ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು, ಠಾಣೆಗೆ ನುಗ್ಗಿ ವಸ್ತುಗಳನ್ನ ಧ್ವಂಸಗೊಳಿಸಿದ ಸಂಬಂಧಿಕರು
ಒಸಿ(ಮಟ್ಕಾ) ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಸಾವನ್ನಪ್ಪಿದ್ದ. ಇದೀಗ ಅದಿಲ್ ಸಾವಿಗೆ ಪೊಲೀಸರೇ ಕಾರಣ ಎಂದು ಸಂಬಂಧಿಕರು ಅಕ್ರೋಶಗೊಂಡಿದ್ದಾರೆ.
ದಾವಣಗೆರೆ, ಮೇ.24: ಜಿಲ್ಲೆಯ ಚನ್ನಗಿರಿ ಠಾಣೆಯ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದು, ವಿಷಯ ತಿಳಿಯುತ್ತಿದ್ದಂತೆ ಮೃತ ವ್ಯಕ್ತಿಯ ಸಂಬಂಧಿಕರು ಪೊಲೀಸ್ ಠಾಣೆ(Channagiri Police Station) ಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ ಘಟನೆ ನಡೆದಿದೆ. ಠಾಣೆಯ ಮುಂಭಾಗದಲ್ಲಿ ನೂರಾರು ಜನರು ಜಮಾಯಿಸಿದ್ದು, ಇದು ಲಾಕಪ್ ಡೆತ್ ಎಂದು ಆರೋಪಿಸುತ್ತಿದ್ದಾರೆ.
ಒಸಿ(ಮಟ್ಕಾ) ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಸಾವನ್ನಪ್ಪಿದ್ದಾನೆ. ಇದೀಗ ಅದಿಲ್ ಸಾವಿಗೆ ಪೊಲೀಸರೇ ಕಾರಣ ಎಂದು ಸಂಬಂಧಿಕರು ಅಕ್ರೋಶಗೊಂಡಿದ್ದಾರೆ. ಸಾವನ್ನಪ್ಪಿದ ಅರೋಪಿ ಸಂಬಂಧಿಕರನ್ನು ಚನ್ನಗಿರಿ ಡಿವೈಸ್ಪಿ ಪ್ರಶಾಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಸಧ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ:ಕೆಸರಿನಲ್ಲಿ ಮುಳುಗಿ ಸಾವು ಬದುಕಿನ ನಡುವೆ ಹೋರಾಡ್ತಿದ್ದ ವ್ಯಕ್ತಿ ರಕ್ಷಿಸಿದ ಪೊಲೀಸರು
ಬೈಕ್ ಸವಾರಿನಿಗೆ ಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಡ್ರೈವರ್ನಿಂದ ಹಲ್ಲೆ ಆರೋಪ
ಮೈಸೂರು: ನಗರದ ಸಿದಾರ್ಥ ಬಡವಾಣೆಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಬೈಕ್ ಸವಾರಿನಿಗೆ ಕ್ಷುಲ್ಲಕ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಡ್ರೈವರ್ ನಿಂದ ಹಲ್ಲೆ ಆರೋಪ ಕೇಳಿಬಂದಿದೆ. ಬಸ್ಗೆ ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕ ಹಾಗೂ ನಿರ್ವಾಹಕನಿಂದ ಬೈಕ್ ಸವಾರನಿಗೆ ಹಲ್ಲೆ ಮಾಡಲಾಗಿದೆ. ಸದ್ಯ ಸಾಮಾಜಿಕ ಜಾಲಾತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮೈಸೂರಿನ ಸಿದಾರ್ಥ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:08 pm, Fri, 24 May 24