AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ನಾಡಬಾಂಬ್ ಬಳಸಿ ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ವ್ಯಕ್ತಿಯ ಬಂಧನ

ದಾವಣಗೆರೆ ಜಿಲ್ಲೆಯನ್ಯಾಮತಿ ಶಾಖೆಯ ಹರಮಘಟ್ಟ ಅರಣ್ಯ ಪ್ರದೇಶದಲ್ಲಿ ನಾಡಬಾಂಬ್​​ಗಳನ್ನು ಕೋಳಿ ಹಾಗೂ ಕುರಿ ಮಾಂಸದಲ್ಲಿ‌ಟ್ಟು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಮುಂದಾಗಿದ್ದಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿ ಬಳಿ ಇದ್ದ 63 ಜೀವಂತ ನಾಡಬಾಂಬ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ: ನಾಡಬಾಂಬ್ ಬಳಸಿ ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ವ್ಯಕ್ತಿಯ ಬಂಧನ
ಆರೋಪಿ ಬಸವರಾಜಪ್ಪ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ|

Updated on: Feb 10, 2024 | 10:47 AM

Share

ದಾವಣಗೆರೆ, ಫೆಬ್ರವರಿ 10: ನಾಡಬಾಂಬ್ (Crude bomb)​​ ಬಳಸಿ ಕಾಡುಪ್ರಾಣಿಯನ್ನು ಬೇಟೆಯಾಡುತ್ತಿದ್ದವನನ್ನು ಪೊಲೀಸರು (Police) ಬಂಧಿಸಿದ್ದಾರೆ. ನ್ಯಾಮತಿ (Nyamati) ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ನಿವಾಸಿ ಬಸವರಾಜಪ್ಪ (42) ಬಂಧಿತ ಆರೋಪಿ, ಅಪ್ಪು (38) ಪರಾರಿಯಾಗಿದ್ದಾನೆ. ಆರೋಪಿ ಬಳಿ ಇದ್ದ 63 ಜೀವಂತ ನಾಡಬಾಂಬ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನ್ಯಾಮತಿ ಶಾಖೆಯ ಹರಮಘಟ್ಟ ಅರಣ್ಯ ಪ್ರದೇಶದಲ್ಲಿ (Haramaghatta Forest Area) ನಾಡಬಾಂಬ್​​ಗಳನ್ನು ಕೋಳಿ ಹಾಗೂ ಕುರಿ ಮಾಂಸದಲ್ಲಿ‌ಟ್ಟು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಮುಂದಾಗಿದ್ದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಸದ್ಯ ಪೊಲೀಸರು ಆರೋಪಿ ಬಸವರಾಜಪ್ಪನನ್ನು ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ವಶಪಡಿಸಿಕೊಂಡ ಜೀವಂತ ನಾಡ ಬಾಂಬ್​ಗಳನ್ನು ನಿಷ್ಕ್ರಿಯ ಗೊಳಿಸಲು ಚಿತ್ರದುರ್ಗ ಜಿಲ್ಲೆಯ ಡಿಎಸ್ ಹಳ್ಳಿ ಸ್ಪೋಟಕ ವಸ್ತು ಸಂಗ್ರಹಾಲಯಕ್ಕೆ ರವಾನೆ ಮಾಡಲಾಗಿದೆ.

ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ 13 ಹುಲ್ಲಿನ ಬಣವೆಗಳು ಸುಟ್ಟು ಕರಕಲು

ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ 13 ಹುಲ್ಲಿನ ಬಣವೆಗಳು ಸುಟ್ಟು ಕರಕಲಾಗಿದ್ದು, ‌ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಚನ್ನಗಿರಿ ತಾಲೂಕಿನ ಹರೋಸಾಗರ ಗ್ರಾಮದ ರೈತ ಪರಮೇಶ್ವರಪ್ಪ, ಬಸವರಾಜಪ್ಪ ಹಾಗೂ ರುದ್ರಪ್ಪ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗಳಿಗೆ ‌ಇಂದು (ಫೆ.10) ಬೆಳಿಗ್ಗೆ ಮೂರು ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಆಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬಸವಾ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ನಾಡಬಾಂಬ್​ ಸ್ಫೋಟಿಸಿ ಕಾಡುಹಂದಿ ಹತ್ಯೆ; ಕಾಂತಾರ ಸಿನಿಮಾ ನಂತರ ದೈವದ ಸ್ಥಾನ ಕೊಟ್ಟು ಸಾಕಿದ್ದ ಗ್ರಾಮಸ್ಥರ ಕಣ್ಣೀರು

ಬಾಚಣಕಿಯಲ್ಲಿ ಅನುಮಾನಸ್ಪದ ವಸ್ತು ಸ್ಫೋಟ

ಉತ್ತರ ಕನ್ನಡ: ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ಶುಕ್ರವಾರ (ಫೆ.09) ರಂದು ಅನುಮಾನಾಸ್ಪದ ವಸ್ತುವೊಂದು ಸ್ಫೋಟವಾಗಿತ್ತು. ಪರಿಣಾಮ ಕುರಿ ಕಾಯುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿತ್ತು. ಭರಮಪ್ಪ ಎನ್ನುವ ವ್ಯಕ್ತಿ ಕುರಿ ಮೇಯಿಸಲು ಬಾಚಣಕಿಯ ಕೆರೆ ಬಳಿ ಹೋಗಿದ್ದರು. ಈ ವೇಳೆ ಹೊಳಪಿರುವ ಒಂದು ವಸ್ತುವೊಂದು ಕಂಡಿದ್ದು,. ಕೂಡಲೇ ಭರಮಪ್ಪ, ಆ ಹೊಳಪಿನ ವಸ್ತುವನ್ನು ಕೈಯಿಂದ ಹಿಚುಕಿದ್ದಾರೆ. ಈ ವೇಳೆ ಏಕಾಏಕಿ ವಸ್ತು ಸ್ಫೋಟಗೊಂಡಿತ್ತು. ಇದರಿಂದ ಭರಮಪ್ಪ ಅವರ ಎಡಗೈನ ಎರಡು ಬೆರಳುಗಳು ಕಟ್​ ಆಗಿದ್ದವು. ಕಾಡುಪ್ರಾಣಿಗಳ ಬೇಟೆಗೆ ನಾಡಬಾಂಬ್ ಇಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ಯ ಭರಮಪ್ಪನನ್ನು ಮುಂಡಗೋಡಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ದುಷ್ಕರ್ಮಿಗಳು ಕಾಡುಪ್ರಾಣಿಗಳ ಬೇಟೆಗೆ ನಾಡಬಾಂಬ್ ಇಟ್ಟಿರಬಹುದು ಎನ್ನುವ ಸಂಶಯವಾಗಿದ್ದು, ಈ ಬಗ್ಗೆ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ