ದಾವಣಗೆರೆ: 13 ಸಾವಿರ ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ

ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ದಸ್ತು ಬರಹಗಾರ ಪರಮೇಶ್ವರ್ ಎಂಬುವವರು 13 ಸಾವಿರ ಹಣ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ: 13 ಸಾವಿರ ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: May 21, 2023 | 10:01 AM

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ(Sub Registrar officer) ದಸ್ತು ಬರಹಗಾರ ಪರಮೇಶ್ವರ್ ಎಂಬುವವರು 13 ಸಾವಿರ ಹಣ ಲಂಚ(Bribe) ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಮೇಶ್ವರ್​​ನನ್ನು ಬಂಧಿಸಿದ್ದಾರೆ.

ಮನೆ ಖರೀದಿಯ ಸೇಲ್ ಡೀಡ್ ನೋಂದಣಿ ಪತ್ರ ನೀಡಲು ಹರಿಹರದ ಮಂಜುನಾಥ್ ಎನ್ನುವರ ಬಳಿ ಪರಮೇಶ್ವರ್ 20 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದ. ಹೀಗಾಗಿ ಮಂಜುನಾಥ್ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಿನ್ನೆ ರಾತ್ರಿ ಸಬ್ ರಿಜಿಸ್ಟರ್ ಕಚೇರಿ ಬಳಿ ಮಂಜುನಾರ್​ನಿಂದ 13 ಸಾವಿರ ಲಂಚ ಪಡೆಯುವಾಗ ಪರಮೇಶ್ವರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅರೋಪಿಯಿಂದ 40 ಸಾವಿರ ನಗದು ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್​ಪಿ, ಎಂಎಸ್ ಕೌಲಾಪುರೆ, ಇನ್ಸ್ಪೆಕ್ಟರ್ ರಾಷ್ಟ್ರಪತಿ ಎಚ್ ಎಸ್, ಅಂಜನೇಯ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಇದನ್ನೂ ಓದಿ: ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಹತ್ಯೆ; ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ

ಕುಡಿಯುವ ನೀರಿಗಾಗಿ ನದಿಗೆ ಇಳಿದಿದ್ದ ಬಾಲಕನನ್ನ ಹೊತ್ತೊಯ್ದ ಮೊಸಳೆ

ರಾಯಚೂರು: ಕುಡಿಯುವ ನೀರಿಗಾಗಿ ನದಿಗೆ ಇಳಿದಿದ್ದ ಬಾಲಕನನ್ನ ಮೊಸಳೆ ಹೊತ್ತೊಯ್ದ ಘಟನೆ ತಾಲೂಕಿನ ಕುರವಕಲಾ ಗ್ರಾಮದಲ್ಲಿ ನಡೆದಿದೆ. ನವೀನ್​(9) ಮೃತ ಬಾಲಕ. ಪೋಷಕರ ಜತೆ ನದಿ ಬಳಿ ಇರುವ ಜಮೀನಿಗೆ ನವೀನ್ ತೆರಳಿದ್ದ. ಈ ವೇಳೆ ಪೋಷಕರು ನದಿಗೆ ಹೋಗಿ ಕುಡಿಯಲು ನೀರು ತರಲು ಹೇಳಿದ್ದರು. ಕುಡಿಯುವ ನೀರಿಗಾಗಿ ನದಿಗೆ ತೆರಳಿದ್ದ ನವೀನ್ ಹಾಗೂ ಮತ್ತೊಬ್ಬ ಬಾಲಕ, ಬಾಟಲಿಗೆ ನೀರು ತುಂಬಿಸಲು ಮುಂದಾಗಿದ್ದಾರೆ. ಇದೇ ಸಂದರ್ಭದಲ್ಲಿ ನವೀನನ​ ಮೇಲೆ ಮೊಸಳೆ ದಾಳಿ ಮಾಡಿದ್ದು, ಹೊತ್ತೊಯ್ದಿದೆ. ನವೀನ್​ ಜತೆ ಇದ್ದ ಮತ್ತೊಬ್ಬ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಬಾಲಕ ನವೀನ್​ಗಾಗಿ ಕೃಷ್ಣಾ ನದಿಯಲ್ಲಿ ಶೋಧ ಕಾರ್ಯ ಆರಂಭವಾಗಿದ್ದು, ಯಾಪಲದಿನ್ನಿ ಪೊಲೀಸರು, ಅಗ್ನಿಶಾಮಕ ದಳ ಜೊತೆ ಸ್ಥಳೀಯರಿಂದ ಕಾರ್ಯಾಚರಣೆ. ನಡೆಸಿದ್ದಾರೆ. ಈ ಕುರಿತು ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ