AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾದ ಮಹಿಳೆ ಪತ್ತೆ ಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂ. ಲಂಚ ಪಡೆದ ಪಿಎಸ್​ಐ ಲೋಕಾಯುಕ್ತ ಬಲೆಗೆ

ದಾವಣಗೆರೆಯಲ್ಲಿ ನಾಪತ್ತೆಯಾಗಿರುವ ಮಹಿಳೆಯನ್ನು ಹುಡುಕಿಕೊಡಲು ಲಂಚಕ್ಕೆ ಬೇಡಿಕೆ ಇಡಲಾಗಿದೆ. ಸದ್ಯ ತನ್ನ ಕರ್ತವ್ಯ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟ ಪಿಎಸ್​ಐ ಸಹಿತ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಾಣೆಯಾದ ಮಹಿಳೆ ಪತ್ತೆ ಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂ. ಲಂಚ ಪಡೆದ ಪಿಎಸ್​ಐ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ದಾವಣಗೆರೆ ಗ್ರಾಮಾಂತರ ಠಾಣೆಯ ಪಿಎಸ್​ಐ ಮತ್ತು ಪಿಸಿ
Rakesh Nayak Manchi
Rakesh Nayak Manchi|

Updated on:May 01, 2023 | 10:02 PM

Share

ದಾವಣಗೆರೆ: ನಾಪತ್ತೆಯಾಗಿರುವ ಮಹಿಳೆಯನ್ನು ಹುಡುಕಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್​ಐ ಮತ್ತು ಸಿಬ್ಬಂದಿ ಲೋಕಾಯುಕ್ತ (Lokayukta) ಪೊಲೀಸರ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ದಾವಣಗೆರೆ (Davanagere) ಗ್ರಾಮಾಂತರ ಪೊಲೀಸ್ ಠಾಣೆಯ ಎಸ್​ಐ ಶಿವನಗೌಡ ಹಾಗೂ ಪಿಸಿ ಲಿಂಗರಾಜ್ ನಾಯ್ಕ ಬಂಧಿತರು. ಮಹಿಳೆಯನ್ನು ಹುಡುಕಿಕೊಡಲು ಆಕೆಯ ಪತಿಗೆ ಪಿಎಸ್​ಐ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಬಂದ ದೂರಿನ ಅನ್ವಯ ತನಿಖೆಗೆ ಇಳಿದ ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಇನ್​ಸ್ಪೆಕ್ಟರ್​ಗಳಾದ ರಾಷ್ಟ್ರಪತಿ ಹಾಗೂ ಅಂಜನೇಯ ಅವರು ಇಬ್ಬರನ್ನು ಬಂಧಿಸಿದ್ದಾರೆ.

ಚಿತ್ರದುರ್ಗ ಮೂಲದ ರಂಗಸ್ವಾಮಿ ಎಂಬವರ ಪತ್ನಿ ನಾಪತ್ತೆಯಾಗಿದ್ದು, ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ‌ನಾಪತ್ತೆ ಪ್ರಕಣ ದಾಖಲಾಗಿದೆ. ಈ ನಡುವೆ ಆಕೆ ದಾವಣಗೆರೆಯಲ್ಲಿ ಇರುವ ಬಗ್ಗೆ ಮಾಹಿತಿ ತಿಳಿದುಬಂದ ಹಿನ್ನೆಲೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಆದರೆ ಠಾಣಾ ಪಿಎಸ್​ಐ ಮತ್ತು ಶಿವನಗೌಡ ಹಾಗೂ ಪಿಸಿ ಲಿಂಗರಾಜ್ ನಾಯ್ಕ ಅವರು ತಮ್ಮ ಕರ್ತವ್ಯ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್: FIR ದಾಖಲು

ಮಹಿಳೆಯನ್ನು ಪತ್ತೆಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ರಂಗಸ್ವಾಮಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ ಇಂದು ಫೋನ್ ಪೇ ಮೂಲಕ 50 ಸಾವಿರ ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಇತ್ತ ಲೋಕಾಯುಕ್ತ ಪೊಲೀಸರು ಠಾಣೆಗೆ ದಾಳಿ ನಡೆಸಿ ಎಸ್​ಐ ಮತ್ತು ಪಿಸಿಯನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Sat, 22 April 23

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು