AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka by-elections: ಕಾಂಗ್ರೆಸ್​ಗೆ ಪೈಲ್ವಾನ್ ಸವಾಲಿನ ಬೆನ್ನಲ್ಲೇ ಹೈಡ್ರಾಮಾಕ್ಕೆ ಸಜ್ಜಾದ ದಾವಣಗೆರೆ ಅಖಾಡ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಕಣ ರಂಗೇರಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಾದಿಕ್ ಪೈಲ್ವಾನ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನ ರಾಜಕೀಯ ಹೈಡ್ರಾಮಾ ನಡೆಯುವ ಸಾಧ್ಯತೆಗಳಿದ್ದು, ಕಾಂಗ್ರೆಸ್‌ಗೆ ಬಂಡಾಯಗಾರರ ಸವಾಲು ಎದುರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದಾವಣಗೆರೆಗೆ ಆಗಮಿಸಿ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರುಗೆ ಬೆಂಬಲ ನೀಡಲಿದ್ದಾರೆ.

Karnataka by-elections: ಕಾಂಗ್ರೆಸ್​ಗೆ ಪೈಲ್ವಾನ್ ಸವಾಲಿನ ಬೆನ್ನಲ್ಲೇ ಹೈಡ್ರಾಮಾಕ್ಕೆ ಸಜ್ಜಾದ ದಾವಣಗೆರೆ ಅಖಾಡ
ಸಮರ್ಥ್ ಶಾಮನೂರು ಹಾಗೂ ಸಾದಿಕ್ ಪೈಲ್ವಾನ್Image Credit source: tv9
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Mar 23, 2026 | 7:36 AM

Share

ದಾವಣಗೆರೆ, ಮಾರ್ಚ್ 23: ದಾವಣಗೆರೆ ನಗರದಲ್ಲಿ ಇಂದು ರಾಜಕೀಯ ಹೈಡ್ರಾಮಾ ನಡೆಯುವ ಸಾಧ್ಯತೆ ತೀವ್ರವಾಗಿದೆ. ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ (Congress) ಟಿಕೆಟ್ ಅಲ್ಪಸಂಖ್ಯಾತರಿಗೆ ಸಿಗದ ಹಿನ್ನೆಲೆ ಅಸಮಾಧಾನ ಭುಗಿಲೆದ್ದಿದ್ದು, ಹಲವು ಅಭ್ಯರ್ಥಿಗಳು ಸ್ವತಂತ್ರವಾಗಿ ಮತ್ತು ಬೇರೆ ಪಕ್ಷಗಳಿಂದ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎಐಎಂಐಎಂ, ಎಸ್‌ಡಿಪಿಐ, ಆಮ್ ಆದ್ಮಿ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ವಿಶೇಷವಾಗಿ ಸಮಾಜದ ಮುಖಂಡ ಸಾದಿಕ್ ಪೈಲ್ವಾನ್ ಪಕ್ಷೇತರರಾಗಿ ಸ್ಪರ್ಧಿಸಲು ಮುಂದಾಗಿರುವುದು ಗಮನ ಸೆಳೆದಿದೆ.

ನಾಮಪತ್ರ ಸಲ್ಲಿಕೆ ಕೊನೆಯ ದಿನ

ಇಂದು (ಮಾರ್ಚ್ 23) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಭಾರೀ ಮೆರವಣಿಗೆಗಳು ನಡೆಯಲಿದ್ದು, ಅದೇ ವೇಳೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದಲೂ ನಾಮಪತ್ರ ಸಲ್ಲಿಕೆ ನಡೆಯಲಿದೆ. ಮಾರ್ಚ್ 22ರಂದು ಅಲ್ಪಸಂಖ್ಯಾತ ಯುವಕರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ‘ಪಾಠ ಕಲಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದರು.

ದಾವಣಗೆರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ರಾಜಕೀಯ ಹೈಡ್ರಾಮಾ ನಡೆಯಬಹುದಾದ ಸಾಧ್ಯತೆ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಮೊಗ್ಗ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಕರೆಯಲಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪ್ರಮುಖ ಸಚಿವರು ದಾವಣಗೆರೆಗೆ

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಲವು ಮಂದಿ ಸಚಿವರು ಉಪಸ್ಥಿತರಿರಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಿಎಂ, ಡಿಸಿಎಂ ಹಾಗೂ ಸಚಿವರು ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್​ನಲ್ಲಿ ಪ್ರಯಾಣಿಸಲಿದ್ದಾರೆ. ಬಳಿಕ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ವೇಳೆ ಜತೆಗಿರಲಿದ್ದಾರೆ.

ದಾವಣಗೆರೆ ದಕ್ಷಿಣ ಟಿಕೆಟ್‌ ಅಂತಿಮಗೊಳಿಸುವ ಮುನ್ನ ಅಲ್ಪಸಂಖ್ಯಾತ ಸಚಿವರು, ಶಾಸಕರನ್ನು ಕರೆದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸುರ್ಜೇವಾಲ ಮನವೊಲಿಸಿದ್ದರು. ಹೀಗಾಗಿ, ಕೊನೇ ಕ್ಷಣದಲ್ಲಿ ಕಣದಿಂದ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುತ್ತಾರೆ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತಾರೆಂಬ ವಿಶ್ವಾಸದಲ್ಲಿ ನಾಯಕರಿದ್ದಾರೆ. ಆದರೆ, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿರುವ ಸಾದಿಕ್ ಪೈಲ್ವಾನ್, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ನೂರಾರು ಬೆಂಬಲಿಗರ ಜೊತೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್​​ನಲ್ಲಿ ಭುಗಿಲೆದ್ದ ಬಂಡಾಯ: ಹೈಕಮಾಂಡ್​ಗೆ ಪೈಲ್ವಾನ್ ಸವಾಲ್

ಒಟ್ಟಿನಲ್ಲಿ ದಾವಣಗೆರೆ ದಕ್ಷಿಣ ಉಪಚುನಾವಣೆ ಅಖಾಡ ರಂಗೇರಿದ್ದು, ಬಹಳಷ್ಟು ಕುತೂಹಲ ಸೃಷ್ಟಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ