ದಾವಣಗೆರೆ: ದನಗಳ ಮೈ ತೊಳೆಯಲು ಹೋದ ಯುವಕ ನೀರು ಪಾಲು
ದನಗಳ ಮೈ ತೊಳೆಯಲು ಚಾನಲ್ಗೆ ಇಳಿದಿದ್ದ ಯುವಕ ಮಂಜುನಾಥ್ ಮೃತದೇಹವನ್ನು ಹೊರ ತೆಗದ ಸ್ಥಳೀಯರು, ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ದಾವಣಗೆರೆ, ಆ.30: ದನಗಳ ಮೈ ತೊಳೆಯಲು ಚಾನಲ್ಗೆ ಹೋಗಿದ್ದ ಯುವಕನೋರ್ವ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಬಳಿ ನಡೆದಿದೆ. ಮಂಜುನಾಥ್(26) ಮೃತ ವ್ಯಕ್ತಿ. ಚಾನಲ್ನಲ್ಲಿ ದನಗಳ ಮೈ ತೊಳೆಯಲು ಹೋಗಿದ್ದರು. ಈ ವೇಳೆ ಕಾಲು ಜಾರಿ ನೀರಿನಲ್ಲಿ ಬಿದ್ದು, ಕೊನೆಯುಸಿರೆಳೆದಿದ್ದಾನೆ. ಇನ್ನು ಮುಂಜುನಾಥ್ ಮೃತದೇಹ ಕೊಚ್ಚಿ ಹೋಗುತ್ತಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ನೀರಿಗೆ ಹಾರಿ ಹೊರ ತೆಗೆದಿದ್ದಾರೆ.
ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ
ದನಗಳ ಮೈ ತೊಳೆಯಲು ಚಾನಲ್ಗೆ ಇಳಿದಿದ್ದ ಯುವಕ ಮಂಜುನಾಥ್ ಮೃತದೇಹವನ್ನು ಹೊರ ತೆಗದ ಸ್ಥಳೀಯರು, ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇನ್ನು ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹಾಸನ: ಶುಂಠಿಗೆ ಕಳೆನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು, ರಕ್ತ ಪರೀಕ್ಷೆಯಲ್ಲಿ ವಿಷ ಇರೋದು ದೃಢ
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
ಯಾದಗಿರಿ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಾದಗಿರಿ ತಾಲೂಕಿನ ರಾಂಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದ ನಿವಾಸಿ ನಿತ್ಯಾನಂದ (35) ಮೃತ ಬೈಕ್ ಸವಾರ. ಇತ ರಾಯಚೂರಿನ ಶಕ್ತಿ ನಗರದಿಂದ ವಡಗೇರಗೆ ಬರುತ್ತಿದ್ದ ಸಮಯದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ನಿನ್ನೆ(ಆ.29) ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ