ಕಾಲೇಜು ಫೀಸ್ ಕಟ್ಟಲು ಹಣ ಕೊಡದಿದ್ದಕ್ಕೆ ಕಬಡ್ಡಿ ಆಟಗಾರ್ತಿ ಹೀಗಾ ಮಾಡಿಕೊಳ್ಳೋದು!
ದಾವಣಗೆರೆ: ಕಾಲೇಜು ಶುಲ್ಕ ಪಾವತಿಗೆ ಹಣ ನೀಡಿಲ್ಲವೆಂದು ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಪನಹಳ್ಳಿ ತಾಲೂಕಿನ ಕೊಂಗನಹೊಸೂರು ಗ್ರಾಮದಲ್ಲಿ ನಡೆದಿದೆ. 21 ವರ್ಷದ ಗಾಯತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಲೇಜು ಶುಲ್ಕ ಕಟ್ಟಲು ಅಪ್ಪ ಹಣ ಕೊಡಲಿಲ್ಲವೆಂದು ಮೇ 29ರಂದು ಗಾಯತ್ರಿ ಕ್ರಿಮಿನಾಶಕ ಸೇವಿಸಿದ್ದರು. ಅಸ್ವಸ್ಥ ಗಾಯಿತ್ರಿಯನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ತಡರಾತ್ರಿ ಗಾಯತ್ರಿ ಮೃತಪಟ್ಟಿದ್ದಾರೆ. 2019ರಲ್ಲಿ ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಕಬಡ್ಡಿ ಪಂದ್ಯದಲ್ಲಿ ಕರ್ನಾಟಕ ತಂಡದಲ್ಲಿ ಗಾಯತ್ರಿ […]
Follow us on
ದಾವಣಗೆರೆ: ಕಾಲೇಜು ಶುಲ್ಕ ಪಾವತಿಗೆ ಹಣ ನೀಡಿಲ್ಲವೆಂದು ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಪನಹಳ್ಳಿ ತಾಲೂಕಿನ ಕೊಂಗನಹೊಸೂರು ಗ್ರಾಮದಲ್ಲಿ ನಡೆದಿದೆ. 21 ವರ್ಷದ ಗಾಯತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಾಲೇಜು ಶುಲ್ಕ ಕಟ್ಟಲು ಅಪ್ಪ ಹಣ ಕೊಡಲಿಲ್ಲವೆಂದು ಮೇ 29ರಂದು ಗಾಯತ್ರಿ ಕ್ರಿಮಿನಾಶಕ ಸೇವಿಸಿದ್ದರು. ಅಸ್ವಸ್ಥ ಗಾಯಿತ್ರಿಯನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ತಡರಾತ್ರಿ ಗಾಯತ್ರಿ ಮೃತಪಟ್ಟಿದ್ದಾರೆ.
2019ರಲ್ಲಿ ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಕಬಡ್ಡಿ ಪಂದ್ಯದಲ್ಲಿ ಕರ್ನಾಟಕ ತಂಡದಲ್ಲಿ ಗಾಯತ್ರಿ ಇದ್ದರು. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.