ದಾವಣಗೆರೆ: ನಾಪತ್ತೆಯಾಗಿರುವ ಮಹಿಳೆಯನ್ನು ಹುಡುಕಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್ಐ ಮತ್ತು ಸಿಬ್ಬಂದಿ ಲೋಕಾಯುಕ್ತ (Lokayukta) ಪೊಲೀಸರ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ದಾವಣಗೆರೆ (Davanagere) ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಶಿವನಗೌಡ ಹಾಗೂ ಪಿಸಿ ಲಿಂಗರಾಜ್ ನಾಯ್ಕ ಬಂಧಿತರು. ಮಹಿಳೆಯನ್ನು ಹುಡುಕಿಕೊಡಲು ಆಕೆಯ ಪತಿಗೆ ಪಿಎಸ್ಐ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಬಂದ ದೂರಿನ ಅನ್ವಯ ತನಿಖೆಗೆ ಇಳಿದ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ರಾಷ್ಟ್ರಪತಿ ಹಾಗೂ ಅಂಜನೇಯ ಅವರು ಇಬ್ಬರನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಮೂಲದ ರಂಗಸ್ವಾಮಿ ಎಂಬವರ ಪತ್ನಿ ನಾಪತ್ತೆಯಾಗಿದ್ದು, ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ನಾಪತ್ತೆ ಪ್ರಕಣ ದಾಖಲಾಗಿದೆ. ಈ ನಡುವೆ ಆಕೆ ದಾವಣಗೆರೆಯಲ್ಲಿ ಇರುವ ಬಗ್ಗೆ ಮಾಹಿತಿ ತಿಳಿದುಬಂದ ಹಿನ್ನೆಲೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಆದರೆ ಠಾಣಾ ಪಿಎಸ್ಐ ಮತ್ತು ಶಿವನಗೌಡ ಹಾಗೂ ಪಿಸಿ ಲಿಂಗರಾಜ್ ನಾಯ್ಕ ಅವರು ತಮ್ಮ ಕರ್ತವ್ಯ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.
ಇದನ್ನೂ ಓದಿ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್: FIR ದಾಖಲು
ಮಹಿಳೆಯನ್ನು ಪತ್ತೆಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ರಂಗಸ್ವಾಮಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ ಇಂದು ಫೋನ್ ಪೇ ಮೂಲಕ 50 ಸಾವಿರ ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಇತ್ತ ಲೋಕಾಯುಕ್ತ ಪೊಲೀಸರು ಠಾಣೆಗೆ ದಾಳಿ ನಡೆಸಿ ಎಸ್ಐ ಮತ್ತು ಪಿಸಿಯನ್ನು ಬಂಧಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:06 pm, Sat, 22 April 23