Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ: ವಿಧಾನಸಭೆ ಸ್ಪೀಕರ್ ಕಾಗೇರಿ

ಅರ್ಜುನನ ಮನಸ್ಥಿತಿಯಲ್ಲಿ ಈಗ ದೇಶ ಇದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಪಾಠ ಹೇಳಿಕೊಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ: ವಿಧಾನಸಭೆ ಸ್ಪೀಕರ್ ಕಾಗೇರಿ
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ: ವಿಧಾನಸಭೆ ಸ್ಪೀಕರ್ ಕಾಗೇರಿ
Follow us
TV9 Web
| Updated By: Rakesh Nayak Manchi

Updated on:Dec 04, 2022 | 6:27 PM

ದಾವಣಗೆರೆ: ಅರ್ಜುನನ ಮನಸ್ಥಿತಿಯಲ್ಲಿ ಈಗ ದೇಶ ಇದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ (Bhagavad Gita) ಪಾಠ ಹೇಳಿಕೊಡುವ ಬಗ್ಗೆ ರಾಜ್ಯ ಸರ್ಕಾರ (Karnataka Govt) ಚಿಂತನೆ ನಡೆಸುತ್ತಿದೆ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಹೇಳಿದ್ದಾರೆ. ನಗರದಲ್ಲಿ ಹೇಳಿಕೆ ನೀಡಿದ ಅವರು, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡಬೇಕಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೂಡ ಸೂಕ್ತ ಚಿಂತನೆ ಮಾಡುತ್ತಿದೆ. ಅರ್ಜುನನ ಮನಸ್ಥಿತಿಯಲ್ಲಿ ಈಗ ದೇಶ ಇದೆ. ದೇಶಕ್ಕೆ ಈಗ ಭಗವದ್ಗೀತೆ ಬೋಧನೆ ಮಾಡುವುದು ಅಗತ್ಯವಿದೆ ಎಂದರು.

ಇಂದು ದಾವಣಗೆರೆಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಆವರಣದಲ್ಲಿ ಶ್ರೀ ಭಗವದ್ಗೀತಾ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಗವದ್ಗೀತೆ ಇದ್ದರೇ ಎಲ್ಲರೂ ಸಮಾನ ಎಂಬ ಅರ್ಥ. ಭಗವದ್ಗೀತೆಯನ್ನ ಶಾಲಾ ಪಠ್ಯದಲ್ಲಿ ಸೇರ್ಪಡೆ ಮಾಡಬೇಕು. ಆ ಮೂಲಕ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಪಾಠ ಮಾಡಬೇಕಿದೆ. ಈ ಬಗ್ಗೆ ಸರ್ಕಾರ ಕೂಡಾ ಸೂಕ್ತ ಚಿಂತನೆ ಮಾಡುತ್ತಿದೆ. ಅರ್ಜುನನ ಮನಸ್ಥಿತಿಯಲ್ಲಿ ಈಗ ದೇಶ ಇದೆ. ಭಾರತ ಜಗತ್ತಿನ ಗುರುವಿನ ಸ್ಥಾನದಲ್ಲಿದೆ. ಇಂತಹ ದೇಶಕ್ಕೆ ಈಗ ಭಗವದ್ಗೀತೆ ಬೋಧನೆ ಮಾಡುವುದು ಅಗತ್ಯವಿದೆ ಎಂದು ಹೇಳಿದರು.

ಇದನ್ನೂ ಓದಿ: ವಿಶೇಷ ಚೇತನರಿಗಾಗಿಯೇ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿಟ್ಟಿ ಕೆಫೆ ಆರಂಭ

ರಾಜ್ಯಮಟ್ಟದ ಮಹಾ ಸಮರ್ಪಣಾ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಪರಮಪೂಜ್ಯ ಜಗದ್ಗುರುಗಳಾದ ಶ್ರೀ ತರಳಬಾಳು ಮಠದ ಶ್ರೀಮದ್ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಸೋಂದಾ ಸ್ವರ್ಣವಲ್ಲೀ ಮಠದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು, ಶ್ರೀ ಮಹಾಯೋಗಿ ವೇಮನ ಸಂಸ್ಥಾನ ಎರೆಹೊಸಳ್ಳಿ ಮಠದ ಶ್ರೀಮದ್ ಶ್ರೀ ವೇಮನಾನಂದ ಮಹಾಸ್ವಾಮಿಗಳು, ದಾವಣಗೆರೆ ಶ್ರೀ ರಾಮಕೃಷ್ಣ ಆಶ್ರಮದ ತ್ಯಾಗೀಶ್ವರಾನಂದಜೀ ಮಹಾರಾಜ್ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಮಾನ್ಯ ಸಂಸದರಾದ ಜಿ.ಎಂ.ಸಿದ್ದೇಶ್ವರ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Sun, 4 December 22