ದಾವಣಗೆರೆ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madalu Veerupakshappa) ಮನೆ ಮೇಲೆ ದಾಳಿ ಮಾಡಿಸಿದ್ದೇ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೊಸ ಬಾಂಬ್ ಎಸೆದಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿ.ಎಂ.ಸಿದ್ದೇಶ್ವರ್ ದಾಳಿ ಮಾಡಿಸಿದ್ದು ಎಂದು ನಮ್ಮ ಪಕ್ಷದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಇಷ್ಟಕ್ಕೂ ಅವರ ಪಕ್ಷದ ವ್ಯವಹಾರ ನಮಗೆ ಯಾಕೆ ಎಂದು ಶಿವಶಂಕರಪ್ಪ ಹೇಳಿದ್ದಾರೆ. ಮಾಡಾಳ್ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರ ದಾಳಿ ನಿನ್ನೆ (ಮಾ.3) ಮುಕ್ತಾಯವಾಗಿದ್ದು, ಶಾಸಕರ ಮನೆಯಲ್ಲಿ ಬರೋಬ್ಬರಿ 2,800 ಗ್ರಾಂ ಚಿನ್ನಾಭರಣ, 20 ಕೆ.ಜಿ ಬೆಳ್ಳಿ ಆಭರಣಗಳು, 16.5 ಲಕ್ಷ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ಸತತ 10 ಗಂಟೆ ಕಾಲ ಪರಿಶೀಲನೆ ಮಾಡಿದ್ದಾರೆ.
ಲೋಕಾಯುಕ್ತ ಕೇಸ್ ನಡುವೆಯೂ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್‌ನಿಂದ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಮಾಧ್ಯಮಗಳ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸದಂತೆ ನಿರ್ಬಂಧ ಹೇರುವಂತೆ ಮನವಿ ಮಾಡಿದ್ದಾರೆ. ಈ ಕುರಿತಾಗಿ ಬೆಂಗಳೂರಿನ ಸಿವಿಲ್ ಕೋರ್ಟ್ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿದೆ. ಲಂಚ ಸ್ವೀಕಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಶಾಸಕ ಮಾಡಾಳ್ ವಿರೂಪಾಕ್ಷ ಸೇರಿದಂತೆ ಮತ್ತಿತರರ ವಿರುದ್ಧ ಎಫ್ಐಆರ್ (FIR) ದಾಖಲಿಸಿದ್ದಾರೆ.
ಇದನ್ನೂ ಓದಿ: KSDL: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ 800 ಕೋಟಿ ಅವ್ಯವಹಾರ ಆರೋಪ
ಶ್ರೇಯಸ್ ಕಶ್ಯಪ್ ನೀಡಿದ್ದ ದೂರಿನ ಅನ್ವಯ ದಾಖಲಾದ ಎಫ್ಐಆರ್ನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಎ1 (ಮೊದಲ ಆರೋಪಿ) ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2 (2ನೇ ಆರೋಪಿ), ಕೆಎಸ್ಡಿಎಲ್ ಅಕೌಂಟೆಂಟ್ ಸುರೇಂದ್ರ ಎ3, ಮಾಡಾಳ್ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾನೆ. ಆಧಾರಿಸಿ ಈ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಸಿಕ್ಕಿತು ಕಂತೆ ಕಂತೆ ಹಣ, ಚಿನ್ನ
ಕೆಎಸ್ಡಿಎಲ್ ನಿಯಮ ಗಾಳಿಗೆ ತೂರಿ 800 ಕೋಟಿ ರೂಪಾಯಿಗೂ ಅಧಿಕ ವೆಚ್ಚದ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಿದ ಆರೋಪ ಸಂಬಂಧ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ KSDL ನೌಕರರ ಒಕ್ಕೂಟವು ಫೆಬ್ರವರಿ 21ರಂದೇ ಲೋಕಾಯುಕ್ತ ಕಚೇರಿಗೆ ದೂರು ನೀಡಿದೆ. ಟೆಂಡರ್ದಾರರು ಸಾಮಾಗ್ರಿ ದರ ಶೇಕಡಾ 2ರಿಂದ 3ರಷ್ಟು ಹೆಚ್ಚಳಕ್ಕೆ ಅವಕಾಶವಿದೆ, ಆದರೆ ಕಚ್ಚಾ ಸಾಮಗ್ರಿ ದರ ಶೇ.70, 83, 140ರಷ್ಟು ಹೆಚ್ಚಿಸಿದ್ದರು. ಹೀಗಿದ್ದರೂ ಕಚ್ಚಾ ಸಾಮಗ್ರಿ ದರ ಹೆಚ್ಚಳದ ಬಗ್ಗೆ ನೆಗೋಸಿಯೇಷನ್ ಕಮಿಟಿ, ಫೈನಾನ್ಸ್ ಕಮಿಟಿ ಕ್ರಮ ವಹಿಸಿಲ್ಲವೆಂದು ಲೋಕಾಯುಕ್ತರಿಗೆ ದೂರು ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:19 pm, Sat, 4 March 23