AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಚರ್ಚೆ‌; ದಿಢೀರ್ ಕಾರ್ಯಕರ್ತರ ಸಭೆ ಕರೆದ ಮಾಡಾಳ್ ವಿರೂಪಾಕ್ಷ ಪುತ್ರ ಮಲ್ಲಿಕಾರ್ಜುನ

ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಜೋರಾಗಿದ್ದು, ಲಂಚ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಬಿಜೆಪಿ ಕಾರ್ಯಕರ್ತರು ಹಾಗೂ ಆಪ್ತರ ಜತೆ ಸೋಮವಾರ ಸಂಜೆ ಸಭೆ ನಡೆಸಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಚರ್ಚೆ‌; ದಿಢೀರ್ ಕಾರ್ಯಕರ್ತರ ಸಭೆ ಕರೆದ ಮಾಡಾಳ್ ವಿರೂಪಾಕ್ಷ ಪುತ್ರ ಮಲ್ಲಿಕಾರ್ಜುನ
ಮಾಡಾಳ್ ವಿರೂಪಾಕ್ಷಪ್ಪImage Credit source: vijaykarnataka.com
ಗಣಪತಿ ಶರ್ಮಾ
|

Updated on: Apr 03, 2023 | 9:25 PM

Share

ಮುಖ್ಯಾಂಶಗಳು

  • ಬಿಜೆಪಿಯಲ್ಲಿ ಹೆಚ್ಚಾದ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ.
  • ಬಿಜೆಪಿ ಕಾರ್ಯಕರ್ತರು ಹಾಗೂ ಆಪ್ತರ ಜತೆ ಸಭೆ ನಡೆಸಿದ ಮಾಡಾಳ್ ಮಲ್ಲಿಕಾರ್ಜುನ.
  • ಬಿಜೆಪಿ ಹೈಕಮಾಂಡ್​ ಮೇಲೆ ಒತ್ತಡ ಹೇರಲು ಸಭೆಯಲ್ಲಿ ತೀರ್ಮಾನ.

ದಾವಣಗೆರೆ: ಬಿಜೆಪಿಯಲ್ಲಿ (BJP) ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಜೋರಾಗಿದ್ದು, ಲಂಚ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಪುತ್ರ ಮಾಡಾಳ್ ಮಲ್ಲಿಕಾರ್ಜುನ ಬಿಜೆಪಿ ಕಾರ್ಯಕರ್ತರು ಹಾಗೂ ಆಪ್ತರ ಜತೆ ಸೋಮವಾರ ಸಂಜೆ ಸಭೆ ನಡೆಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ವಿರೂಪಾಕ್ಷಪ್ಪ ಸದ್ಯ ಪರಪ್ಪನ ಅಗ್ರಹಾರ ಸೆಂಟ್ರಲ್​ ಜೈಲಿನಲ್ಲಿದ್ದಾರೆ. ಈ ಮಧ್ಯೆ ಅವರ ಹಿರಿಯ ಮಗ ಮಲ್ಲಿಕಾರ್ಜುನಗೆ ಟಿಕೆಟ್ ನೀಡುವಂತೆ ಒತ್ತಡ ಹೇರುವುದಕ್ಕಾಗಿ ಸಭೆ ನಡೆಸಲಾಗಿದೆ ಎನ್ನಲಾಗಿದೆ. ಚನ್ನಗಿರಿ ತಾಲೂಕು ಬಿಜೆಪಿ ಕಚೇರಿಯಲ್ಲೇ ಮಲ್ಲಿಕಾರ್ಜುನ ಆಪ್ತರ ಸಭೆ ನಡೆಸಿದ್ದಾರೆ.

ಬಿಜೆಪಿ ಹೈಕಮಾಂಡ್​ ಮೇಲೆ ಒತ್ತಡ ಹೇರಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ತಂದೆಯ ಅನುಪಸ್ಥಿತಿಯಲ್ಲಿ ಪಕ್ಷದಲ್ಲಿ ಹಿಡಿತ ಸಾಧಿಸಲು ಮಲ್ಲಿಕಾರ್ಜುನ ಯತ್ನಿಸುತ್ತಿದ್ದಾರೆ ಎಂಬ ಮಾತು ಪಕ್ಷದ ಆಂತರಿಕ ವಲಯದಲ್ಲಿ ಕೇಳಿಬಂದಿದೆ. ಇನ್ನೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಚನ್ನಗಿರಿ ಕ್ಷೇತ್ರದ ಪ್ರಮುಖ ಮುಖಂಡರನ್ನು ಕರೆದು ಸಭೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ

ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶಿಸಿತ್ತು. ಅದರ ಬೆನ್ನಲ್ಲೇ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಜೈಲುಪಾಲಾಗಿರುವ ಮಾಡಾಳ್ ವಿರೂಪಾಕ್ಷಪ್ಪಗೆ ಪಕ್ಷ ಟಿಕೆಟ್ ನೀಡಲಾರದು ಎಂಬುದು ಬಹುತೇಕ ಖಚಿತವಾಗಿದೆ. ಹೀಗಾಗಿ ಮಲ್ಲಿಕಾರ್ಜುನ ಅವರು ಟಿಕೆಟ್​ ಪಡೆಯಲು ಒತ್ತಡ ಹೇರುವ ತಂತ್ರ ಅನುಸರಿಸುತ್ತಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ

ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಂಗಳವಾರ ಮತ್ತು ಬುಧವಾರ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಭೆ ನಡೆಸಲಿದೆ. ರಾಜ್ಯ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿ ಶಿಫಾರಸು ಮಾಡಲಿದೆ. ಸಭೆಯಲ್ಲಿ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಬಿಜೆಪಿ ರಾಜ್ಯ ಉಸ್ತುವಾರಿಯಾಗಿರುವ ಅರುಣ್ ಸಿಂಗ್, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಡಿವಿ ಸದಾನಂದ ಗೌಡ, ಜಗದೀಶ್ ಶೆಟ್ಟರ್ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್