AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ-ಭೇದಿ; ಆಸ್ಪತ್ರೆಗೆ ದಾಖಲು

ವಿಜಯನಗರ ಜಿಲ್ಲೆಯ ಹರಪನಹಳ್ಳಿ(Harapanahalli) ತಾಲೂಕಿನ ಶಿಂಗ್ರಿಹಳ್ಳಿಯಲ್ಲಿ ಬೀಗರ ಊಟ ಮಾಡಿದ್ದ 96 ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥರಿಗೆ ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್​, ಡಿಎಚ್ಒ ಡಾ.ಶಂಕರನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ-ಭೇದಿ; ಆಸ್ಪತ್ರೆಗೆ ದಾಖಲು
ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Apr 28, 2024 | 2:36 PM

Share

ದಾವಣಗೆರೆ, ಏ.28: ಬೀಗರ ಊಟ ಮಾಡಿದ್ದ 96 ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ(Harapanahalli) ತಾಲೂಕಿನ ಶಿಂಗ್ರಿಹಳ್ಳಿಯಲ್ಲಿ ನಡೆದಿದೆ. ಇದರಲ್ಲಿ 22 ಮಕ್ಕಳಿದ್ದು, ಅಸ್ವಸ್ಥರಿಗೆ ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಮದುವೆ ಸಮಾರಂಭದ ಬಳಿಕ‌ ನಿನ್ನೆ(ಏ.27) ಬೀಗರ ಊಟ ಮಾಡಿ ಮಲಗಿದ್ದವರ ಆರೋಗ್ಯದಲ್ಲಿ ತಡರಾತ್ರಿ ಏರುಪೇರಾಗಿದೆ. ಇನ್ನು ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್​, ಡಿಎಚ್ಒ ಡಾ.ಶಂಕರನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲರೂ ಸ್ಟೇಬಲ್ ಆಗಿದ್ದಾರೆ ಎಂದು ಡಿಎಚ್​ಒ ಸ್ಪಷ್ಡನೆ ನೀಡಿದ್ದಾರೆ.

ಬಿಸಲಿನ ತಾಪಕ್ಕೆ ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಸಾವು

ರಾಯಚೂರು: ತಾಲೂಕಿನ ಚಿಕ್ಕಸುಗೂರು ಗ್ರಾಮದ ಹುಸೇನಮ್ಮ ಹಾಗೂ ಮಾರುತಿ ದಂಪತಿ ಮಕ್ಕಳಾದ ಆರತಿ (9) ಹಾಗೂ ಪ್ರಿಯಾಂಕಾ (7) ಅವರು ಇಂದು(ಏ.28) ಬಿಸಲಿನ ತಾಪಕ್ಕೆ ನಿರ್ಜಲೀಕರಣ ಉಂಟಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನುಳಿದಂತೆ ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಕುಟುಂಬ ಕೃಷ್ಣಾ ನದಿ ನೀರನ್ನ ಕುಡಿಯುತ್ತಿತ್ತು ಎಂಬ ಮಾಹಿತಿ ದೊರೆತಿದ್ದು,  ಶನಿವಾರ (ಏ.27)ರ ಸಂಜೆ ಏಕಾಏಕಿ ಸಮಸ್ಯೆ ಉಲ್ಬಣಗೊಂಡಿತ್ತು ಎನ್ನಲಾಗಿದೆ.

ಇದನ್ನೂ ಓದಿ:ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್‌ನಿಂದ ವಾಂತಿ-ಭೇದಿ, 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ವಾಂತಿ, ಭೇದಿಯಿಂದ ಇಬ್ಬರು ಮಕ್ಕಳು ಸಾವು ಪ್ರಕರಣ; ಆರೋಗ್ಯ ಇಲಾಖೆ ಅಲರ್ಟ್

ವಾಂತಿ,ಬೇಧಿಯಿಂದ ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣವನ್ನ ಟಿವಿ9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.  ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು, ಆರೋಗ್ಯ ಇಲಾಖೆ, ಆಹಾರ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಮನೆಯಲ್ಲಿ ನೀರಿನ ಸ್ಯಾಂಪಲ್,ಆಹಾರದ ಸ್ಯಾಂಪಲ್ ಪಡೆದಿದ್ದು, ಮೃತ ಮಕ್ಕಳ ತಂದೆ ಮಾರುತಿ ಕರೆಸಿ ವಿಚಾರಣೆ ಶುರುಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Sun, 28 April 24

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ