AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ ಕೇಳಿದ ಲೋಕಾಯುಕ್ತ

ಚೆನ್ನಗಿರಿ ಮಾಜಿ ಬಿಜೆಪಿ ಶಾಸಕ ಮಾಡಲ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರನ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಾಕ್ಷಿ ಸಂಗ್ರಹಿಸಿದ್ದು, ಇಬ್ಬರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ ಕೇಳಿದ ಲೋಕಾಯುಕ್ತ
ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ಮಾಡಾಳ್
Kiran HV
| Updated By: Rakesh Nayak Manchi|

Updated on: Aug 11, 2023 | 10:14 PM

Share

ಬೆಂಗಳೂರು, ಆಗಸ್ಟ್ 11: ಲಂಚ ಪಡೆದ ಆರೋಪ ಸಂಬಂಧ ಲೋಕಾಯುಕ್ತ (Lokayukta) ಅಧಿಕಾರಿಗಳಿಂದ ಬಂಧಿತರಾಗಿರುವ ಚನ್ನಗಿರಿ ಮಾಜಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಮತ್ತು ಅವರ ಪುತ್ರ ಪ್ರಶಾಂತ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ. ಅದರಂತೆ ಸರ್ಕಾರದ ಉನ್ನತ ಸ್ಥಾನಗಳಲ್ಲಿದ್ದ ತಂದೆ ಹಾಗೂ ಮಗನ ವಿರುದ್ಧ ಕೈಗೊಳ್ಳಬೇಕಾದ ಕಾನೂನು ಪ್ರಕ್ರಿಯೆ ಬಗ್ಗೆ ಪತ್ರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

Prevention of corruption act (19) ಅಡಿ permission sanction order ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಮಾಡಾಳ್ ವಿರೂಪಾಕ್ಷಗೆ ಸಂಬಂಧಿಸಿದಂತೆ ಸ್ಪೀಕರ್ ಹಾಗೂ ಪುತ್ರ ಕೆಎಎಸ್ ಅಧಿಕಾರಿ ಪ್ರಶಾಂತ್​ಗೆ ಸಂಬಂಧಿಸಿದಂತೆ ಡಿಪಿಆರ್ ಸೆಕ್ರೆಟರಿಗೆ ಪತ್ರ ನೀಡಲಾಗಿದೆ. ಸದ್ಯ ಪತ್ರಕ್ಕೆ ಉತ್ತರ ನೀಡಲು ಇನ್ನು ಮೂರು ತಿಂಗಳ ಅವಕಾಶವಿದೆ. ಹೀಗಾಗಿ ಅನುಮತಿ ಬಂದ ನಂತರವಷ್ಟೇ ಇಬ್ಬರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ.

ಇದನ್ನೂ ಓದಿ: ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಸಭೆ ಅನುಮೋದನೆ

ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದ ಪ್ರಶಾಂತ್ ಮಾರ್ಚ್ 3ರಂದು ಕೆಎಸ್​ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿ ಅಧ್ಯಕ್ಷರಾಗಿದ್ದ ತಂದೆಯ ಪರವಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ 40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇದರ ಮುಂದುವರಿದ ಭಾಗವಾಗಿ ಡಾಲರ್ಸ್ ಕಾಲೋನಿಯ ನಿವಾಸ ಸೇರಿದಂತೆ ಮಾಡಲ್ ವಿರೂಪಾಕ್ಷಪ್ಪ ಮನೆ ಕಚೇರಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ದಾಳಿ ನಡೆಸಿತ್ತು.

ಈ ವೇಳೆ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಆರು ಕೋಟಿಗೂ ಅಧಿಕ ನಗುದು ಹಣ ಪತ್ತೆಯಾಗಿತ್ತು. ಇದಾದ ಬಳಿಕ ಕೆಎಎಸ್ ಅಧಿಕಾರಿ ಪ್ರಶಾಂತ್ ಬಂಧಿಸಿದ್ದ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಸಿಕ್ಕ ಸಾಕ್ಷಿಗಳನ್ನು ಆದರಿಸಿ ಮಾಡಲ್ ವಿರೂಪಾಕ್ಷಪ್ಪ ಅವರನ್ನು ಸಹ ಬಂಧಿಸಿದ್ದರು.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಂಡರ್ ಲಂಚ ಹಾಗೂ ಭ್ರಷ್ಟಾಚಾರ ವಿಚಾರವಾಗಿ ಹಲವು ವ್ಯಕ್ತಿಗಳ ವಿಚಾರಣೆ ಹಾಗೂ ಸಾಕ್ಷಿಗಳ ಸಂಗ್ರಹಿಸಿ ಆರೋಪಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಚಾರ್ಜ್​ಶೀಟ್ ಸಿದ್ಧಪಡಿಸಿದ್ದು, ಸ್ಪೀಕರ್ ಹಾಗೂ ಡಿಪಿಆರ್ ಸೆಕ್ರೆಟರಿ ಅನುಮತಿಗಾಗಿ ಕಾದು ಕುಳಿತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!