪತ್ನಿಗೆ ಜೀವನಾಂಶ ಕೊಡಬೇಕಿದ್ದು, ಕಳೆದ ಕೆಲ ತಿಂಗಳಿಂದ ಪತ್ನಿಗೆ ಜೀವನಾಂಶವನ್ನ ಆರೋಪಿ ನೀಡರಲಿಲ್ಲ. ಈ ವಿಚಾರವನ್ನ‌ಪತ್ನಿ ಪರ ನ್ಯಾಯವಾದಿಗಳು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು. ಈ ಹಿನ್ನಲೆ ನ್ಯಾಯಾಧೀಶರಿಂದ ಜೈಲಿಗೆ ಹಾಕುವ ಆದೇಶ ಬರುವ ಭಯದಿಂದ ಕೋರ್ಟ್​ಗೆ ಬರುವಾಗಲೇ ಜೇಬಿನಲ್ಲಿ ವಿಷದ ಬಾಟಲ್ ಇಟ್ಟುಕೊಂಡು ಬಂದಿದ್ದ ಫಜಲ್ ಅಲಿ ವಿಷ ಸೇವಿಸಿದ್ದಾನೆ.  ಸದ್ಯ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಗಂಭೀರವಾಗಿದೆ. ಈ ಘಟನೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಬಡತನವೇ ಮೂವರನ್ನು ಬಲಿ ತೆಗೆದುಕೊಳ್ತಾ?

ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಗೆ ಗುದ್ದಿದ ಕಾರು; ತಪ್ಪಿದ ಅನಾಹುತ

ವಿಜಯಪುರ: ಆಲಕುಂಟಿ ನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಗೆ ಕೆಎ71ಎಂ 0724 ನಂಬರಿನ  ಕಾರೊಂದು ಗುದ್ದಿದ್ದು, ಪರಿಣಾಮ ಮನೆಯ ಗೋಡೆಯೇ ಕುಸಿದು ಬಿದ್ದ ಘಟನೆ ನಡೆದಿದೆ. ಚಾಲಕನಿಗೆ ಹಾಗೂ ಮತ್ತೋರ್ವನಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Sat, 31 August 24

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ