AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್ ಬಿಟ್ಟುಕೊಡದಿದ್ದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತೆ, ಶಾಮನೂರು ಶಿವಶಂಕರಪ್ಪ ಅಧೀನದ ಮೆಡಿಕಲ್ ಕಾಲೇಜುಗಳಿಗೆ ಸುಧಾಕರ್ ಖಡಕ್ ಸೂಚನೆ

ದಾವಣಗೆರೆಯ ಶಾಸಕ ಶಾಮನೂರ ಶಿವಶಂಕರಪ್ಪ ಕುಟುಂಬದ ಅಧೀನದಲ್ಲಿ ಇರುವ ಬಾಪೂಜಿ, ಎಸ್.ಎಸ್.ಮೆಡಿಕಲ್ ಕಾಲೇಜುಗಳು ನಿಯಮಾನುಸಾರ ಶೇಕಡಾ 75ರಷ್ಟು ಬೆಡ್‌ಗಳನ್ನು ಜಿಲ್ಲಾಡಳಿತಕ್ಕೆ ನೀಡುತ್ತಿಲ್ಲ. ಹೀಗಾಗಿ ಆರೋಗ್ಯ ಸಚಿವ ಡಾ ಕೆ.ಸುಧಾಕರ ಗರಂ ಆಗಿದ್ದು ಆದಷ್ಟು ಬೇಗ ಬೆಡ್ಗಳನ್ನು ಬಿಟ್ಟುಕೊಡಬೇಕು ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಡ್ ಬಿಟ್ಟುಕೊಡದಿದ್ದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತೆ, ಶಾಮನೂರು ಶಿವಶಂಕರಪ್ಪ ಅಧೀನದ ಮೆಡಿಕಲ್ ಕಾಲೇಜುಗಳಿಗೆ ಸುಧಾಕರ್ ಖಡಕ್ ಸೂಚನೆ
ಆರೋಗ್ಯ ಸಚಿವ ಕೆ.ಸುಧಾಕರ್
ಆಯೇಷಾ ಬಾನು
ಆಯೇಷಾ ಬಾನು|

Updated on: May 21, 2021 | 2:12 PM

Share

ದಾವಣಗೆರೆ: ಜಿಲ್ಲೆಯ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಅಧೀನದ 2 ಮೆಡಿಕಲ್ ಕಾಲೇಜುಗಳು ನಿಯಮಾನುಸಾರ ಶೇಕಡಾ 75ರಷ್ಟು ಬೆಡ್‌ಗಳನ್ನು ನೀಡಿಲ್ಲ. ಜಿಲ್ಲಾಡಳಿತಕ್ಕೆ ಬೆಡ್ ಬಿಟ್ಟುಕೊಡದಿದ್ದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತೆ ಎಂದು ದಾವಣಗೆರೆಯಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯ ಶಾಸಕ ಶಾಮನೂರ ಶಿವಶಂಕರಪ್ಪ ಕುಟುಂಬದ ಅಧೀನದಲ್ಲಿ ಇರುವ ಬಾಪೂಜಿ, ಎಸ್.ಎಸ್.ಮೆಡಿಕಲ್ ಕಾಲೇಜುಗಳು ನಿಯಮಾನುಸಾರ ಶೇಕಡಾ 75ರಷ್ಟು ಬೆಡ್‌ಗಳನ್ನು ಜಿಲ್ಲಾಡಳಿತಕ್ಕೆ ನೀಡುತ್ತಿಲ್ಲ. ಹೀಗಾಗಿ ಆರೋಗ್ಯ ಸಚಿವ ಡಾ ಕೆ.ಸುಧಾಕರ ಗರಂ ಆಗಿದ್ದು ಆದಷ್ಟು ಬೇಗ ಬೆಡ್ಗಳನ್ನು ಬಿಟ್ಟುಕೊಡಬೇಕು ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

2 ಮೆಡಿಕಲ್ ಕಾಲೇಜುಗಳಿಂದ ಕೇವಲ 91 ಬೆಡ್ ನೀಡಲಾಗಿದೆ. ಆದರೆ ರಾಜ್ಯದ ಬೇರೆ ಯಾವುದೇ ಮೆಡಿಕಲ್ ಕಾಲೇಜು ಹೀಗೆ ಮಾಡಿಲ್ಲ. ಹೀಗಾಘಿ ನಿಮಗ್ಯಾಕೆ ಪ್ರತ್ಯೇಕ ವ್ಯವಸ್ಥೆ ಎಂದು ಡಾ.ಸುಧಾಕರ್ ಪ್ರಶ್ನೆ ಮಾಡಿದ್ದಾರೆ. ರಾಜಕೀಯ ಹಿನ್ನೆಲೆ ಇದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೀಗೆ ಮಾಡಬಾರದು. ರಾಜ್ಯ ಪ್ರತಿಷ್ಠಿತ ಮಠಾಧೀಶರು ನಡೆಸುವ ಮೆಡಿಕಲ್ ಕಾಲೇಜ್ ನಲ್ಲಿ ಶೇಖಡಾ 75 ಬೆಡ್ ನೀಡಿದ್ದಾರೆ‌. ಆದ್ರೆ ಶಾಮನೂರ ಶಿವಶಂಕರಪ್ಪ ಕೊಟ್ಟಿಲ್ಲ ಅಂದ್ರೆ ಹೇಗೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಸಂಘರ್ಷ ಬೇಡ. ಸರ್ಕಾರದ ಆದೇಶದನ್ವಯ ಜಿಲ್ಲಾಡಳಿತಕ್ಕೆ ಬೆಡ್ ನೀಡಿ ಎಂದು 2 ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರಿಗೆ ಸಚಿವ ಸುಧಾಕರ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ, ಬ್ಲಾಕ್ ಫಂಗಸ್ ಮುನ್ನೆಚ್ಚರಿಕಾ ಕ್ರಮಗಳ ಪರಿಶೀಲನೆಗಾಗಿ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡ ಸಚಿವ ಸುಧಾಕರ್

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ