ಮೈಲಿಗಲ್ಲಿಗೆ ದಿಬ್ಬಣದ ಲಾರಿ ಡಿಕ್ಕಿ, 3 ಮಹಿಳೆಯರ ಸಾವು
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಮೈಲಿಗಲ್ಲಿಗೆ ದಿಬ್ಬಣದ ಲಾರಿ ಡಿಕ್ಕಿ ಹೊಡೆದು 3 ಮಹಿಳೆಯರು ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಮಾವಿಕಟ್ಟೆ ಗ್ರಾಮದ ಬಳಿ ನಡೆದಿದೆ. ದಿಬ್ಬಣದ ಲಾರಿ ಮೈಲಿಗಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆಂಧ್ರಪ್ರದೇಶದ ಹುಡುಗನ ಜೊತೆ ಶಿವಮೊಗ್ಗ ಹುಡುಗಿಯ ವಿವಾಹವಿತ್ತು. ಹೀಗಾಗಿ ಆಂಧ್ರಪ್ರದೇಶದದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಮೈಲಿಗಲ್ಲಿಗೆ ದಿಬ್ಬಣದ ಲಾರಿ ಡಿಕ್ಕಿ ಹೊಡೆದು 3 ಮಹಿಳೆಯರು ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಮಾವಿಕಟ್ಟೆ ಗ್ರಾಮದ ಬಳಿ ನಡೆದಿದೆ. ದಿಬ್ಬಣದ ಲಾರಿ ಮೈಲಿಗಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿಯಾಗಿದೆ.
ಘಟನೆಯಲ್ಲಿ 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆಂಧ್ರಪ್ರದೇಶದ ಹುಡುಗನ ಜೊತೆ ಶಿವಮೊಗ್ಗ ಹುಡುಗಿಯ ವಿವಾಹವಿತ್ತು. ಹೀಗಾಗಿ ಆಂಧ್ರಪ್ರದೇಶದದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.