AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಜಪಾನ್ ಮಿಯಾ ವಾಕಿ ಮಾದರಿಯಲ್ಲಿ ಹಸಿರು ಬೆಳೆಸಲು ಮುಂದಾದ ಮಹಾನಗರ ಪಾಲಿಕೆ

Davanagere: ನಗರದ ಶಾಮನೂರ ಬಳಿಯ ಡಾಲರ್ಸ್ ಕಾಲೋನಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಮಹಾನಗರ ಪಾಲಿಕೆ ಮೇಯರ್ ಎಸ್.ಟಿ ವೀರೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ದಾವಣಗೆರೆ: ಜಪಾನ್ ಮಿಯಾ ವಾಕಿ ಮಾದರಿಯಲ್ಲಿ ಹಸಿರು ಬೆಳೆಸಲು ಮುಂದಾದ ಮಹಾನಗರ ಪಾಲಿಕೆ
ದಾವಣಗೆರೆಯಲ್ಲಿ ನೂತನ ಯೋಜನೆ
TV9 Web
| Updated By: ganapathi bhat|

Updated on:Aug 09, 2021 | 7:30 PM

Share

ದಾವಣಗೆರೆ: ಹಸಿರು ಬೆಳೆಸುವ ವಿಶಿಷ್ಟ ಕಾರ್ಯ ನಡೆಸಲು ದಾವಣಗೆರೆ ಮಹಾನಗರ ಪಾಲಿಕೆ ಮುಂದಾಗಿದೆ. ಜಿಲ್ಲೆಯಲ್ಲಿ ಹಸಿರು ಬೆಳೆಸುವ ಹೊಸ ಯೋಜನೆ, ದಾವಣಗೆರೆಯನ್ನು ಗ್ರೀನ್ ಸಿಟಿ ಮಾಡುವ ಯೋಚನೆ ರೂಪ ಪಡೆದಿದೆ. ಜಪಾನ್ ಮಿಯಾ ವಾಕಿ ಮಾದರಿಯಲ್ಲಿ ಮರ ಬೆಳೆಸಲು‌ ದಾವಣಗೆರೆ ಮಹಾನಗರ ಪಾಲಿಕೆ ಮುಂದಾಗಿದೆ. ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ 1000ಗಿಡ ನೆಡುವ ಕಾರ್ಯಕ್ರಮಕ್ಕೆ ಇಂದು (ಆಗಸ್ಟ್ 9) ಚಾಲನೆ ದೊರೆತಿದೆ.

ನಗರದ ಶಾಮನೂರ ಬಳಿಯ ಡಾಲರ್ಸ್ ಕಾಲೋನಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಮಹಾನಗರ ಪಾಲಿಕೆ ಮೇಯರ್ ಎಸ್.ಟಿ ವೀರೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಕ್ರೂಢೀಕೃತ ಅರಣ್ಯ ನಿರ್ಮಾಣಕ್ಕೆ ನಗರದಲ್ಲಿ 15 ಕಡೆ ಪಾಲಿಕೆ ಸ್ಥಳಗಳನ್ನು ನಿಗದಿ ಮಾಡಿದೆ. ನಗರವನ್ನ ಹಸಿರು ನಗರ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಯೋಜನೆಯ ಉದ್ದೇಶವನ್ನು ಮೇಯರ್ ಎಸ್.ಟಿ ವೀರೇಶ್ ಮಾಹಿತಿ ನೀಡಿದ್ದಾರೆ.

ಕೆಆರ್​ಎಸ್​ ಪಕ್ಷದ ಮೂರು ಕಾರ್ಯಕರ್ತರ ಬಂಧನ ಜಿಲ್ಲೆಯ ನಿಟುವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಗಲಭೆಗೆ ಪ್ರಚೋದನೆ ನೀಡಿ ಅದನ್ನು ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಇಟ್ಟು,ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೆಆರ್‌ಎಸ್‌ (ಕರ್ನಾಟಕ ರಾಷ್ಟ್ರೀಯ ಸಮಿತಿ) ಪಕ್ಷದ ಮೂವರು ಕಾರ್ಯಕರ್ತರನ್ನು ದಾವಣಗೆರೆ ಜಿಲ್ಲೆಯ ಕೆಟಿಜೆ ನಗರ ಪೊಲೀಸರು ನಿನ್ನೆ (ಆಗಸ್ಟ್ 8) ಬಂಧಿಸಿದ್ದಾರೆ.

ಎಚ್‌ಕೆಆರ್ ಸರ್ಕಲ್‌ನ ಮಾಲತೇಶ, ಶಶಿಕುಮಾರ ಹಾಗೂ ನಿಟುವಳ್ಳಿಯ ಅಭಿಷೇಕ್ ಬಂಧಿತರು. ನಿಟುವಳ್ಳಿ ಆರೋಗ್ಯ ಕೇಂದ್ರದ ಬಳಿ ಜುಲೈ 31 ರಂದು ಲಸಿಕೆ ಅಭಿಯಾನ ನಡೆಯುವ ವೇಳೆ ಆಸ್ಪತ್ರೆಯವರು ಭ್ರಷ್ಟರಿದ್ದಾರೆ ಒಳಗೆ ನುಗ್ಗಿ ನಾವು ಫೇಸ್‌ಬುಕ್‌ನಲ್ಲಿ ಲೈವ್ ಮಾಡುತ್ತೇವೆ ಎಂದು ಹೇಳಿ ವಿಡಿಯೋ ಮಾಡಿದ್ದರು. ಅಲ್ಲದೆ ಗಲಭೆಗೆ ಪ್ರಚೋದನೆ ನೀಡಿದ್ದರು. ಹೀಗಾಗಿ ಈ ಮೂವರನ್ನು ಠಾಣೆಗೆ ಕರೆತಂದ ಪೊಲೀಸರು ಪ್ರಕರಣ ದಾಖಲಿಸಿ ತಹಶೀಲ್ದಾರ್‌ಗೆ ವರದಿ ನೀಡಿದ್ದು, ವರದಿ ವಿಚಾರಣೆಯ ಹಂತದಲ್ಲಿದೆ.

ಇದನ್ನೂ ಓದಿ: ದಾವಣಗೆರೆ: ಅಜ್ಜಿ ಹಬ್ಬದ ವಿಶೇಷತೆ ಏನು? ಮಳೆಗಾಲದಲ್ಲಿಯೇ ಈ ಹಬ್ಬ ಆಚರಿಸಲು ಅನೇಕ ಕಾರಣಗಳಿವೆ

Davanagere: 4 ಜಾನುವಾರುಗಳನ್ನು ತಿಂದಿದ್ದ ಚಿರತೆಯನ್ನು ರೈತರೇ ಸೆರೆಹಿಡಿದರು!

(Mahanagara Palike Municipality of Davanagere inaugurates new project on Green City)

Published On - 5:39 pm, Mon, 9 August 21

ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ