AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗ ಅರಸಿ ಮಧ್ಯ ಆಫ್ರಿಕಾಕ್ಕೆ ತೆರಳಿರುವ ಕರ್ನಾಟಕದ ನಾಟಿ ವೈದ್ಯರು ಸಂಕಷ್ಟದಲ್ಲಿ, ಬಂಧನ?

ಚನ್ನಗಿರಿ ತಾಲ್ಲೂಕಿನ ಹಕ್ಕಿ-ಪಿಕ್ಕಿ ಜನಾಂಗದ 25ಕ್ಕೂ ಹೆಚ್ಚು ನಾಟಿ ವೈದ್ಯರು ಉದ್ಯೋಗ ಅರಸಿ ಗಬಾನ್‌ಗೆ ತೆರಳಿದ್ದಾರೆ. ಆದರೆ, ಗಬಾನ್‌ನಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೊಲೀಸರು ಅವರ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅವರ ಕುಟುಂಬಸ್ಥರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿದೇಶಾಂಗ ಇಲಾಖೆಯಿಂದ ತುರ್ತು ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಉದ್ಯೋಗ ಅರಸಿ ಮಧ್ಯ ಆಫ್ರಿಕಾಕ್ಕೆ ತೆರಳಿರುವ ಕರ್ನಾಟಕದ ನಾಟಿ ವೈದ್ಯರು ಸಂಕಷ್ಟದಲ್ಲಿ, ಬಂಧನ?
ಮಧ್ಯ ಆಫ್ರಿಕಾದಲ್ಲಿರುವ ಕನ್ನಡಿಗರು
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ವಿವೇಕ ಬಿರಾದಾರ|

Updated on: Mar 23, 2025 | 9:25 AM

Share

ದಾವಣಗೆರೆ, ಮಾರ್ಚ್​ 23: ಉದ್ಯೋಗ ಅರಸಿ ಮಧ್ಯ ಆಫ್ರಿಕಾದ (Central Africa) ಗಬಾನ್ (Gabon)​ ದೇಶಕ್ಕೆ ತೆರಳಿರುವ ಚನ್ನಗಿರಿ (Channagiri) ತಾಲೂಕಿನ ಗೋಪನಾಳ್-ಅಸ್ತಾಪನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಹಕ್ಕಿ-ಪಿಕ್ಕಿ ಜನಾಂಗದ ನಾಟಿ ವೈದ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮಧ್ಯ ಆಫ್ರಿಕಾದ ಗಬಾನ್​ ದೇಶದಲ್ಲಿ ರಾಜಕೀಯ ಬೆಳವಣಿಗೆಯಿಂದ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೊಸ ಸರ್ಕಾರ ವಿದೇಶಿಯರು ದೇಶ ಬಿಡುವಂತೆ ತಾಕೀತು ಮಾಡಿದೆ. ಈ ಹಿನ್ನೆಲೆಯಲ್ಲಿ ಗಬಾನ್ ರಾಜಧಾನಿ ಲಿಬ್ರೆವಿಲ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕದ ಹಕ್ಕಿ-ಪಿಕ್ಕಿ ಜನಾಂಗದ 25 ಕ್ಕೂ ಹೆಚ್ಚು ಜನ ನಾಟಿ ವೈದ್ಯರು ಕಳೆದ ಆರು ತಿಂಗಳನಿಂದ ಲಿಬ್ರೆವಿಲ್​ನಲ್ಲಿ ವಾಸವಾಗಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಮಠದಲ್ಲಿದೆ ಬಾಲಿವುಡ್​ ನಟ ಸುನಿಲ್​ ಶೆಟ್ಟಿ ಕಳುಹಿಸಿದ ರೋಬೋಟಿಕ್​ ಆನೆ: ಹೇಗಿದೆ ನೋಡಿ

ಇದನ್ನೂ ಓದಿ
Image
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
Image
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
Image
ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಜಲಸಮಾಧಿ
Image
ಸಿನಿಮೀಯ ರೀತಿಯಲ್ಲಿ ಚೇಸಿಂಗ್​, ಫೈರಿಂಗ್​, ದರೋಡೆಕೋರರ ಬಂಧನ

ಇದೀಗ, ಪೊಲೀಸರು 25ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. “ನಮ್ಮ ಪಾಸ್​ಪೋರ್ಟ್ ವಶಕ್ಕೆ ಪಡೆದು ತೊಂದರೆ ನೀಡುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಇಲ್ಲಿನ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಇಲಾಖೆ ಗಮನ ಹರಿಸುವಂತೆ ಸಂಕಷ್ಟದಲ್ಲಿ ಸಿಲುಕಿರುವ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್