AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ನಾಪತ್ತೆ ಕೇಸ್​: ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿರುವ ಕುರುಹು ಪತ್ತೆ

ಎಂ.ಪಿ.ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕಣಕ್ಕೆ ಸಂಬಂಧಿಸಿದಂತೆ ಒಂದು ಸ್ಫೋಟಕ ಕುರುಹು ಸಿಕ್ಕಿದೆ,

ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ನಾಪತ್ತೆ ಕೇಸ್​: ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿರುವ ಕುರುಹು ಪತ್ತೆ
MP Renukacharya Son chandrashekhar
TV9 Web
| Edited By: |

Updated on:Nov 03, 2022 | 4:47 PM

Share

ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕಣಕ್ಕೆ ಸಂಬಂಧಿಸಿದಂತೆ ಐದು ದಿನಗಳ ಬಳಿಕ ಕುರುಹು ಪತ್ತೆಯಾಗಿದೆ. ಚಂದ್ರಶೇಖರ್ ತೆಗೆದುಕೊಂಡು ಹೋಗಿದ್ದ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಚಂದ್ರಶೇಖರ್​​ ಇದ್ದ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ತುಂಗಾ ಕಾಲುವೆಗೆ ಕಾರು ಬಿದ್ದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯ ಹಾಗೂ ಪೊಲೀಸರು ಸೇರಿದಂತೆ ನೂರಾರು ಜನ ಕಾಲವೆ ಬಳಿ ಜಮಾಯಿಸಿದ್ದಾರೆ.

ಚಂದ್ರು ತೆಗೆದುಕೊಂಡು ಹೋಗಿದ್ದ KA 17 MA 2534 ನಂಬರಿನ ವೈಟ್ ಕ್ರೇಟಾ ಕಾರು ಭಾನುವಾರ ಮಧ್ಯರಾತ್ರಿ ಶಿವಮೊಗ್ಗದಿಂದ ಸುರಹೊನ್ನೆ ಬಳಿ ಪಾಸ್ ಆಗಿತ್ತು. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸುರಹೊನ್ನೆ ಬಳಿ ಪಾಸ್ ಆಗೋ ವಿಡಿಯೋ ಮಾತ್ರ ಲಭ್ಯವಾಗಿದೆ. ಆದರೆ ಸುರಹೊನ್ನೆಯಿಂದ ಹೊನ್ನಾಳಿಗೆ ಬಂದ ಬಗ್ಗೆ ಸುಳಿವಿಲ್ಲ. ಸುರಹೊನ್ನೆಯಿಂದ ಹೊನ್ನಾಳಿಗೆ ಬಂದ ಬಗ್ಗೆ ಯಾವುದೇ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿಲ್ಲ. ಇದೀಗ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವುದು ತಿಳಿದುಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಗ ಚಂದ್ರಶೇಖರ್​ಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧ: ಸೂಕ್ಷ್ಮವಾಗಿ ಬಹುಮಾನ ನೀಡುವೆ ಎಂದ ರೇಣುಕಾಚಾರ್ಯ

ಭಾನುವಾರದಿಂದ ನಾಪತ್ತೆಯಾಗಿದ್ದ ಚಂದ್ರಶೇಖರ್

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್ ಭಾನುವಾರ ರಾತ್ರಿ 11.30 ರಿಂದ ನಾಪತ್ತೆಯಾಗಿದ್ದು ಇದುವರೆಗೂ ಕೂಡ ಯಾವುದೇ ಸುಳಿವು ಸಿಗುತ್ತಿಲ್ಲ.. ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ವಾಪಸ್ ಆಗಿದ್ದ. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿದ್ದಾನೆ‌. 11.30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಲ್ಲಿಂದ ಇಲ್ಲಿಯವರೆಗೆ ಸಿಗ್ನಲ್ ಟ್ರೇಸ್ ಆಗಿಲ್ಲ. ಅಲ್ಲದೆ ಶಿವಮೊಗ್ಗ ದಿಂದ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಗೆ ಬಂದ ಸಿಸಿ ಕ್ಯಾಮರಾ ಪುಟೇಜ್ ಮಾತ್ರ ಸಿಕ್ಕಿದೆ.. ಆದರೆ ಸುರಹೊನ್ನೆಯಿಂದ ಹೊನ್ನಾಳಿ ಗೆ ಬಂದ ಮಾಹಿತಿ ಸಿಗುತ್ತಿಲ್ಲ.. ಆದರೆ ಚಂದ್ರಶೇಖರ್ ಮೊಬೈಲ್ ಮಾತ್ರ ಹೊನ್ನಾಳಿ ಪಟ್ಟಣದ ಸರ್ಕಲ್ ನಲ್ಲಿ ಸ್ವಿಚ್ ಆಫ್ ಆಗಿದೆ..

ಇನ್ನು ಶಾಸಕ ರೇಣುಕಾಚಾರ್ಯ ಮಾತ್ರ ಮಗನನ್ನು ನೆನೆದು ಗಳಗಳನೆ ಅಳುತ್ತಿದ್ದಾರೆ.. ಬೆಳಗ್ಗೆಯಿಂದ ರೇಣುಕಾಚಾರ್ಯ ಆಪ್ತರು ಸಂಬಂಧಿಕರು ಹಾಗೂ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳು ಧೈರ್ಯವನ್ನು ತುಂಬುತ್ತಿದ್ದಾರೆ. ಅಲ್ಲದೆ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ, ಈಶ್ವರಪ್ಪ ಸೇರಿದಂತೆ ಹಲವು ಮುಖಂಡರು ಕರೆ ಮಾಡಿ ದೈರ್ಯ ತುಂಬಿದ್ದಾರೆ.

Published On - 4:37 pm, Thu, 3 November 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!