ನಿಯಂತ್ರಣ ತಪ್ಪಿ ಲಾರಿ ಪಲ್ಟಿ, ಚಾಲಕನಿಗೆ ಗಾಯ

|

Updated on: Feb 06, 2020 | 10:47 AM

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ದಾವಣಗೆರೆ ಬಳಿಯ ಆಂಜನೇಯ ಮಿಲ್‌ ಬಳಿ ನಡೆದಿದೆ. ಮೈಸೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಪೇಂಟಿಂಗ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿಪಲ್ಟಿಯಾಗಿದೆ. ಈ ಪರಿಣಾಮ ಲಾರಿಯಲ್ಲಿದ್ದ ಪೇಂಟಿಂಗ್ ರಸ್ತೆ ತುಂಬೆಲ್ಲ ಹರಡಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಯಂತ್ರಣ ತಪ್ಪಿ ಲಾರಿ ಪಲ್ಟಿ, ಚಾಲಕನಿಗೆ ಗಾಯ
Follow us on

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ದಾವಣಗೆರೆ ಬಳಿಯ ಆಂಜನೇಯ ಮಿಲ್‌ ಬಳಿ ನಡೆದಿದೆ. ಮೈಸೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಪೇಂಟಿಂಗ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿಪಲ್ಟಿಯಾಗಿದೆ.

ಈ ಪರಿಣಾಮ ಲಾರಿಯಲ್ಲಿದ್ದ ಪೇಂಟಿಂಗ್ ರಸ್ತೆ ತುಂಬೆಲ್ಲ ಹರಡಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.