AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​​ಆರ್​​ಟಿಸಿ ಬಸ್ – ಕಾರ್ ಮುಖಾಮುಖಿ ಡಿಕ್ಕಿ: ಕಾರಿನಲ್ಲಿದ್ದ ಭದ್ರಾವತಿಯ ಮೂವರು ಮಹಿಳೆಯರು ಸೇರಿ ನಾಲ್ವರ ಸಾವು

ಕೆಎಸ್​​ಆರ್​​ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಸಾವನ್ನಪ್ಪಿದ ಮಹಿಳೆಯರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಗಳು.

ಕೆಎಸ್​​ಆರ್​​ಟಿಸಿ ಬಸ್ - ಕಾರ್ ಮುಖಾಮುಖಿ ಡಿಕ್ಕಿ: ಕಾರಿನಲ್ಲಿದ್ದ ಭದ್ರಾವತಿಯ ಮೂವರು ಮಹಿಳೆಯರು ಸೇರಿ ನಾಲ್ವರ ಸಾವು
ಕೆಎಸ್​​ಆರ್​​ಟಿಸಿ ಬಸ್ - ಕಾರ್ ಮುಖಾಮುಖಿ ಡಿಕ್ಕಿ: ಕಾರಿನಲ್ಲಿದ್ದ ಭದ್ರಾವತಿಯ ಮೂವರು ಮಹಿಳೆಯರ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Dec 17, 2021 | 2:19 PM

Share

ದಾವಣಗೆರೆ: ಕೆಎಸ್​​ಆರ್​​ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು ಕಾರ್ ನಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಬ್ಬ ಮಹಿಳೆಗೆ ತೀವ್ರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಗಾಯಾಳುವನ್ನು ದಾಖಲು ಮಾಡಲಾಗಿದೆ. ಸಾವನ್ನಪ್ಪಿದ ಮಹಿಳೆಯರು ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಯಡಿಹಳ್ಳಿ ಗ್ರಾಮದ ನಿವಾಸಿಗಳು ಮತ್ತು ಕಾರು ಚಾಲಕ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಕುಟುಂಬಸ್ಥರು ಕಾರ್ಯಕ್ರಮಕ್ಕೆಂದು ಹೋಗುತ್ತಿದ್ದರು. ಎದುರಿಗೆ ಬರುತ್ತಿದ್ದ ಸಾರಿಗೆ ಇಲಾಖೆಯ ಬಸ್​ಗೆ ಕಾರು ಡಿಕ್ಕಿ ಹೊಡೆದಿದೆ. ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ವರದಿಗಳ ಪ್ರಕಾರ ಅಪಘಾತದಲ್ಲಿ ಸಾವನ್ನಪ್ಪಿದವರ ವಿವರ ಹೀಗಿದೆ: ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಇವರೆಲ್ಲಾ ಸ್ವಗ್ರಾಮದಿಂದ ಜೋಗಕ್ಕೆ ಮದುವೆಂದು ಹೋಗುತ್ತಿದ್ದರು. ಆಶಾ ಎಂಬ ಮಹಿಳೆಗೆ ಗಂಭೀರ ಗಾಯಗಲಾಗಿವೆ.

Published On - 2:09 pm, Fri, 17 December 21

Follow Us
TV9 Web
TV9 Web

TV9 Kannada

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ