AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ! ಸಿರಿಗೆರೆ ಸ್ವಾಮೀಜಿ ಹೆಸರಿನಲ್ಲಿ ವೈರಲ್ ಆಗುತ್ತಿದೆ ನಕಲಿ ಸಂದೇಶ!

ದಾವಣಗೆರೆ ಉಪಚುನಾವಣೆ ಸಂದರ್ಭದಲ್ಲಿ ಸಿರಿಗೆರೆ ತರಳಬಾಳು ಶ್ರೀಗಳ ಹೆಸರಿನಲ್ಲಿ ನಕಲಿ ಮತಯಾಚನೆ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಠದ ಆಡಳಿತ ಮಂಡಳಿ ಇದು ಸುಳ್ಳು ಸಂದೇಶವೆಂದು ಸ್ಪಷ್ಟಪಡಿಸಿದ್ದು, ಜಿಲ್ಲಾಧಿಕಾರಿಗಳಿಗೆ ದೂರು ನೀಡಿದೆ. ಮತದಾರರನ್ನು ತಪ್ಪು ದಾರಿಗೆಳೆಯುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮಕ್ಕೆ ಮನವಿ ಮಾಡಲಾಗಿದೆ.

ಎಚ್ಚರ! ಸಿರಿಗೆರೆ ಸ್ವಾಮೀಜಿ ಹೆಸರಿನಲ್ಲಿ ವೈರಲ್ ಆಗುತ್ತಿದೆ ನಕಲಿ ಸಂದೇಶ!
ಎಚ್ಚರ! ಸಿರಿಗೆರೆ ಸ್ವಾಮೀಜಿ ಹೆಸರಿನಲ್ಲಿ ವೈರಲ್ ಆಗುತ್ತಿದೆ ನಕಲಿ ಸಂದೇಶ!
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 07, 2026 | 9:44 AM

Share

ದಾವಣಗೆರೆ, ಏಪ್ರಿಲ್ 07: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Byelection) ಏಪ್ರಿಲ್ 9ರಂದು ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು ವಿವಿಧ ರೀತಿಯ ಪ್ರಚಾರ ಕೈಗೊಂಡಿರುವ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶಗಳ ಹಾವಳಿ ಕೂಡ ಹೆಚ್ಚಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಓಟ್​ ಹಾಕಿ ಎಂದು ಸಿರಿಗೆರೆ ಸ್ವಾಮೀಜಿ ಹೆಸರಲ್ಲಿನ ಸಂದೇಶ ವೈರಲ್ ಆಗಿದ್ದು, ಸಾಕಷ್ಟು ಚರ್ಚೆ ಹುಟ್ಟಿಹಾಕಿತ್ತು. ಇದಕ್ಕೀಗ ಸ್ಪಷ್ಟನೆ ಸಿಕ್ಕಿದೆ.

ಸ್ಪಷ್ಟನೆ ನೀಡಿದ ಆಡಳಿತ ಮಂಡಳಿ

ಸಿರಿಗೆರೆ ತರಳುಬಾಳು ಗುರುಪೀಠದ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಅವರ ಹೆಸರಿನಲ್ಲಿ ನಕಲಿ ಸಂದೇಶವೊಂದು ವೈರಲ್ ಆಗಿದ್ದು, ನಿರ್ದಿಷ್ಟ ಅಭ್ಯರ್ಥಿಗೆ ಮತ ನೀಡುವಂತೆ ಕರೆ ನೀಡಲಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸ್ವಾಮೀಜಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಪ್ರಚಾರ ನಡೆಯುತ್ತಿದೆಯೇನೋ ಎಂದು ಹಲವರು ಭಾವಿಸಿದ್ದರು. ಆದರೆ ಇದಕ್ಕೆ ಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ಶ್ರೀಗಳ ಹೆಸರಿನಲ್ಲಿ ನಕಲಿ ಸಂದೇಶ ರವಾನಿಸಲಾಗುತ್ತಿದೆ ಎಂದಿದೆ. ಈ ಸಂದೇಶವು ಸ್ವಾಮೀಜಿಯವರ ನಿಲುವನ್ನು ತಪ್ಪಾಗಿ ಪ್ರತಿಬಿಂಬಿಸುವುದಾಗಿ ಮಠದ ಆಡಳಿತ ಮಂಡಳಿ ಹೇಳಿದೆ.

ಇದನ್ನೂ ಓದಿ ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ! ದಾವಣಗೆರೆ, ಬಾಗಲಕೋಟೆಯಲ್ಲಿ ಪ್ರಚಾರ

ಜಿಲ್ಲಾಧಿಕಾರಿಗೆ ದೂರು

ಈ ಕುರಿತು ಮಠದ ಕಾರ್ಯದರ್ಶಿ ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯನ್ನು ಹರಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇಂತಹ ನಕಲಿ ಸಂದೇಶಗಳು ಮತದಾರರನ್ನು ತಪ್ಪು ದಾರಿಗೆಳೆಯುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು